Atiq Ahmed’s youngest son killed in road accident in Jhansi
- ಉತ್ತರ ಪ್ರದೇಶದ ಝಾನ್ಸಿ-ಕಾನ್ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಫಘಾತ.
- ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ಅವರ ಕಿರಿಯ ಮಗ ಅಬಾನ್ ಅಹ್ಮದ್ ಮೃತ.
- ಝಾನ್ಸಿ ಜೈಲಿನಲ್ಲಿರುವ ತಮ್ಮ ಅಣ್ಣನನ್ನು ಭೇಟಿ ಮಾಡಲು ತೆರಳುತ್ತಿದ್ದ ವೇಳೆ ಘಟನೆ.
Atiq Ahmed’s youngest son killed in road accident in Jhansi:
ಉತ್ತರ ಪ್ರದೇಶದ ಝಾನ್ಸಿ-ಕಾನ್ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಫಘಾತದಲ್ಲಿ ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ಅವರ ಕಿರಿಯ ಮಗ ಅಬಾನ್ ಅಹ್ಮದ್ ಮೃತಪಟ್ಟಿರುವ ಘಟನೆ ಗುರುವಾರ ಆ.6ರಂದು ಬೆಳಕಿಗೆ ಬಂದಿದೆ.
ಝಾನ್ಸಿ ಜೈಲಿನಲ್ಲಿರುವ ತಮ್ಮ ಅಣ್ಣನನ್ನು ಭೇಟಿ ಮಾಡಲು ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಾರಿನಲ್ಲಿದ್ದವರ ಪೈಕಿ ಅಬಾನ್ ಅಹ್ಮದ್ ಹಾಗೂ ಸ್ನೇಹಿತ ಸೋನು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ಇನ್ನಿಬ್ಬರಿಗೆ ಮೊಂಥಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎನ್ನಲಾಗಿದೆ.
ಅಣ್ಣನನ್ನು ನೋಡಲು ಹೊರಟ್ಟಿದ್ದ ಅಬಾನ್
ಝಾನ್ಸಿ ಜೈಲಿನಲ್ಲಿರುವ ತಮ್ಮ ಅಣ್ಣನನ್ನು ಭೇಟಿ ಮಾಡಲು ಪೂಂಚ್ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಬಾನ್ ಅಹ್ಮದ್ ಕಾರು ಪ್ರಯಾಣಿಸುತ್ತಿತ್ತು. ಈ ವೇಳೆ ಕಾರು ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪೊಲೀಸರಿಂದ ಪರಿಶೀಲನೆ
ಅಪಘಾತದ ಮಾಹಿತಿ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ಆಗಮಿಸಿದ ಪೊಂಚ್ ಹಾಗೂ ಮೊಂತಾ ಪೊಲೀಸ್ ಠಾಣೆಯ ಸಿಬ್ಬಂದಿ ಪರಿಶೀಲನೆ ನಡೆಸಿ, ತ್ವರಿತ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದರು. ಅಗತ್ಯ ಕಾನೂನು ಕ್ರಮಗಳನ್ನು ನಿಯಮಗಳ ಪ್ರಕಾರ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸರು ಹೇಳಿದ್ದಾರೆ, (ಏಜೆನ್ಸೀಸ್).