ಭಾರತೀಯ ಸಾಮಾಜಿಕ ವಿಜ್ಞಾನ ಸಂಶೋಧನಾ ಮಂಡಳಿ (ಐಸಿಎಸ್‌ಆರ್)ಹೊಸದಿಲ್ಲಿ ಪ್ರಾಯೋಜಿತ ರಾಷ್ಟ್ರೀಯ ಸಮ್ಮೇಳನ ಮೇ 19 ರಂದು ಬಲ್ಮಠದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಮಂಗಳೂರು: ಭಾರತೀಯ ಸಾಮಾಜಿಕ ವಿಜ್ಞಾನ ಸಂಶೋಧನಾ ಮಂಡಳಿ (ಐಸಿಎಸ್‌ಆರ್)ಹೊಸದಿಲ್ಲಿ ಪ್ರಾಯೋಜಿತ ರಾಷ್ಟ್ರೀಯ ಸಮ್ಮೇಳನ ಮೇ 19 ರಂದು ಬಲ್ಮಠದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಬ್ಲೂ ಎಕಾನಮಿ: ಗವರ್ನನ್ಸ್, ಸೊಸೈಟಿ ಆಂಡ್ ಸಸ್ಟೈನಬಲ್ ಡೆವಲಪ್ಮೆಂಟ್ ಪಾತ್ವೇಸ್ ಟು ಇನ್ಕ್ಲೂಸಿವ್, ರೆಸಿಲಿಯಂಟ್ ಆಂಡ್ ಸಸ್ಟೈನಬಲ್ ಕೋಸ್ಟಲ್ ್ಯೂಚರ್ಸ್ ಎಂಬ ವಿಷಯದಡಿ ನಡೆಯಲಿರುವ ಈ ರಾಷ್ಟ್ರೀಯ ಸಮ್ಮೇಳನವನ್ನು ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಅರ್ಥಶಾಸ ವಿಭಾಗವು ರಾಜ್ಯಶಾಸ, ಸಮಾಜಶಾಸ, ಇತಿಹಾಸ, ವಾಣಿಜ್ಯ ಮತ್ತು ನಿರ್ವಹಣಾ ವಿಭಾಗಗಳ ಸಹಯೋಗದಲ್ಲಿ ಆಯೋಜಿಸಿದೆ.
ಅಧ್ಯಕ್ಷತೆಯನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ವಹಿಸಲಿದ್ದಾರೆ. ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಕಚೇರಿ ಮಂಗಳೂರು ಇಲ್ಲಿನ ಜಂಟಿ ನಿರ್ದೇಶಕರಾದ ಪ್ರೊ. ಕೆ. ಆರ್. ಕವಿತಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಐಸಿಎಆರ್‌ಕೇಂದ್ರೀಯ ಸಮುದ್ರ ಮೀನುಗಾರಿಕಾ ಸಂಶೋಧನಾ ಸಂಸ್ಥೆ ಮಂಗಳೂರು ಇದರ ಪ್ರಧಾನ ವಿಜ್ಞಾನಿಗಳಾದ ಡಾ. ರಾಜೇಶ್ ಕೆ. ಎಂ. ಭಾಗವಹಿಸಲಿದ್ದಾರೆ. ಅತಿಥಿಗಳಾಗಿ ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆ್ ಬ್ಯಾಂಕ್ ಮ್ಯಾನೇಜ್ಮೆಂಟ್ನ ಸಹ ಪ್ರಾಧ್ಯಾಪಕರಾದ ಡಾ. ನವೀನ್ ಕುಮಾರ್ ಕೆ. ಹಾಗೂ ಕೇರಳದ ಕಣ್ಣೂರಿನ ನಹೆರ್ ಆರ್ಟ್ಸ್ ಅಂಡ್ ಸೈನ್ಸ್ ಕಾಲೇಜಿನ ಪ್ರಿನ್ಸಿಪಾಲ್ ಡಾ. ರ್ಶ್ರಾಸ್ ನವಾಸ್ ಎಂ. ಎ. ಉಪಸ್ಥಿತರಿರಲಿದ್ದಾರೆ.
ಸಂಜೆಯ ಸಮಾರೋಪ ಸಮಾರಂಭದಲ್ಲಿ ಡಾ. ಜಯವಂತ ನಾಯಕ್ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. ಬೆಳಗ್ಗೆ 9.30ಕ್ಕೆ ಆರಂಭವಾಗಲಿರುವ ಈ ರಾಷ್ಟ್ರೀಯ ಸಮ್ಮೇಳನದಲ್ಲಿ ದೇಶದ ವಿವಿಧ ಭಾಗಗಳಿಂದ ಸಂಶೋಧಕರು, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿ ಕರಾವಳಿ ಅಭಿವೃದ್ಧಿ, ಮೀನುಗಾರಿಕಾ ಸವಾಲುಗಳು, ಪರಿಸರ ಸಂರಕ್ಷಣೆ, ಸುಸ್ಥಿರ ಅಭಿವೃದ್ಧಿ ಮತ್ತು ಆಡಳಿತ ಕುರಿತ ಮಹತ್ವದ ವಿಚಾರಗಳನ್ನು ಚರ್ಚಿಸಲಿದ್ದಾರೆ.
ಕಾಲೇಜಿನ ಪ್ರಿನ್ಸಿಪಾಲ್ ಪ್ರೊ. ಗೋಪಾಲಕೃಷ್ಣ ಕೆ. ಅವರ ಮಾರ್ಗದರ್ಶನದಲ್ಲಿ ಸಮ್ಮೇಳನ ನಡೆಯುತ್ತಿದ್ದು, ಸಂಯೋಜಕರಾಗಿ ಡಾ. ಮಂಜುಳ ಮಲ್ಯ ಎಂ. ಹಾಗೂ ಸಹ ಸಂಯೋಜಕರಾಗಿ ಡಾ. ಜಯಶ್ರೀ ಕೆ. ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.