ದೇಶ

ಸಿಇಸಿ ವಿರುದ್ಧದ ಪ್ರತಿಭಟನೆ ವೇಳೆ ಆಕಾಶವಾಣಿ ಭವನಕ್ಕೆ ನುಗ್ಗಿದ ಆರೋಪ; ರಾಹುಲ್ ಗಾಂಧಿ, ಪ್ರಿಯಾಂಕಾ ಸೇರಿ ಬೆಂಬಲಿಗರ ವಿರುದ್ಧ ಎಫ್‌ಐಆರ್ | FIR

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟ ನಡೆಸಿದ ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ ಆಕಾಶವಾಣಿ ಭವನಕ್ಕೆ ಬಲವಂತವಾಗಿ ನುಗ್ಗಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಸೇರಿ ಅವರ ಬೆಂಬಲಿಗರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟ ನಡೆಸಿದ ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ ಆಕಾಶವಾಣಿ ಭವನಕ್ಕೆ ಬಲವಂತವಾಗಿ ನುಗ್ಗಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಸೇರಿ ಅವರ ಬೆಂಬಲಿಗರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಬುಧವಾರ(ಅ. 07) ವರದಿಯಾಗಿದೆ.

ಈ ಕುರಿತು ಮಾಹಿತಿ ನೀಡಿರುವ ದೆಹಲಿ ಪೊಲೀಸ್ ಅಧಿಕಾರಿಗಳು, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಇತರ ಸಂಸದರು ಹಾಗೂ ಅವರ ಬೆಂಬಲಿಗರು ಅನುಮತಿಯಿಲ್ಲದೇ ಆಕಾಶವಾಣಿ ಭವನದ ಆವರಣಕ್ಕೆ ಪ್ರವೇಶಿಸಿದ್ದಾರೆ ಎಂದು ಆರೋಪಿಸಿ ಸಲ್ಲಿಸಲಾದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಮಂಗಳವಾರ (ಅ. 06), ಎಸ್​ಐಆರ್ ವಿವಾದ ಮತ್ತು ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಇಂಡಿಯಾ ಬ್ಲಾಕ್ ಸದಸ್ಯರು ಸಂಸತ್​ ಆವರಣದಿಂದ ಚುನಾವಣಾ ಆಯೋಗದ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದ್ದರು. ಆದ್ರೆ ಪೊಲೀಸರು ಆಕಾಶವಾಣಿ ಭವನದ ಬಳಿ ಪ್ರತಿಭಟನಾಕಾರರನ್ನು ತಡೆದ ಬಳಿಕ ಅಲ್ಲಿಯೇ ಭವನದ ಆವರಣ ಪ್ರವೇಶಿಸಿ ಸುಮಾರು ಎಂಟು ಗಂಟೆಗಳಿಗೂ ಹೆಚ್ಚು ಕಾಲ ಧರಣಿ ನಡೆಸಿದ್ದರು. ರಾತ್ರಿ 8 ಗಂಟೆ ಬಳಿಕ ರಾಹುಲ್ ಗಾಂಧಿ, ಪ್ರಿಯಾಂಕಾ ಸೇರಿದಂತೆ 260 ಜನರನ್ನು ಬಂಧಿಸಿ ಸ್ಥಳದಿಂದ ಕರೆದೊಯ್ದು ಬಿಡುಗಡೆ ಮಾಡಲಾಯಿತು (ಏಜೆನ್ಸೀಸ್).