ದೇಶ

ಮತಗಳ್ಳತನ ಆರೋಪದ ಅಭಿಯಾನಕ್ಕೆ ಪ್ರತಿಯಾಗಿ ಪ್ರಜಾಪ್ರಭುತ್ವ ಉಳಿಸಿ ಅಭಿಯಾನ ನಡೆಸಲು ಮುಂದಾದ ಬಿಜೆಪಿ: ನ. 02ರಿಂದ ಪಾದಯಾತ್ರೆ | BJP

ದೆಹಲಿಯಲ್ಲಿ ನ. 01ರಂದು ಕಾಂಗ್ರೆಸ್ ನೇತೃತ್ವದ ಇಂಡಿಯಾ ಬ್ಲಾಕ್ ನಡೆಸಲಿರುವ ವೋಟ್ ಬಚಾವೋ, ದೇಶ್ ಬಚಾವೋ ಆಂದೋಲನಕ್ಕೆ ಪ್ರತಿಯಾಗಿ ಬಿಜೆಪಿ ಪ್ರಜಾಪ್ರಭುತ್ವ ಉಳಿಸಿ ಹೆಸರಿಲ್ಲಿ ದೇಶಾದ್ಯಂತ ಅಭಿಯಾನ ನಡೆಸಲು ಮುಂದಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಅಭಿಯಾನವನ್ನು ಮುನ್ನಡೆಸಲಿದ್ದಾರೆ ಎನ್ನಲಾಗಿದೆ.

ನವದೆಹಲಿ: ದೆಹಲಿಯಲ್ಲಿ ನ. 01ರಂದು ಕಾಂಗ್ರೆಸ್ ನೇತೃತ್ವದ ಇಂಡಿಯಾ ಬ್ಲಾಕ್ ನಡೆಸಲಿರುವ ವೋಟ್ ಬಚಾವೋ, ದೇಶ್ ಬಚಾವೋ ಆಂದೋಲನಕ್ಕೆ ಪ್ರತಿಯಾಗಿ ಬಿಜೆಪಿ ಪ್ರಜಾಪ್ರಭುತ್ವ ಉಳಿಸಿ ಹೆಸರಿಲ್ಲಿ ದೇಶಾದ್ಯಂತ ಅಭಿಯಾನ ನಡೆಸಲು ಮುಂದಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಅಭಿಯಾನವನ್ನು ಮುನ್ನಡೆಸಲಿದ್ದಾರೆ ಎನ್ನಲಾಗಿದೆ.

ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಇಂಡಿಯಾ ಬ್ಲಾಕ್‌ನ ಮೆಗಾ ರ್ಯಾಲಿಯನ್ನು ಎದುರಿಸಲು ಮಾರನೇ ದಿನವೇ ಅಮಿತ್ ಶಾ ನೇತೃತ್ವದಲ್ಲಿ ದೇಶಾದ್ಯಂತ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಪಾದಯಾತ್ರೆ ಹಮ್ಮಿಕೊಂಡಿದೆ. ಪಾದಯಾತ್ರೆಯಲ್ಲಿ ಆಯಾ ರಾಜ್ಯದ ಉನ್ನತ ಸಚಿವರು ಮತ್ತು ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ ಎನ್ನಲಾಗಿದೆ.

ಈ ಕುರಿತು ಮಾತನಾಡಿರುವ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಎನ್. ರಾಮಚಂದರ್ ರಾವ್, ಕಾಂಗ್ರೆಸ್ ಎಸ್‌ಐಆರ್ ಪ್ರಕ್ರಿಯೆ ಬಗ್ಗೆ ಸುಳ್ಳು ನಿರೂಪಣೆಯನ್ನು ಹರಡುತ್ತಿದೆ. ಮತ್ತು ದೇಶದ ಯುವಕರನ್ನು ಕೆರಳಿಸಲು ಪ್ರಯತ್ನಿಸುತ್ತಿದೆ. ಅದಕ್ಕಾಗಿಯೇ, ನಾವು ಲೋಕತಂತ್ರ ಬಚಾವೋ, ಅರಾಜಕತಾ ಹಟಾವೋ ಎಂಬ ಥೀಮ್‌ನೊಂದಿಗೆ ಪಾದಯಾತ್ರೆಯನ್ನು ಆಯೋಜಿಸಲಿದ್ದೇವೆ. ನವೆಂಬರ್ 2ರಂದು ಹೈದರಾಬಾದ್​ನಲ್ಲಿ ನಡೆಯುವ ಪಾದಯಾತ್ರೆಯಲ್ಲಿ ಅಮಿತ್ ಶಾ ಜಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಅಷ್ಟೇ ಅಲ್ಲದೇ, ನವೆಂಬರ್ 5ರಂದು ಹರಿಯಾಣದ ಕರ್ನಾಲ್‌ನಲ್ಲೂ ಬಿಜೆಪಿ ಪಾದಯಾತ್ರೆ ನಡೆಯಲಿದೆ. ಅಲ್ಲಿಯೂ ಅಮಿತ್ ಶಾ ಭಾಗವಹಿಸಲಿದ್ದು, ಅವರ ಜೊತೆ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕೇಂದ್ರ ಸಚಿವ ಮನೋಹರ್ ಲಾಲ್ ಮತ್ತು ಇತರ ಹಿರಿಯ ನಾಯಕರು ಸಹ ಭಾಗವಹಿಸುವ ನಿರೀಕ್ಷೆಯಿದೆ (ಏಜೆನ್ಸೀಸ್).