Allahabad High 
ದೇಶ

ಚುನಾವಣೆಯಲ್ಲಿ ಬಿಜೆಪಿಯಿಂದ ಇಲ್ಲವೇ ಸ್ವತಂತ್ರ ಸ್ಪರ್ಧೆಗೆ ಇಂಗಿತ: ಕೊಲೆ ಅಪರಾಧಿಯ ಶಿಕ್ಷೆಗೆ ತಡೆ ನೀಡಿ ಜಾಮೀನು ನೀಡಿದ ಹೈಕೋರ್ಟ್ | Allahabad High Court

2017ರ ಕೊಲೆ ಪ್ರಕರಣವೊಂದರಲ್ಲಿ ದೋಷಿ ಎಂದು ಸಾಬೀತಾಗಿ ಜೀವಾವಧಿ ಜೈಲು ಶಿಕ್ಷೆಗೊಳಗಾಗಿದ್ದ ಅಪರಾಧಿಯೊಬ್ಬರು, 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಅಥವಾ ಸಾಧ್ಯವಾದರೆ ಬಿಜೆಪಿ ಟಿಕೆಟ್‌ನಿಂದ ಸ್ಪರ್ಧಿಸಲು ಬಯಸಿದ್ದಾರೆ ಎಂದು ಗಮನಿಸಿದ ಅಲಹಾಬಾದ್ ಹೈಕೋರ್ಟ್, ಅವರ ಮೇಲಿನ ಅಪರಾಧ ತೀರ್ಪು ಮತ್ತು ಶಿಕ್ಷೆಗೆ ತಡೆ ನೀಡಿದೆ ಎಂದು ವರದಿಯಾಗಿದೆ.

ಲಖನೌ: 2017ರ ಕೊಲೆ ಪ್ರಕರಣವೊಂದರಲ್ಲಿ ದೋಷಿ ಎಂದು ಸಾಬೀತಾಗಿ ಜೀವಾವಧಿ ಜೈಲು ಶಿಕ್ಷೆಗೊಳಗಾಗಿದ್ದ ಅಪರಾಧಿಯೊಬ್ಬರು, 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಅಥವಾ ಸಾಧ್ಯವಾದರೆ ಬಿಜೆಪಿ ಟಿಕೆಟ್‌ನಿಂದ ಸ್ಪರ್ಧಿಸಲು ಬಯಸಿದ್ದಾರೆ ಎಂದು ಗಮನಿಸಿದ ಅಲಹಾಬಾದ್ ಹೈಕೋರ್ಟ್, ಅವರ ಮೇಲಿನ ಅಪರಾಧ ತೀರ್ಪು ಮತ್ತು ಶಿಕ್ಷೆಗೆ ತಡೆ ನೀಡಿದೆ ಎಂದು ವರದಿಯಾಗಿದೆ.

2017ರಲ್ಲಿ ಸಿಗ್ರಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ವಾರಣಾಸಿಯ ಸೆಷನ್ಸ್ ನ್ಯಾಯಾಲಯವೊಂದು 2025ರಲ್ಲಿ ನಂದಲಾಲ್ ರೈ@ ಬಬ್ಲೂ ರೈ ಎಂಬುವವರನ್ನು ಅಪರಾಧಿ ಎಂದು ಘೋಷಿಸಿ ಶಿಕ್ಷೆ ವಿಧಿಸಿತ್ತು. ಈ ಶಿಕ್ಷೆಯನ್ನು ಪ್ರಶ್ನಿಸಿ ನಂದನ್‌ಲಾಲ್ ರೈ ಹೈಕೋರ್ಟ್ ಮೆಟ್ಟಿಲೇರಿದ್ದರು.

ಅಲಹಾಬಾದ್​ ಹೈಕೋರ್ಟ್​ನ ನ್ಯಾಯಮೂರ್ತಿ ಸಿದ್ಧಾರ್ಥ್ ಮತ್ತು ವಿನಯ್ ಕುಮಾರ್ ದ್ವಿವೇದಿ ಅವರಿದ್ದ ವಿಭಾಗೀಯ ಪೀಠವು ಅರ್ಜಿ ವಿಚಾರಣೆ ನಡೆಸಿದೆ. ಈ ವೇಳೆ ಅರ್ಜಿದಾರರ ಪರ ವಕೀಲರು, ನಂದನ್‌ಲಾಲ್ ರೈ ಅವರು ಶಿಕ್ಷೆಯಾಗುವ ಮುನ್ನ ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು ಹಾಗೂ ಅವರು 2027ರ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಅಥವಾ ಸಾಧ್ಯವಾದರೆ ಬಿಜೆಪಿಯಿಂದ ಸ್ಪರ್ಧಿಸಲು ಬಯಸಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಅರ್ಜಿಯ ವಾದವನ್ನು ಆಲಿಸಿದ ಬಳಿಕ ಪೀಠವು, ಅಕ್ಟೋಬರ್ 05ರಂದು ನೀಡಿದ ತನ್ನ ಆದೇಶದಲ್ಲಿ ಅಪರಾಧಿ ನಂದನ್‌ಲಾಲ್ ರೈ ಅವರ ಜೀವಾವಧಿ ಶಿಕ್ಷೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಮತ್ತು ಅಪರಾಧಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.

2023ರ ಅಫ್ಜಲ್ ಅನ್ಸಾರಿ vs ಉತ್ತರ ಪ್ರದೇಶ ರಾಜ್ಯ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಉಲ್ಲೇಖಿಸಿ, ರಾಜಕಾರಣಿಗಳು ತಮ್ಮ ಮತದಾರರ ಬಗ್ಗೆ ವಿಶೇಷ ಜವಾಬ್ದಾರಿಗಳನ್ನು ಹೊಂದಿರುತ್ತಾರೆ. ಶಿಕ್ಷೆ ವಿಧಿಸಿದರೆ ಅವರು ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶವನ್ನು ಕಳೆದುಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ ಹಲವು ತೀರ್ಪುಗಳನ್ನು ಉಲ್ಲೇಖಿಸಿ ಶಿಕ್ಷೆಗೆ ತಡೆ ನೀಡಿದೆ.

ಆದೇಶದಲ್ಲಿ ರಾಜಕಾರಣಿಯೊಬ್ಬರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಹಕ್ಕು ಎಷ್ಟು ಮುಖ್ಯವೋ, ಸಾಮಾನ್ಯ ಮನುಷ್ಯನಿಗೆ ತನ್ನ ಜೀವನೋಪಾಯದ ಹಕ್ಕು ಕೂಡ ಅಷ್ಟೇ ಮುಖ್ಯವಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ಮೇಲ್ಮನವಿಯ ಅಂತಿಮ ತೀರ್ಪು ಬರುವವರೆಗೆ ಅರ್ಜಿದಾರರು ಸಮಾಜದಲ್ಲಿ ಸಾಮಾನ್ಯ ಜೀವನ ನಡೆಸಲು ಸಾಧ್ಯವಾಗುವಂತೆ ಅವರ ಶಿಕ್ಷೆಗೆ ತಡೆ ನೀಡುವುದು ಸೂಕ್ತವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಮತ್ತು ಇದು ಅಂತಿಮ ಮೇಲ್ಮನವಿ ತೀರ್ಪು ಬರುವವರೆಗೆ ಮಾತ್ರ ಅನ್ವಯಿಸುತ್ತದೆ. ಯಾವುದೇ ಖುಲಾಸೆಯಲ್ಲ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ.

ಈ ಪ್ರಕರಣವು ರಾಮ ಜನ್ಮಭೂಮಿ ಚಳುವಳಿಯ ಸಕ್ರಿಯ ಸದಸ್ಯರಾಗಿದ್ದ ಪ್ರಮೋದ್ ಕುಮಾರ್ ನಿಗಮ್ ಅವರ ಹತ್ಯೆಗೆ ಸಂಬಂಧಿಸಿದ್ದಾಗಿದೆ. ಅಪರಾಧಿ ಗ್ಯಾಂಗ್‌ಸ್ಟರ್‌ನಿಂದ ರಾಜಕಾರಣಿಯಾಗಿ ಬದಲಾದ ಮುಖ್ತಾರ್ ಅನ್ಸಾರಿ ಅವರೊಂದಿಗೆ ನಂಟು ಹೊಂದಿದ್ದನು. ಮತ್ತು ಒಂದು ಸಣ್ಣ ವಿವಾದದ ಹಿನ್ನೆಲೆಯಲ್ಲಿ ಆತ ನಿಗಮ್‌ನನ್ನು ಹತ್ಯೆ ಮಾಡಿದ್ದನೆಂದು ಆರೋಪಿಸಲಾಗಿದೆ (ಏಜೆನ್ಸೀಸ್).