ದೇಶ

ಯುಪಿ ಚುನಾವಣೆಗೂ ಮುನ್ನ ಎಸ್​ಪಿ ನಾಯಕ ಅಜಂ ಖಾನ್​ಗೆ ಬಿಗ್​ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಅಲಹಾಬಾದ್ ಹೈಕೋರ್ಟ್ | Azam Khan

ಉತ್ತರ ಪ್ರದೇಶ ಚುನಾವಣೆಗೂ ಮುನ್ನವೇ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್​ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜಾರಿ ನಿರ್ದೇಶನಾಲಯ (ED) ದಾಖಲಿಸಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್ ಮಂಗಳವಾರ(ನ. 17) ಅವರಿಗೆ ಮಧ್ಯಂತರ ಜಾಮೀನು ನೀಡಿದೆ.

ಲಖನೌ: ಉತ್ತರ ಪ್ರದೇಶ ಚುನಾವಣೆಗೂ ಮುನ್ನವೇ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್​ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜಾರಿ ನಿರ್ದೇಶನಾಲಯ (ED) ದಾಖಲಿಸಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್ ಮಂಗಳವಾರ(ನ. 17) ಅವರಿಗೆ ಮಧ್ಯಂತರ ಜಾಮೀನು ನೀಡಿದೆ.

ಪ್ಯಾನ್ ಕಾರ್ಡ್ ವಂಚನೆ ಪ್ರಕರಣದಲ್ಲಿ 11 ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದ ಬಳಿಕ ಜಾಮೀನಿನ ಮೇಲೆ ಅ. 31ರಂದು ರಾಂಪುರ್ ಜೈಲಿನಿಂದ ಹೊರಬರುತ್ತಿದ್ದಂತೆ ಇಡಿ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಿತ್ತು. ಇದನ್ನು ಪ್ರಶ್ನಿಸಿ ಅಜಂ ಖಾನ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಅಜಂ ಖಾನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ರಾಜೀವ್ ಗುಪ್ತಾ ಮತ್ತು ದೇವೇಂದ್ರ ಸಿಂಗ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು, ಅವರ ಅರ್ಜಿಯನ್ನು ಪುರಸ್ಕರಿಸಿದ್ದು, ವಿಚಾರಣೆಯ ಸಮಯದಲ್ಲಿ, ಖಾನ್ ಅವರನ್ನು ಬಂಧಿಸಲು ಕಡ್ಡಾಯ ಕಾರ್ಯವಿಧಾನವನ್ನು ಜಾರಿ ನಿರ್ದೇಶನಾಲಯ ಅನುಸರಿಸಿಲ್ಲ ಎಂಬುದನ್ನು ಗಮನಿಸಿತು. ಮತ್ತು ಬಂಧನಕ್ಕೆ ಲಿಖಿತ ಆಧಾರಗಳನ್ನು ಅವರಿಗೆ ಒದಗಿಸಲಾಗಿಲ್ಲ ಎಂದು ಅವರಿಗೆ ಜಾಮೀನು ನೀಡಿದೆ.

ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂಕೋರ್ಟ್

ಮತ್ತೊಂದು ನಕಲಿ ಜನನ ಪ್ರಮಾಣಪತ್ರ ಪ್ರಕರಣದಲ್ಲಿ ಅಜಂ ಖಾನ್ ಅವರಿಗೆ ವಿಧಿಸಿದ್ದ ಶಿಕ್ಷೆಯನ್ನು ತಡೆಹಿಡಿದ ಹೈಕೋರ್ಟ್ ನಿರ್ಧಾರವನ್ನು ಸುಪ್ರೀಂಕೋರ್ಟ್ ಇಂದು(ನ. 17) ಎತ್ತಿ ಹಿಡಿದಿದೆ. ನ್ಯಾ ದೀಪಂಕರ್ ದತ್ತಾ ಮತ್ತು ಶೀಲ್ ನಾಗು ಅವರ ದ್ವಿಸದಸ್ಯ ಪೀಠವು, ಪ್ರಕರಣದಲ್ಲಿ ಶಿಕ್ಷೆಯನ್ನು ಅಮಾನತುಗೊಳಿಸುವಾಗ ಹೈಕೋರ್ಟ್ ಸೂಕ್ತ ಕಾರಣಗಳನ್ನು ನೀಡಿದೆ ಎಂದು ಉತ್ತರ ಪ್ರದೇಶ ಸರ್ಕಾರವು ಮಂಡಿಸಿದ ವಾದವನ್ನು ತಳ್ಳಿಹಾಕಿ ಅರ್ಜಿಯನ್ನು ವಜಾಗೊಳಿಸಿದೆ.

ಅಜಮ್ ಖಾನ್ ಈಗಾಗಲೇ ದೀರ್ಘಕಾಲದವರೆಗೆ ಕಸ್ಟಡಿಯಲ್ಲಿದ್ದ ಅಂಶ, ಅವರ ವಯಸ್ಸು, ಹಾಗೂ ಪುರಸಭೆಯ ದಾಖಲೆಗಳಲ್ಲಿ ನಕಲಿ ಸಹಿಗಳನ್ನು ಅವರೇ ಸ್ವತಃ ಹಾಕಿದ್ದಾರೆ ಎಂಬುದನ್ನು ಸಾಬೀತುಪಡಿಸುವ ನೇರ ಸಾಕ್ಷ್ಯಗಳಿಲ್ಲದಿರುವುದು ಪರಿಗಣನೆಗೆ ತೆಗೆದುಕೊಂಡ ಹೈಕೋರ್ಟ್, ತನ್ನ ವಿವೇಚನಾ ಅಧಿಕಾರವನ್ನು ಬಳಸಿ ಅವರ ಶಿಕ್ಷೆಯನ್ನು ಅಮಾನತುಗೊಳಿಸಿದೆ (ಏಜೆನ್ಸೀಸ್).