ನ್ಯೂಸ್

ನಾಂದೇಡ್​ ಸರ್ಕಾರಿ ಆಸ್ಪತ್ರೆ ದುರಂತ; ಮೃತರ ಸಂಖ್ಯೆ 31ಕ್ಕೆ ಏರಿಕೆ

ಮುಂಬೈ: ಮಹಾರಾಷ್ಟ್ರದ ನಾಂದೇಡ್​ ಸರ್ಕಾರಿ ಆಸ್ಪತ್ರೆಯ ದುರಂತಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ನಾಲ್ವರು ಮಕ್ಕಳು ಸೇರಿದಂತೆ ಮೂವರು ವಯಸ್ಕರು ಮಂಗಳವಾರ ನಸುಕಿನ ಜಾವ ಅಸುನೀಗಿದ್ಧಾರೆ.

ಔಷಧಿ ಹಾಗು ಸಿಬ್ಬಂದಿಯ ಕೊರತೆಯಿಂದಾಗಿ ಸೋಮವಾರ 24 ಮಂದಿ ಮೃತಪಟ್ಟಿದ್ದರು.  ಗಂಡು ಮತ್ತು ಆರು ಹೆಣ್ಣು ಶಿಶುಗಳು ಸಾವನ್ನಪ್ಪಿವೆ. ಹನ್ನೆರಡು ವಯಸ್ಕರು ವಿವಿಧ ಕಾಯಿಲೆಗಳಿಂದ ಮೃತಪಟ್ಟಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ನಾಂದೇಡ್​ ಸರ್ಕಾರಿ ಮೆಡಿಕಲ್​ ಕಾಲೇಜಿನ ಡೀನ್​ ಡಾ. ಶ್ಯಾಮ್​ರಾವ್​ ವಾಕೋಡೆ, ಮೃತ ಪೈಕಿ 12 ನವಜಾತ ಶಿಶುಗಳು, ನಾಲ್ಕು ಮಕ್ಕಳು ಹಾಗೂ 708-80 ವರ್ಷ ವಯಸ್ಸಿನವರೇ ಹೆಚ್ಚಿನ ಜನರಿದ್ದಾರೆ. ಆಸ್ಪತ್ರೆಯಲ್ಲಿ ಔಷಧಿ ಹಾಗೂ ವೈದ್ಯಕೀಯ ಸಿಬ್ಬಂದಿಯ ಕೊರತೆಯಿಂದಾಗಿ ಸಾವು ಸಂಭವಿಸಿಲ್ಲ. ಚಿಕಿತ್ಸೆಗೆ ಸ್ಪಂದಿಸದ ಕಾರಣ ಸಾವು ಸಂಭವಿಸಿದೆ ಎಂದು ತಿಳಿಸಿದ್ಧಾರೆ.

ನಾಂದೇಡ್​ ಸರ್ಕಾರಿ ಆಸ್ಪತ್ರೆಯ ದುರಂತದ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ, ಪ್ರಚಾರಕ್ಕಾಗಿ ಸಾವಿರಾರು ಕೋಟಿ ರೂಪಾಯಿ ಹಣ ಖರ್ಚು ಮಾಡುವ ಬಿಜೆಪಿ ಮಕ್ಕಳ ಔಷಧಿ ಖರೀದಿಸಲು ಅದರ ಬಳಿ ಹಣವಿಲ್ಲವೇ. ಬಿಜೆಪಿಯ ದೃಷ್ಟಿಯಲ್ಲಿ ಬಡವರ ಪ್ರಾಣಕ್ಕೆ ಬೆಲೆ ಇಲ್ಲಂದಾತಗಿದೆ ಎಂದು ಕಿಡಿಕಾರಿದ್ದಾರೆ.