ತರೀಕೆರೆಯಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಡಿ.ಎಸ್.ಸುರೇಶ್, ಎಸ್.ಎಂ.ನಾಗರಾಜ್, ಕೆ.ಆರ್.ಆನಂದಪ್ಪ, ಕೆ.ಆರ್.ಧ್ರುವಕುಮಾರ್, ಎಂ.ನರೇಂದ್ರ, ಗರಗದಹಳ್ಳಿ ಪ್ರತಾಪ್, ಟಿ.ಎಲ್.ರಮೇಶ್ ಇತರರಿದ್ದರು. 
ನ್ಯೂಸ್

ನರೇಂದ್ರ ಮೋದಿ ಕಾರ್ಯಗಳಿಗೆ ಜನ ಬೆಂಬಲ

ಜಿ. ಗಜೇಂದ್ರ

ತರೀಕೆರೆ: ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಬುಧವಾರ ಪಟ್ಟಣದಲ್ಲಿ ವಿಜಯೋತ್ಸವ ಆಚರಿಸಿದರು.
ಬಿಜೆಪಿ ಕಚೇರಿಯಿಂದ ಮೆರವಣಿಗೆ ಹೊರಟ ಕಾರ್ಯಕರ್ತರು ಮಹಾತ್ಮ ಗಾಂಧಿ ವೃತ್ತದ ಬಳಿ ಜಮಾಯಿಸಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಮಾಜಿ ಶಾಸಕ ಡಿ.ಎಸ್.ಸುರೇಶ್ ಮಾತನಾಡಿ, ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದರೂ ಬಿಜೆಪಿ 20 ಸಾವಿರಕ್ಕೂ ಅಧಿಕ ಮತ ಗಳಿಸಿದೆ. ಈ ಲಿತಾಂಶ ಬಿಜೆಪಿ ಬಲ ಕುಗ್ಗಿಲ್ಲ ಎಂಬುದನ್ನು ತೋರಿಸಿದೆ ಎಂದರು.
ಕಾಂಗ್ರೆಸ್ ಸರ್ಕಾರದ ಒಂದು ವರ್ಷದ ಅಧಿಕಾರಾವಧಿಯಲ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ 10 ವರ್ಷದ ಆಡಳಿತ, ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಮತದಾರರು ಬಿಜೆಪಿ ಬೆಂಬಲಿಸಿದ್ದಾರೆ ಎಂದು ತಿಳಿಸಿದರು.
ಮಾಜಿ ಶಾಸಕ ಎಸ್.ಎಂ.ನಾಗರಾಜ್ ಮಾತನಾಡಿ, ಎಲ್ಲ ಪ್ರಮುಖರು ಹಾಗೂ ಕಾರ್ಯಕರ್ತರು ಒಗ್ಗೂಡಿ ಶ್ರಮಿಸಿದ ಪರಿಣಾಮ ಚುನಾವಣೆಯಲ್ಲಿ ಬಿಜೆಪಿಗೆ ಉತ್ತಮ ಮತ ದೊರೆತಿದೆ. ಈ ಗೆಲುವು ವಿಪಕ್ಷಕ್ಕೆ ಎಚ್ಚರಿಕೆಯ ಗಂಟೆಯಾಗಿದೆ ಎಂದರು.
ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಆರ್.ಆನಂದಪ್ಪ, ಮಾಜಿ ಉಪಾಧ್ಯಕ್ಷ ಟಿ.ಎಲ್.ರಮೇಶ್, ಜಿಪಂ ಮಾಜಿ ಅಧ್ಯಕ್ಷ ಧ್ರುವಕುಮಾರ್, ಸದಸ್ಯ ಎಂ.ಕೃಷ್ಣಮೂರ್ತಿ, ಜೆಡಿಎಸ್ ಅಧ್ಯಕ್ಷ ಎಂ.ನರೇಂದ್ರ, ಬಿಜೆಪಿ ಮಂಡಲ ಅಧ್ಯಕ್ಷ ಗರಗದಹಳ್ಳಿ ಪ್ರತಾಪ್, ಪುರಸಭೆ ಸದಸ್ಯ ಟಿ.ಎಂ.ಬೋಜರಾಜ್ ಇತರರಿದ್ದರು.