ರಾಹುಲ್ ಗಾಂಧಿ ಮತ್ತು ಸಿಎಂ ಹಿಮಂತ ಬಿಸ್ವಾ ಶರ್ಮಾ 
ದೇಶ

ಮತಗಳ್ಳತನ ಆರೋಪ; ರಾಹುಲ್ ಗಾಂಧಿ ಒಬ್ಬ ಹುಚ್ಚ ಎಂದು ಕಿಡಿಕಾರಿದ ಸಿಎಂ ಹಿಮಂತ ಬಿಸ್ವಾ ಶರ್ಮಾ | CM Himanta Biswa Sarma

ಕಾಂಗ್ರೆಸ್ ನಾಯಕ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ರಾಹುಲ್ ಗಾಂಧಿಯೊಬ್ಬ ಹುಚ್ಚ, ಅವರ ಬಗ್ಗೆ ಪ್ರತಿಕ್ರಿಯಿಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಕಿಡಿಕಾರಿದ್ದಾರೆ.

ಅಲಹಾಬಾದ್: ಕಾಂಗ್ರೆಸ್ ನಾಯಕ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ರಾಹುಲ್ ಗಾಂಧಿಯೊಬ್ಬ ಹುಚ್ಚ, ಅವರ ಬಗ್ಗೆ ಪ್ರತಿಕ್ರಿಯಿಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಕಿಡಿಕಾರಿದ್ದಾರೆ.

ಗುಜರಾತ್​ನ ಕಾಂಡ್ಲಾದಲ್ಲಿ ಮಾತನಾಡಿರುವ ಅವರು, ಮತಗಳ್ಳತನ ಆರೋಪಗಳನ್ನು ತಳ್ಳಿ ಹಾಕಿದ್ದು, ರಾಹುಲ್ ಗಾಂಧಿಯನ್ನು ನಾನು ಹುಚ್ಚ ಎಂದು ಪರಿಗಣಿಸುತ್ತೇನೆ. ಅವರ ಹೇಳಿಕೆಗೆ ನಾನು ಯಾಕೆ ಪ್ರತಿಕ್ರಿಯಿಸಬೇಕು. ಅದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಕೆಲವೊಮ್ಮೆ ಗಡ್ಡ ಬೋಳಿಸಿಕೊಂಡಿರುತ್ತಾರೆ, ಮತ್ತೆ ಕೆಲವೊಮ್ಮೆ ಗಡ್ಡ ಬಿಟ್ಟಿರುತ್ತಾರೆ. ಒಂದು ದಿನ ದೇಶದಲ್ಲಿರುತ್ತಾರೆ, ಮರುದಿನ ವಿದೇಶದಲ್ಲಿರುತ್ತಾರೆ. ಅಂತಹ ವ್ಯಕ್ತಿಯನ್ನು ನಾನು ಹುಚ್ಚ ಎಂದು ಪರಿಗಣಿಸುತ್ತೇನೆ. ಹಾಗಾಗಿ ಅವರ ಬಗ್ಗೆ ಪ್ರತಿಕ್ರಿಯಿಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದಿದ್ದಾರೆ.

ಎಸ್​ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗದಲ್ಲಿ ಆಂತರಿಕ ಭಿನ್ನಾಭಿಪ್ರಾಯವಿದೆ ಎಂಬ ಪತ್ರಿಕಾ ವರದಿ ಬೆನ್ನಲ್ಲೇ, ರಾಹುಲ್ ಗಾಂಧಿ ಮತಗಳ್ಳತನವು ಸಂವಿಧಾನದ ಮೇಲಿನ ನೇರ ದಾಳಿಯಾಗಿದೆ. ಬಿಜೆಪಿ, ಆರ್‌ಎಸ್‌ಎಸ್ ಹಾಗೂ ಚುನಾವಣಾ ಆಯೋಗವು ದೇಶದ್ರೋಹದ ಕೃತ್ಯ ಎಸಗಿವೆ ಎಂದು ಆರೋಪಿಸಿದ್ದಾರೆ (ಏಜೆನ್ಸೀಸ್).