DC vs RCB: ದೆಹಲಿಯ ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ 19ನೇ ಆವೃತ್ತಿಯ ಆರ್ಸಿಬಿ ವಿರದ್ಧದ ಪಂದ್ಯದಲ್ಲಿ, ಭುವನೇಶ್ವರ್ ಕುಮಾರ್ ಮತ್ತು ಜೋಶ್ ಹ್ಯಾಜಲ್‌ವುಡ್ ಬೌಲಿಂಗ್ ದಾಳಿಯಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 16.4 ಓವರ್‌ಗಳಲ್ಲಿ ಕೇವಲ ಓವರ್‌ಗಳಲ್ಲಿ 75 ರನ್ ಗಳಿಸಿ ಆಲೌಟ್ ಆಗಿದೆ.
ಏಪ್ರಿಲ್ 25 ರಂದು ಪಂಜಾಬ್ ಕಿಂಗ್ಸ್ ವಿರುದ್ಧ 264 ರನ್ ಗಳಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್, ಇಂದಿನ ಆರ್ಸಿಬಿ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದು, ಪವರ್‌ಪ್ಲೇನಲ್ಲಿ ಆರು ವಿಕೆಟ್‌ಗಳನ್ನು ಕಳೆದುಕೊಂಡು ಐಪಿಎಲ್ ಇತಿಹಾಸದಲ್ಲೇ ತಂಡವು ಮೂರನೇ ಬಾರಿ ಅತ್ಯಂತ ಕಡಿಮೆ 75 ರನ್ಗಳಿಗೆ ಗಳಿಸಿದೆ.
ಡೆಲ್ಲಿ ಪರ ಅಭಿಷೇಕ್ ಪೊರೆಲ್ 30 ರನ್ ಗಳಿಸಿ ಟಾಸ್ ಸ್ಕೋರರ್ ಎನಿಸಿಕೊಂಡರು. ಉಳಿದ ಯಾವುದೇ ಡೆಲ್ಲಿ ಬ್ಯಾಟರ್ ಹೆಚ್ಚು ರನ್ ಗಳಿಸಲು ಸಾಧ್ಯವಾಗಲಿಲ್ಲ. ಆರ್ಸಿಬಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡಿತ್ತು. ತಂಡದ ಬೌಲರ್ಗಳಾದ ಜೋಶ್ ಹ್ಯಾಜಲ್‌ವುಡ್ ಮತ್ತು ಭುವನೇಶ್ವರ್ ಕುಮಾರ್ ಕ್ರಮವಾಗಿ ನಾಲ್ಕು ಮತ್ತು ಮೂರು ವಿಕೆಟ್‌ಗಳನ್ನು ಕಬಳಿಸಿ ಡೆಲ್ಲಿ ಬ್ಯಾಟರ್ಗಳನ್ನು ಕಟ್ಟಿಹಾಕಿದರು.