ನ್ಯೂಸ್

ಎಲ್‌ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಭೇಟಿಯಾದ ಪ್ರಧಾನಿ ಮೋದಿ!

ನವದೆಹಲಿ: ನರೇಂದ್ರ ಮೋದಿ ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಎನ್‌ಡಿಎ ಸಂಸದೀಯ ಮಂಡಳಿ ಸಭೆಯಲ್ಲಿ ಮೋದಿ ಅವರು ಆಯ್ಕೆಯಾಗಿದ್ದು, ಸತತ ಮೂರನೇ ಅವಧಿಗೆ ಸರ್ಕಾರ ರಚಿಸಲು ಹಕ್ಕು ಮಂಡಿಸುವ ಮುನ್ನ ಬಿಜೆಪಿ ಹಿರಿಯ ನಾಯಕ ಎಲ್​.ಕೆ. ಅಡ್ವಾನಿ ಮತ್ತು ಮುರಳಿ ಮನೋಹರ ಜೋಶಿ ಅವರನ್ನು ಭೇಟಿಯಾಗಿ ಆರ್ಶೀವಾದ ಪಡೆದಿದ್ದಾರೆ.

ಮೋದಿ ಅವರು ಇತರ 15 ಎನ್‌ಡಿಎ ನಾಯಕರೊಂದಿಗೆ ರಾಷ್ಟ್ರಪತಿ ಭವನಕ್ಕೆ ತೆರಳಲಿದ್ದು, ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

ಜೂನ್ 9ರ ಭಾನುವಾರ ಸಂಜೆ 6 ಗಂಟೆಗೆ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಪಡೆದಿದ್ದಾರೆ. ಎನ್​ಡಿಎ 293 ಸ್ಥಾನಗಳನ್ನು ಪಡೆದು 543 ಸದಸ್ಯ ಬಲದ ಲೋಕಸಭೆಯಲ್ಲಿ ಬಹುಮತ ಪಡೆದಿದೆ.

ಫೆಬ್ರವರಿಯಲ್ಲಿ ಮೋದಿ ಅವರು ಅಡ್ವಾಣಿ ಅವರಿಗೆ ಈ ಬಾರಿ ಭಾರತ ರತ್ನ ನೀಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದರು. ನಂತರ ಮಾರ್ಚ್‌ನಲ್ಲಿ ಅಡ್ವಾಣಿ ಅವರ ನಿವಾಸಕ್ಕೆ ತೆರಳಿ ಭಾರತ ರತ್ನ ನೀಡಿ ಗೌರವಿಸಲಾಗಿತ್ತು.