ಪ್ರಧಾನಿ ಮೋದಿ ಮತ್ತು ಡೊನಾಲ್ಡ್ ಟ್ರಂಪ್ 
ದೇಶ

250ನೇ ಸ್ವಾತಂತ್ರ್ಯ ದಿನಾಚರಣೆ: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅಮೆರಿಕನ್ನರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | PM Modi greetings

ನವದೆಹಲಿ: ಅಮೆರಿಕ ತನ್ನ 250ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು(PM Modi greetings) ಶನಿವಾರ(ಜು. 04) ಮುಂದಿನ 250 ವರ್ಷಗಳು ಭಾರತ-ಯುಎಸ್ ಪಾಲುದಾರಿಕೆಯನ್ನು ಉತ್ತುಂಗಕ್ಕೇರಿಸಲಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅಮೆರಿಕದ ಜನರಿಗೆ ಶುಭಾಶಯಗಳನ್ನು ಕೋರಿದ್ದಾರೆ.
ಈ ಕುರಿತು ಎಕ್ಸ್​​ನಲ್ಲಿ ಪೋಸ್ಟ್ ಮಾಡಿರುವ ಅವರು, 1.4 ಬಿಲಿಯನ್ ಭಾರತೀಯರ ಪರವಾಗಿ, ಅಧ್ಯಕ್ಷ ಟ್ರಂಪ್ ಮತ್ತು ಅಮೆರಿಕದ ಜನರಿಗೆ ನಿಮ್ಮ ಸ್ವಾತಂತ್ರ್ಯದ ಐತಿಹಾಸಿಕ 250 ನೇ ವಾರ್ಷಿಕೋತ್ಸವದಂದು ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.
ಭಾರತ ಮತ್ತು ಅಮೆರಿಕದ ನಡುವಿನ ಸ್ನೇಹವು ಜಾಗತಿಕ ಒಳಿತಿಗಾಗಿ ಒಂದು ಶಕ್ತಿ. ಮುಂದಿನ 250 ವರ್ಷಗಳು ಅಮೆರಿಕಕ್ಕೆ ಇನ್ನೂ ಹೆಚ್ಚಿನ ಸಮೃದ್ಧಿ, ಶಾಂತಿ ಮತ್ತು ಪ್ರಗತಿಯನ್ನು ತರಲಿ ಮತ್ತು ಭಾರತ-ಅಮೆರಿಕ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿ ಎಂದು ಹಾರೈಸಿದ್ದಾರೆ.
ಪ್ರಧಾನಿ ಮೋದಿ ಶುಭಾಶಯಕ್ಕೆ ಭಾರತದಲ್ಲಿರುವ ಅಮೆರಿಕದ ರಾಯಭಾರಿ ಸೆರ್ಗಿಯೊ ಗೋರ್, 'ಎಕ್ಸ್' ನಲ್ಲಿ ಪೋಸ್ಟ್ ಮಾಡಿ ಧನ್ಯವಾದ ಅರ್ಪಿಸಿದ್ದಾರೆ (ಏಜೆನ್ಸೀಸ್).