ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಅವರು ದಾವಣಗೆರೆಯಲ್ಲಿ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ರೋಡ್ ಶೋನಲ್ಲಿ ಭಾಗವಹಿಸಿದ್ದಾರೆ. ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಪ್ರಧಾನಿ ಮೋದಿಗೆ ರೋಡ್ ಶೋ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಾಥ್ ನೀಡಿದರು.
ಇದನ್ನೂ ಓದಿ: ಕ್ಷಮೆ ಕೇಳಲು ನಾನು ಸಾವರ್ಕರ್ ಅಲ್ಲ… ಇನ್ನು ಮುಂದೆಯೂ ಪ್ರಜಾಪ್ರಭುತ್ವಕ್ಕಾಗಿ ಹೋರಾಡುತ್ತೇನೆ; ರಾಹುಲ್ ಗಾಂಧಿ
ಪ್ರಧಾನಿ ಮೋದಿ ಹೆಲಿಪ್ಯಾಡ್ನಿಂದ ವಿಜಯಸಂಕಲ್ಪ ಮಹಾಸಂಗಮ ಸಮಾವೇಶದ ವೇದಿಕೆಗೆ ರೋಡ್ ಶೋ ಮೂಲಕ ಆಗಮಿಸಿದರು. ಸಮಾವೇಶದ ವೇದಿಕೆ ಸುತ್ತ ಪ್ರದಕ್ಷಿಣೆ ಹಾಕಿದ ನಂತರ ವೇದಿಕೆಗೆ ಆಗಮಿಸಿದರು. ಈ ಸಂದರ್ಭದಲ್ಲಿ ನೆರೆದಿದ್ದ ಸಾವಿರಾರು ಜನರು ಮೋದಿ... ಮೋದಿ...ಮೋದಿ ಎಂದು ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳು, ಕಾರ್ಯಕರ್ತರು ಹೂವು ಎಸೆದು ಸಂಭ್ರಮಿಸತೊಡಗಿದರು. ಇದನ್ನೂ ಓದಿ: ಮೆಕ್ಸಿಕೋ ಭಾರತೀಯ ರಾಯಭಾರ ಕಚೇರಿಗೆ ಬೆಂಗಳೂರು ಪೊಲೀಸ್ ಕಾನ್ಸ್‌ಟೇಬಲ್ ಆಯ್ಕೆ