ನ್ಯೂಸ್

ಅಪ್ರತಿಮ ಕಟ್ಟಡವು ಸಬಲೀಕರಣದ ತೊಟ್ಟಿಲಾಗಿರಲಿ; ಸಂಸತ್ ಭವನ ಉದ್ಘಾಟಿಸಿ ಸಂತಸ ವ್ಯಕ್ತಪಡಿಸಿದ ಮೋದಿ

ನವದೆಹಲಿ: ಭಾರತದ ನೂತನ ಸಂಸತ್ ಭವನ ಕಟ್ಟಡ ಉದ್ಘಾಟನೆಗೊಳ್ಳುತ್ತಿದ್ದಂತೆ, ನಮ್ಮ ಹೃದಯ, ಮನಸ್ಸುಗಳು ಹೆಮ್ಮೆ ಮತ್ತು ಭರವಸೆಯಿಂದ ತುಂಬಿವೆ. ಈ ಅಪ್ರತಿಮ ಕಟ್ಟಡವು ಸಬಲೀಕರಣದ ತೊಟ್ಟಿಲಾಗಿರಲಿ. ಕನಸುಗಳನ್ನು ಸೃಷ್ಟಿಸಿ ಮತ್ತು ಅವುಗಳನ್ನು ಈಡೇರಿಸುವಂತಾಗಲಿ. ಇದು ನಮ್ಮ ರಾಷ್ಟ್ರವನ್ನು ಪ್ರಗತಿಯ ಹೊಸ ಎತ್ತರಕ್ಕೆ ಕೊಂಡೊಯ್ಯಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನೂತನ ಸಂಸತ್ ಭವನ ಉದ್ಘಾಟನೆ; ಫೋಟೋ ಝಲಕ್​ ಇಲ್ಲಿದೆ…

12 ಗಂಟೆಗೆ ಎರಡನೇ ಹಂತದ ಕಾರ್ಯಕ್ರಮ

ಈಗಾಗಲೇ ಮೊದಲ ಹಂತದ ಉದ್ಘಾಟನಾ ಕಾರ್ಯಕ್ರಮ ಮುಕ್ತಾಯವಾಗಿದ್ದು, ಎರಡನೇ ಹಂತದ ಕಾರ್ಯಕ್ರಮ ಮಧ್ಯಾಹ್ನ 12 ಗಂಟೆಗೆ ಪುನರಾರಂಭವಾಗಲಿದೆ. ಮಧ್ಯಾಹ್ನ 12.30 ಲೋಕಸಭಾ ಸ್ಪೀಕರ್ ಭಾಷಣ ಮಾಡಲಿದ್ದು, ಆ ನಂತರ 1.10ಕ್ಕೆ ಸರಿಯಾಗಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಆ ಬಳಕ 2 ಗಂಟೆಗೆ ಕಾರ್ಯಕ್ರಮ ಅಧಿಕೃತವಾಗಿ ಮುಕ್ತಾಯವಾಗಲಿದೆ.

ಸೌಹಾರ್ದತೆಯ ಸಂದೇಶ ಸಾರಿದ ಕಾರ್ಯಕ್ರಮ

ಹೊಸ ಸಂಸತ್​ ಭವನ ಉದ್ಘಟನಾ ಕಾರ್ಯಕ್ರಮ ಬೆಳಗ್ಗೆ 7.30 ರಿಂದ ಆರಂಭವಾಯಿತು. ಐತಿಹಾಸಿ ಸೆಂಗೋಲ್​ ಅನ್ನು ಪ್ರಧಾನಿ ಮೋದಿ ಅವರು ಲೋಕಸಭಾ ಸ್ಪೀಕರ್​ ಸ್ಥಾನದ ಸಮೀಪದಲ್ಲಿ ಪ್ರತಿಷ್ಠಾಪಿಸಿದ್ದಾರೆ. ಪೂಜಾ-ವಿಧಿವಿಧಾನಗಳು ನಡೆಯುತ್ತಿದ್ದು, ವಿವಿಧ ಧರ್ಮದ ಮುಖಂಡರು ಪ್ರಾರ್ಥನೆ ಸಲ್ಲಿಸುವ ಮೂಲಕ ಸೌಹಾರ್ದತೆಯ ಸಂದೇಶವನ್ನು ಸಾರಿದರು.

ನೂತನ ಕಟ್ಟಡದ ವೈಶಿಷ್ಟ್ಯಗಳು

  • 2020 ಡಿಸೆಂಬರ್ 10ಕ್ಕೆ ಪ್ರಧಾನಿ ನೂತನ ಸಂಸತ್ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ.
  • 13 ಎಕರೆಯಲ್ಲಿ ಅಂದಾಜು 1200 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ.
  • ಲೋಕಸಭೆ ಛಾವಣಿ ನವಿಲಿನಾಕಾರದಲ್ಲಿ, ರಾಜ್ಯಸಭೆ ಕಮಲದಾಕಾರದಲ್ಲಿ ನಿರ್ಮಾಣ
  • ನೂತನ ಕಟ್ಟಡ 150 ವರ್ಷ ಬಾಳಿಕೆ ನಿರೀಕ್ಷೆ
  • ಹೊಸ ಲೋಕಸಭೆಯಲ್ಲಿ 888 ಜನ, ರಾಜ್ಯಸಭೆಯಲ್ಲಿ 384 ಮಂದಿ ಕುಳಿತುಕೊಳ್ಳಲು ವ್ಯವಸ್ಥೆ.
  • ಹಳೆಯ ಭವನದಲ್ಲಿ ಸೆಂಟ್ರಲ್ ಹಾಲ್ ಇದ್ದರೆ ನೂತನ ಕಟ್ಟಡದಲ್ಲಿ ಸೆಂಟ್ರಲ್ ಹಾಲ್ ಇಲ್ಲ. ಜಂಟಿ ಅಧಿವೇಶನಕ್ಕಾಗಿ
  • ಲೋಕಸಭೆಯಲ್ಲೇ 1,272 ಮಂದಿ ಕುಳಿತುಕೊಳ್ಳಲು ವ್ಯವಸ್ಥೆ.
  • ನೂತನ ಭವನವು 4 ಅಂತಸ್ತಿನ ಕಟ್ಟಡವಾಗಿದ್ದು, 64,500 ಚದರ ಮೀಟರ್ ವಿಸ್ತೀರ್ಣ ಹೊಂದಿದೆ.
  • ಜ್ಞಾನ ದ್ವಾರ, ಶಕ್ತಿ ದ್ವಾರ ಹಾಗೂ ಕರ್ಮ ದ್ವಾರ ಎಂಬ ಮೂರು ಪ್ರಮುಖ ದ್ವಾರಗಳ ನಿರ್ವಣ. ಸಂಸದರು, ವಿಐಪಿ
  • ಸಂದರ್ಶಕರು ಹಾಗೂ ಅಧಿಕಾರಿಗಳಿಗಾಗಿ ಪ್ರತ್ಯೇಕ ಪ್ರವೇಶ ದ್ವಾರ.
  • ಭವನದ ಮೇಲೆ ರಾಷ್ಟ್ರೀಯ ಲಾಂಛನದ ಪ್ರತಿರೂಪ ಇರಿಸಲಾಗಿದೆ. 9,500 ಕೆ.ಜಿ ಕಂಚಿನ ಪ್ರತಿಮೆ 6.5 ಮೀಟರ್ ಎತ್ತರವಿದೆ.