Suryapet bus accident 
ದೇಶ

ತೆಲಂಗಾಣದ ಸೂರ್ಯಪೇಟೆಯಲ್ಲಿ ಭೀಕರ ಬಸ್ ಅಪಘಾತ​​; 6 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ..Suryapet Bus Accident

ಪ್ರಮುಖ ಮುಖ್ಯಾಂಶಗಳು

  • ಹೈದರಾಬಾದ್-ವಿಜಯವಾಡ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.
  • 6 ಮಂದಿ ಸಾವು, 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ, ಚಿಕಿತ್ಸೆ ಮುಂದುವರಿಕೆ.
  • ನಿಂತಿದ್ದ ಟ್ರಕ್​ಗೆ ಬಸ್​ ಡಿಕ್ಕಿ ಹೊಡೆದ ಪರಿಣಾಮ, ಅಪಘಾತ ಸಂಭವಿಸಿದೆ.

ಸೂರ್ಯಪೇಟೆ: ಇಲ್ಲಿನ ಹೈದರಾಬಾದ್-ವಿಜಯವಾಡ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಕರಿದ್ದ ಖಾಸಗಿ ಬಸ್​ವೊಂದು ಕಂಟೈನರ್​ ಟ್ರಕ್​​ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಮೃತಪಟ್ಟ ಘಟನೆ ಬುಧವಾರ(ಆ.26) ಬೆಳಕಿಗೆ ಬಂದಿದೆ. 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.

ಹೈದರಾಬಾದ್‌ನಿಂದ ಏಲೂರು ಕಡೆಗೆ ತೆರಳುತ್ತಿದ್ದ 42 ಪ್ರಯಾಣಿಕರಿದ್ದ ಬಸ್​​​​ ನಸುಕಿನ ಮುಂಜಾನೆ 4:30ರ ಸುಮಾರಿಗೆ ನಿಂತಿದ್ದ ಟ್ರಕ್​​ಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬಸ್​​ನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಮಾಹಿತಿ ತಿಳಿದ ತಕ್ಷಣವೇ ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಅಪಘಾತದಲ್ಲಿ ಮೃತಪಟ್ಟ ಆರು ಮಂದಿ ಮೃತ ದೇಹವನ್ನು ಹೊರಕ್ಕೆ ತೆಗೆಯಲು ಹರಸಾಹಸ ಪಟ್ಟರು. ಘಟನೆಯಿಂದಾಗಿ 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ವಿಜಯವಾಡಕ್ಕೆ ದಾಖಲಿಸಲಾಗಿದೆ.

ಪೊಲೀಸರು ಏನಂದ್ರು?

ಬೆಳಿಗ್ಗೆ 5:00 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಆರು ಜನರು ಸಾವನ್ನಪ್ಪಿದ್ದಾರೆ. ಮತ್ತಿತರ 10 ರಿಂದ 12 ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಮಾಹಿತಿ ಪಡೆದ ಹತ್ತು ನಿಮಿಷಗಳಲ್ಲಿ ಪೊಲೀಸ್ ಮತ್ತು ಹೈವೇ ಗಸ್ತು ತಂಡಗಳು ಸ್ಥಳಕ್ಕೆ ತಲುಪಿದವು. ಬಸ್ ಅತಿವೇಗದಲ್ಲಿ ಚಲಿಸಿದ್ದೇ ಈ ಅಪಘಾತಕ್ಕೆ ಕಾರಣ ಎಂದು ತೋರುತ್ತಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎಸ್‌ಪಿ ನರಸಿಂಹ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಂತಾಪ

ಈ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ಸಂತಾಪ ಸೂಚಿಸಿದ್ದಾರೆ. ಗಾಯಗೊಂಡಿರುವವರಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ದೊರಕಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದಾರೆ, (ಏಜೆನ್ಸೀಸ್).