ಮುಜಫರ್-ಖಾತಿಮಾ ಹೆದ್ದಾರಿಯಲ್ಲಿ ಭೀಕರ ಅಪಘಾತ.
ಡಿವೈಡರ್ಗೆ ಡಿಕ್ಕಿ ಹೊಡೆದು, ಪಲ್ಟಿಯಾದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ.
ಹರಿದ್ವಾರಕ್ಕೆ ಹೊರಟಿದ್ದ 6 ಮಂದಿ ಸಜೀವ ದಹನ.
ಮುಜಫ್ಫರ್: ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ, ಏಕಾಏಕಿ ಬೆಂಕಿ ಹೊತ್ತಿಕೊಂಡು 6 ಮಂದಿ ಸಜೀವ ದಹನಗೊಂಡ ಘಟನೆ ಉತ್ತರ ಪ್ರದೇಶದ ಮುಜಫ್ಫರ್ ನಗರದಲ್ಲಿನ ಮುಜಫರ್-ಖಾತಿಮಾ ಹೆದ್ದಾರಿಯಲ್ಲಿ ನಡೆದಿದೆ.
ಕಾರಿನಲ್ಲಿದ್ದವರು ಹರಿಯಾಣಕ್ಕೆ ಪ್ರಯಾಣಿಸುತ್ತಿದ್ದರು. ಜಿಂದ್ ಜಿಲ್ಲೆಯ ನಿವಾಸಿಗಳಾದ ಇವರು ಹರಿದ್ವಾರಕ್ಕೆ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ತಿತಾವಿ ಪೊಲೀಸ್ ಠಾಣಾ ವ್ಯಾಪ್ತಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಅಪಘಾತದ ಮಾಹಿತಿ ಪಡೆದುಕೊಂಡ ಪೊಲೀಸರು ಹಾಗೂ ಅಗ್ನಿ ಶಾಮಕ ದಳವು ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ಹತೋಟಿಗೆ ತಂದು ಕಾರಿನಲ್ಲಿದ್ದವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು. ಆದರೆ, ವೈದ್ಯರು ಅವರು, ಮೃತಪಟ್ಟಿದ್ದಾರೆ ಎಂದು ಘೋಷಿಸಿದರು ಎನ್ನುವುದಾಗಿ ತಿತಾವಿ ಠಾಣೆಯ ಪೊಲೀಸರು ಸ್ಪಷ್ಟನೆ ಕೊಟ್ಟಿದ್ದಾರೆ.
ಜಗಾಹೇಡಿ ಗ್ರಾಮದ ಸಮೀಪ ಚಾಲಕನ ನಿಯಂತ್ರಂಣ ತಪ್ಪಿದ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು, ಪಲ್ಟಿಯಾಗಿದೆ. ಈ ರಭಸಕ್ಕೆ ಬೆಂಕಿ ಹೊತ್ತುಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಕಾರು ಸುಟ್ಟು ಕರಕಲಾಗಿದೆ. ಕಾರಿನಲ್ಲಿದ್ದವರು ಹೊರಬರಲೂ ಸ್ವಲ್ಪವೂ ಅವಕಾಶ ಇರಲಿಲ್ಲ. ಅದೇ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಆರು ಮಂದಿಯ ಜೀವ ಉಳಿಸಲು ಅಸಹಾಯಕಾರದರು.
ಬೆಂಕಿಯ ಕೆನ್ನಾಲೆಗೆ ಆರು ಮಂದಿ ಸುಟ್ಟು ಕರಕಲಾಗಿದ್ದಾರೆ, ಸದ್ಯ ಪೊಲೀಸರು ಅವರ ಮೃತದೇಹವನ್ನು ವಶಕ್ಕೆ ಪಡೆದುಕೊಂಡು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಬಗ್ಗೆ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಮಹಾಡಿಕ್, ಫುಗಾನಾ ವಿಭಾಗದ ಪೊಲೀಸ್ ಉಪ ಅಧೀಕ್ಷರು ಘಟನಾ ಸ್ಥಳಕ್ಕೆ ಭೇಟಿ ಕೊಟ್ಟು, ಪರಿಶೀಲನೆ ನಡೆಸಿದ್ದಾರೆ, (ಏಜೆನ್ಸೀಸ್).