ನ್ಯೂಸ್

ಯಡಿಯೂರಪ್ಪ ಅವರ ವಿದಾಯದ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದ ಪ್ರಧಾನಿ ಮೋದಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಳೆದ ಬುಧವಾರ ಸದನದಲ್ಲಿ ಮಾತನಾಡುತ್ತಾ, ಇದು ನನ್ನ ವಿದಾಯ. ಇನ್ನು ಮುಂದೆ ನಾನು ವಿಧಾನಸಭೆಗೆ ಬಂದು ಮಾತನಾಡಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಇದೀಗ ಯಡಿಯೂರಪ್ಪ ಅವರ ವಿದಾಯದ ಭಾಷಣವನ್ನು ಪ್ರಧಾನಿ ನರೇಂದ್ರ ಮೋದಿ ಮೆಚ್ಚಿ, ಟ್ವೀಟ್ ಮಾಡಿದ್ದಾರೆ.

ಬಿಎಸ್ ಯಡಿಯೂರಪ್ಪ ಅವರು ಮಾಡಿರುವ ವಿದಾಯ ಭಾಷಣವನ್ನು ಪ್ರಧಾನಿ ನರೇಂದ್ರ ಮೋದಿ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ. ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಕವಾಗಿದೆ. ಇದು ಖಂಡಿತವಾಗಿಯೂ ಇತರ ಕಾರ್ಯಕರ್ತರಿಗೆ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಿ ಮೋದಿ ಟ್ವೀಟ್ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಉಡುಪಿಯಲ್ಲಿ ಮಾದಕ ದ್ರವ್ಯ ಸೇವಿಸುತ್ತಿದ್ದ 42 ವಿದ್ಯಾರ್ಥಿಗಳು ಅಮಾನತು; ಎಡಿಜಿಪಿ ಅಲೋಕ್ ಕುಮಾರ್ ಸೂಚನೆಯಂತೆ ಕ್ರಮ

ಸದನದಲ್ಲಿ ಬಿಎಸ್​ವೈ ಮಾತನಾಡುತ್ತಾ, ನನ್ನನ್ನ ಬಿಜೆಪಿ ಕಡೆಗಣಿಸಿ ಅನ್ಯಾಯ ಮಾಡಿದೆ ಎಂಬ ಮಾತುಗಳನ್ನು ಸಾಕಷ್ಟು ಬಾರಿ ಕೇಳಿದ್ದೇನೆ. ಬಿಜೆಪಿ ಮತ್ತು ಪ್ರಧಾನಿ ಮೋದಿ ಅವರು ಎಂದಿಗೂ ನನ್ನನ್ನು ನಿರ್ಲಕ್ಷಿಸಿಲ್ಲ. ಪಕ್ಷ ಅವಕಾಶ ನೀಡಿದ್ದರಿಂದ ನಾಲ್ಕು ಬಾರಿ ಮುಖ್ಯಮಂತ್ರಿಯಾಗಲು ಸಾಧ್ಯವಾಯಿತು. ನನಗೆ ಸಿಕ್ಕಿರುವ ಅವಕಾಶಗಳು ಬೇರೆ ಯಾರಿಗೂ ಸಿಕ್ಕಿಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: ಜೆಡಿಎಸ್ ಜಿಲ್ಲಾಧ್ಯಕ್ಷರ ಕಾರು ಹಾಗೂ ಟ್ಯಾಂಕರ್ ನಡುವೆ ಅಪಘಾತ; ಮೂವರು ಗಂಭೀರ