Bull Attack (ಚಿತ್ರ X) 
ದೇಶ

ರಸ್ತೆಯಲ್ಲಿ ಸಾಗುತ್ತಿದ್ದ ಸವಾರನ ಮೇಲೆ ಗೂಳಿ ಅಟ್ಯಾಕ್; ಮೈ ಜುಂ ಎನಿಸುವ ವಿಡಿಯೋ ವೈರಲ್...Bull Attack

ಅಹಮದಾಬಾದ್ : ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಬೀದಿ ದನಗಳ ಹಾವಳಿ ದಿನೇ ದಿನೇ ಮಿತಿ ಮೀರಿದ್ದು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನೊಬ್ಬನ ಮೇಲೆ (Bull Attack) ಗೂಳಿಯೊಂದು ಭೀಕರವಾಗಿ ದಾಳಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಕುರಿತಾದ ಭಯಾನಕ ದೃಶ್ಯಗಳು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಘಟನೆ ಏನು?

ರಾಜ್​ಕೋಟ್​ನ ವೆರಾವಲ್ ಗ್ರಾಮದಲ್ಲಿ ವಾಹನ ಸವಾರರೊಬ್ಬ ರಸ್ತೆಯಲ್ಲಿ ಬರುತ್ತಿದ್ದಾಗ ಗೂಳಿಯೊಂದು ಏಕಾಏಕಿ ಆತನ ಮೇಲೆ ದಾಳಿ ನಡೆಸಿದ್ದು, ತನ್ನ ಕೊಂಬುಗಳಿಂದ ಸವಾರನನ್ನು ಎತ್ತಿ ನೆಲಕ್ಕೆ ಬಿಸಾಡಿದೆ.
ಈ ವೇಳೆ ಸವಾರನು ಪ್ರಾಣಾಪಾಯದಿಂದ ತಪ್ಪಿಸಿಕೊಳ್ಳಲು ಹರಸಾಹಸ ಪಡುತ್ತಿರುವ ದೃಶ್ಯವನ್ನು ನೋಡಬಹುದು. ಆದಾಗ್ಯೂ, ರಸ್ತೆಯು ತುಂಬಾ ಚಿಕ್ಕದ್ದಾಗಿದ್ದರಿಂದ ಸವಾರನಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಇರುವುದರಿಂದ ಗೂಳಿ ಆತನ ಮೇಲೆ ಪುನಃ ದಾಳಿ ಮಾಡಲು ಮುಂದಾಯಿತು.
ಗೂಳಿಯ ಉಗ್ರ ರೂಪವನ್ನು ಕಂಡ ಸ್ಥಳೀಯರು ಘಟನಾ ಸ್ಥಳಕ್ಕೆ ಆಗಮಿಸಿ, ಕೋಲು ಮತ್ತು ಇನ್ನಿತರ ವಸ್ತುಗಳನ್ನು ಬಳಸಿ ಗೂಳಿಯನ್ನು ಓಡಿಸಲು ಮುಂದಾದರು. ಈ ವೇಳೆ ದಾಳಿಯಿಂದ ಗಾಯಗೊಂಡಿದ್ದ ವ್ಯಕ್ತಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಅದೃಷ್ಟವಶಾತ್​ ಬೈಕ್​ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

ಆಡಳಿತದ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ಬೀದಿ ದನಗಳ ಹಾವಳಿ ನಿಯಂತ್ರಿಸಲು ಸರ್ಕಾರ ಮತ್ತು ಸ್ಥಳೀಯ ಆಡಳಿತಗಳು ಕಠಿಣ ಕ್ರಮ ಕೈಗೊಳ್ಳಬೇಕು" ಎಂದು ನೆಟ್ಟಿಗರು ಒತ್ತಾಯಿಸುತ್ತಿದ್ದಾರೆ. ರಸ್ತೆಗಳಲ್ಲಿ ಅಡ್ಡಾದಿಡ್ಡಿ ತಿರುಗುವ ದನಗಳನ್ನು ಹಿಡಿದು ಸೂಕ್ತವಾದ ಗೋಶಾಲೆಗಳಿಗೆ ರವಾನಿಸುವ ಕೆಲಸವಾಗಬೇಕಿದೆ. ಹಲವು ಬಾರಿ ದೂರು ನೀಡಿದರೂ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂಬುದು ಸ್ಥಳೀಯರ ಆರೋಪಿಸಿದ್ದಾರೆ (ಏಜೆನ್ಸೀಸ್​).