ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಚಿತ್ರ X)
- ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ
- ಪ್ರಯಾಣಿಕರ ಸುರಕ್ಷತೆ ಕಾಪಾಡಲು ವಿಮಾನವನ್ನು ಸುರಕ್ಷಿತವಾಗಿ ಕೊಲ್ಲಿಗೆ ಸ್ಥಳಾಂತರಿಸಲಾಗಿದೆ
- ಬೆಳಿಗ್ಗೆ ಕೋಲ್ಕತ್ತಾದಿಂದ ಮೇಘಾಲಯದ ಶಿಲ್ಲಾಂಗ್‌ಗೆ ಹಾರಾಟ ನಡೆಸಬೇಕಿದ್ದ ಇಂಡಿಗೋ ವಿಮಾನ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು (ಫೆ.14) ಬಾಂಬ್ ಬೆದರಿಕೆ (Bomb threat) ಬಂದ ಹಿನ್ನಲೆ, ಪ್ರಯಾಣಿಕರ ಸುರಕ್ಷತೆಯನ್ನು ಕಾಪಾಡಲು ವಿಮಾನವನ್ನು ಸುರಕ್ಷಿತವಾಗಿ ಕೊಲ್ಲಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಬೆಳಿಗ್ಗೆ ಕೋಲ್ಕತ್ತಾದಿಂದ ಮೇಘಾಲಯದ ಶಿಲ್ಲಾಂಗ್‌ಗೆ ಹಾರಾಟ ನಡೆಸಬೇಕಿದ್ದ ಇಂಡಿಗೋ ವಿಮಾನ 6E-7304 ರನ್ವೇ ಏರಲು ಸಿದ್ಧವಾಗಿತ್ತು. ಆದರೆ, ವಿಮಾನ ಹೊರಡಲು ಕೆಲವೇ ಕ್ಷಣಗಳಲ್ಲಿ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಆತಂಕಕಾರಿ ವಿಚಾರವು ಭದ್ರತಾ ಸಿಬ್ಬಂದಿಗೆ ತಲುಪಿತು. ಇದರಿಂದಾಗಿ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿ ಪ್ರಯಾಣಿಕರನ್ನು ಬೇರೆಡೆಗೆ ಸ್ಥಳಾಂತರಿಸಲಾಯಿತು ಎಂದು ತಿಳಿಸಿದ್ದಾರೆ.
ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ವಿಮಾನದ ಶೌಚಾಲಯದೊಳಗೆ ಬಾಂಬ್ ಇದೆ ಎಂದು ಸೂಚಿಸುವ ಕೈಬರಹದ ಟಿಪ್ಪಣಿಯನ್ನು ಸಿಬ್ಬಂದಿಯೊಬ್ಬರ ಕೈ ಸೇರಿತು. ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು, ಪ್ರಯಾಣಿಕರು ಮತ್ತು ವಿಮಾನ ಕಾರ್ಯಾಚರಣೆಯ ಸುರಕ್ಷತೆಯನ್ನು ಬಲಪಡಿಸಲು ಎಲ್ಲಾ ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ (ಏಜೆನ್ಸೀಸ್).