CJI Surya Kant | ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ 
ದೇಶ

ಆಧಾರವಿಲ್ಲದೇ ರಾಹುಲ್ ಗಾಂಧಿ ವಿರುದ್ಧ ಆರೋಪ: ಮಾಧ್ಯಮಗಳ ಗಮನ ಸೆಳೆಯಲು ಪ್ರಸ್ತಾಪಿಸುತ್ತಿದ್ದೀರಾ?; ವಕೀಲರಿಗೆ ಸಿಜೆಐ ತರಾಟೆ | CJI

ಯಾವುದೇ ಆಧಾರವಿಲ್ಲದೆ ರಾಹುಲ್ ಗಾಂಧಿ ಅವರ ವಿರುದ್ಧ ಅಕ್ರಮ ಆಸ್ತಿ ಆರೋಪದ ಪ್ರಕರಣವನ್ನು ಪ್ರಸ್ತಾಪಿಸಲು ಯತ್ನಿಸಿದ ವಕೀಲರೊಬ್ಬರನ್ನು ಮಂಗಳವಾರ(ಅ. 27) ಮಾಧ್ಯಮಗಳ ಗಮನ ಸೆಳೆಯಲು ಪ್ರಯತ್ನಿಸುತ್ತಿದ್ದೀರಾ? ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

ನವದೆಹಲಿ: ಯಾವುದೇ ಆಧಾರವಿಲ್ಲದೆ ರಾಹುಲ್ ಗಾಂಧಿ ಅವರ ವಿರುದ್ಧ ಅಕ್ರಮ ಆಸ್ತಿ ಆರೋಪದ ಪ್ರಕರಣವನ್ನು ಪ್ರಸ್ತಾಪಿಸಲು ಯತ್ನಿಸಿದ ವಕೀಲರೊಬ್ಬರನ್ನು ಮಂಗಳವಾರ(ಅ. 27) ಮಾಧ್ಯಮಗಳ ಗಮನ ಸೆಳೆಯಲು ಪ್ರಯತ್ನಿಸುತ್ತಿದ್ದೀರಾ? ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ವಿಷಯದಲ್ಲಿ ಅಲಹಾಬಾದ್ ಹೈಕೋರ್ಟ್‌ನ ಹಿಂದಿನ ಆದೇಶವನ್ನು ಸುಪ್ರೀಂ ಕೋರ್ಟ್ ಈಗಾಗಲೇ ತಡೆಹಿಡಿದಿದೆ. ಮತ್ತು ಹೈಕೋರ್ಟ್‌ಗೆ ಯಾವುದೇ ವರದಿಗಳನ್ನು ಸಲ್ಲಿಸದಂತೆ ಇಡಿ ಮತ್ತು ಸಿಬಿಐ ಅನ್ನು ನಿರ್ಬಂಧಿಸಿದೆ. ಈಗ ಮತ್ತೆ ಈ ವಿಷಯವನ್ನು ಎತ್ತುವ ಪ್ರಯತ್ನಕ್ಕೆ ಸ್ಪಷ್ಟ ಆಧಾರ ಮತ್ತು ಯಾವುದೇ ಮಹತ್ವದ ಅರ್ಹತೆ ಇಲ್ಲ ಎಂದು ಟೀಕಿಸಿದ್ದಾರೆ.

ವಕೀಲರು, ರಾಹುಲ್ ಗಾಂಧಿ ಅವರು ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯೊಂದರಲ್ಲಿ ಇಡಿ ಮತ್ತು ಸಿಬಿಐ ಸಂಸ್ಥೆಗಳ 200 ಅಧಿಕಾರಿಗಳೊಂದಿಗೆ ತಾವು ನಿರಂತರ ಸಂಪರ್ಕದಲ್ಲಿರುವುದಾಗಿ ಹೇಳಿಕೊಂಡಿದ್ದಾರೆ ಎಂದು ವಾದಿಸಿದ್ದಾರೆ. ಇದರ ಆಧಾರದ ಮೇಲೆ ಪ್ರಕರಣದ ವಿಚಾರಣೆಗೆ ಪಟ್ಟಿ ಮಾಡುವಂತೆ ಕೋರಿದರು.

ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಸಿಜೆಐ ಸೂರ್ಯಕಾಂತ್ ಅವರು, ನೀವು ಈ ಬಗ್ಗೆ ಯಾವುದಾದರೂ ಸುದ್ದಿ ವಾಹಿನಿಯೊಂದಿಗೆ ಮಾತನಾಡಿಕೊಂಡು ಬಂದಿದ್ದೀರಾ? ಕೇವಲ ಮಾಧ್ಯಮಗಳ ಗಮನ ಸೆಳೆಯುವ ಹಾಗೂ ಪ್ರಚಾರ ಗಿಟ್ಟಿಸಿಕೊಳ್ಳುವ ಉದ್ದೇಶದಿಂದ ಈ ವಿಷಯವನ್ನು ಪ್ರಸ್ತಾಪಿಸುತ್ತಿದ್ದೀರಿ ಎಂದು ಕಿಡಿಕಾರಿದ್ದಾರೆ.

ಬಳಿಕ, ಸುಪ್ರೀಂ ಕೋರ್ಟ್‌ನಲ್ಲಿ ವಕೀಲರು ಪ್ರಕರಣಗಳನ್ನು ವಿಚಾರಣಾ ಪಟ್ಟಿಯಲ್ಲಿ ಸೇರಿಸುವಂತೆ ಕೋರುವ ಪ್ರಕ್ರಿಯೆಯಾದ 'ಮೆನ್ಶನಿಂಗ್' ಪ್ರಕ್ರಿಯೆಯ ನೇರ ಪ್ರಸಾರವನ್ನುನಿಲ್ಲಿಸುವಂತೆ ಅವರು ತಮ್ಮ ಸಿಬ್ಬಂದಿಗೆ ನಿರ್ದೇಶನ ನೀಡಿದ್ದಾರೆ.

ರಾಹುಲ್ ಗಾಂಧಿ ವಿರುದ್ಧದ ಪ್ರಕರಣಕ್ಕೆ ತಡೆ

ರಾಹುಲ್ ಗಾಂಧಿಯವರ ಆಸ್ತಿಗಳ ತನಿಖೆ ನಡೆಸುವಂತೆ ಸಿಬಿಐ ಮತ್ತು ಇಡಿಗೆ ನಿರ್ದೇಶನ ನೀಡಿದ್ದ ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠದ ಮೇ ತಿಂಗಳ ಆದೇಶಕ್ಕೆ ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ರಾಹುಲ್ ಗಾಂಧಿಯವರ ಮಾತನ್ನು ಕೇಳದೆ ಹೈಕೋರ್ಟ್ ಇಂತಹ ಆದೇಶವನ್ನು ಹೇಗೆ ಹೊರಡಿಸಲು ಸಾಧ್ಯ ಸುಪ್ರೀಂಕೋರ್ಟ್ ಪ್ರಶ್ನಿಸಿತ್ತು.

ಅಲ್ಲದೇ , ಈ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ವರದಿಗಳನ್ನು ಸದ್ಯಕ್ಕೆ ಹೈಕೋರ್ಟ್ ಮುಂದೆ ಸಲ್ಲಿಸದಂತೆ ಸುಪ್ರೀಂ ಕೋರ್ಟ್ ಸಿಬಿಐ ಮತ್ತು ಇಡಿಗೆ ಸೂಚನೆ ನೀಡಿದೆ (ಏಜೆನ್ಸೀಸ್).