- ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
- ಆತ್ಮಹತ್ಯೆಗೆ ಶರಣಾಗುವ ಮೊದಲು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್
ಮಹಾರಾಷ್ಟ್ರ: ಸೋಷಿಯಲ್ ಮೀಡಿಯಾದಲ್ಲಿ ಭಾವುಕವಾಗಿ ಪೋಸ್ಟ್ ಮಾಡಿದ ಮರುಕ್ಷಣವೇ ಯುವಕನೊಬ್ಬ ನೇಣಿಗೆ ಶರಣಾದ ಘಟನೆ ಮಹಾರಾಷ್ಟ್ರದಲ್ಲಿ ವರದಿಯಾಗಿದೆ.
ಮೃತ ಯುವಕನನ್ನು ಯೋಗೇಶ್ ಅಶೋಕ್ ಖ್ಯಾಗೆ (18) ಎಂದು ಗುರುತಿಸಲಾಗಿದೆ. ಶನಿವಾರ ಸಂಬಂಧಿಕರ ಮನೆಗೆ ಭೇಟಿ ನೀಡಿ ಮನೆಗೆ ಹಿಂದಿರುಗುವುದಾಗಿ ಪೋಷಕರ ಬಳಿ ಹೇಳಿ ಹೋದ ಯುವಕ, ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಸುಶೀಲ್ ನಗರದ ನಿವಾಸಿ ಯೋಗೇಶ್, ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಆತ್ಮಹತ್ಯೆಗೆ ಶರಣಾಗುವ ಕೆಲವು ಸಮಯದ ಮೊದಲು, ಯೋಗೇಶ್ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ಕಥೆಯನ್ನು ಅಪ್‌ಲೋಡ್ ಮಾಡಿದ್ದಾನೆ. ನಾನು ಎಲ್ಲರ ಹೃದಯದಿಂದ ಮೊದಲು ಹೊರಗುಳಿಯಬೇಕು. ಆಗ ನನ್ನ ಸಾವಿನ ನಂತರ ಯಾರೊಬ್ಬರು ನನ್ನನ್ನು ನೆನಪಿಸಿಕೊಳ್ಳುವುದಿಲ್ಲ. "ಅಂತ್ಯವೇ ಆರಂಭ" ಎಂಬ ಪೋಸ್ಟ್ ಹಂಚಿಕೊಳ್ಳುವ ಮೂಲಕ ಸಾವಿಗೆ ಶರಣಾಗಿದ್ದಾನೆ.
ಘಟನೆ ಬಗ್ಗೆ ಮಾಹಿತಿ ಪಡೆದ ಯೋಗೇಶ್ ಪೋಷಕರು ಮತ್ತು ಸಂಬಂಧಿಕರು ಆತನನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ಆದರೆ, ವೈದ್ಯರು ಆತ ದಾರಿ ಮಧ್ಯೆಯೇ ಮೃತಪಟ್ಟಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಆತ್ಮಹತ್ಯೆಯ ಹಿಂದಿರುವ ಅಸಲಿ ಕಾರಣಗಳನ್ನು ನಿರ್ಧರಿಸಲು ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ,(ಏಜೆನ್ಸೀಸ್).