ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ತಾಲೂಕಿನ ಲಿಂಗಾಪುರ ಸಮೀಪ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವುದು. 
ದೇಶ

‘ಕಂಬಕ್ಕೆ ಕಾರು ಡಿಕ್ಕಿ’ ತಪ್ಪಿದ ಭಾರಿ ಅನಾಹುತ

ಬೇಲೂರು: ತಾಲೂಕಿನ ಅರೇಹಳ್ಳಿ ಸಮೀಪದ ಲಿಂಗಾಪುರ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ಬೇಲೂರು-ಸಕಲೇಶಪುರ ಮುಖ್ಯರಸ್ತೆಯ ಮೂಲಕ ಲಿಂಗಾಪುರ ಸಮೀಪ ಬೇಲೂರಿನತ್ತ ಬರುತ್ತಿದ್ದ ಸಂದರ್ಭ ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿದ್ದರಿಂದ ಪಕ್ಕದಲ್ಲೆ ಇದ್ದ ಕೆರೆಗೆ ಬೀಳುವುದು ತಪ್ಪಿದೆ. ಒಂದು ವೇಳೆ ಕಾರು ಇನ್ನು ಮುಂದೆ ಚಲಿಸಿದ್ದರೆ ಕೆರೆಗೆ ಬಿದ್ದು ಭಾರಿ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ವಾಹನ ಚಾಲಕ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಂಬಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ನಜ್ಜು ಗುಜ್ಜಾಗಿದೆ. ಘಟನೆ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.