ಕಾಕ್ರೋಜ್ ಜನತಾ ಪಾರ್ಟಿ ನಾಯಕರ ಜೊತೆ ಮಾತುಕತೆಗೆ ಮುಂದಾದ ಕೇಂದ್ರ ಸಚಿವ ಜೆ.ಪಿ. ನಡ್ಡಾ
- ದೇಶದಲ್ಲಿ ನಡೆಯುತ್ತಿರುವ ಪರೀಕ್ಷಾ ಅಕ್ರಮ ಖಂಡಿಸಿ ಕಾಕ್ರೋಜ್ ಜನತಾ ಪಾರ್ಟಿ ಹಮ್ಮಿಕೊಂಡಿದ್ದ ‘ಸಂಸತ್ ಚಲೋ’ ಪ್ರತಿಭಟನೆ
- ಪೊಲೀಸರಿಂದ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್
- ಕಾಕ್ರೋಜ್ ಜನತಾ ಪಾರ್ಟಿ ನಾಯಕರ ಜೊತೆ ಮಾತುಕತೆಗೆ ಮುಂದಾದ ಕೇಂದ್ರ ಸಚಿವ ಜೆ.ಪಿ. ನಡ್ಡಾ
ನವದೆಹಲಿ: ದೇಶದಲ್ಲಿ ನಡೆಯುತ್ತಿರವ ಪರೀಕ್ಷಾ ಅಕ್ರಮಗಳನ್ನು ಪ್ರಶ್ನಿಸಿ ಕಾಕ್ರೋಜ್ ಜನತಾ ಪಾರ್ಟಿಯ ನೇತೃತ್ವದಲ್ಲಿ ದೆಹಲಿಯಲ್ಲಿ ಸೋಮವಾರ (ಜು.20) ಸಂಸತ್ ಚಲೋ (Sansad Chalo) ಎಂಬ ಪ್ರತಿಭಟನಾ ರ‍್ಯಾಲಿ ನಡೆಯುತ್ತಿದೆ.
ಈ ಪ್ರತಿಭಟನೆಗೆ ದೆಹಲಿ ಪೊಲೀಸರ ಅನುಮತಿ ಇರದ ಕಾರಣ ಕೆಲ ಕಡೆಗಳಲ್ಲಿ ಲಾಠಿ ಚಾರ್ಜ್ ಕೂಡ ಆಗಿದೆ ಎಂದು ವರದಿಯಾಗಿದೆ. ಆದರೆ ಈಗ ಈ ಪ್ರತಿಭಟನೆಯನ್ನು ಗಂಭೀರಾವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಈ ಕಾಕ್ರೋಚ್ ಜನತಾ ಪಾರ್ಟಿಯ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ.
ನಾವು ನಡ್ಡಾ ಅವರನ್ನು ಬೇಟಿಯಾಗಲಿದ್ದೆವೆ!
ಇಂದಿನಿಂದ ರಾಷ್ಟ್ರ ರಾಜಧಾನಿಯಲ್ಲಿ ಮಳೆಗಾಲದ ಸಂಸತ್ ಅಧಿವೇಶನ ಆರಂಭವಾಗುತ್ತಿದ್ದು, ಇದೇ ಸಂದರ್ಭದಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಕಾರ್ಯಕರ್ತರು ಸಂಸತ್ಗೆ ಮುತ್ತಿಗೆ ಹಾಕಲು ಮುಂದಾಗಿದ್ದರೆಂದು ತಿಳಿದು ಬಂದಿದೆ.
ಈಗ ಸರ್ಕಾರದ ವತಿಯಿಂದ ಕೇಂದ್ರ ಸಚಿವ ಜೆ.ಪಿ. ನಡ್ಡಾ ಮಾತುಕತೆಗೆ ಮುಂದಾಗಿದ್ದಾರೆಂದು ಮಾಹಿತಿ ಲಭ್ಯವಾಗಿದೆ. ಈ ಕುರಿತು ಕಾಕ್ರೋಚ್ ಜನತಾ ಪಾರ್ಟಿ ವಕ್ತಾರ, ಸೌರವ್ ದಾಸ್, ಎಕ್ಸ್ ಪೋಸ್ಟ್ವೊಂದರಲ್ಲಿ, ಸೋಮವಾರ ಕಾಕ್ರೋಚ್ ಜನತಾ ಪಾರ್ಟಿಯ ನಾಯಕರು ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರನ್ನು ಬೇಟಿಯಾಗಲು ಹೋಗುತ್ತಿದ್ದಾರೆ. ಸರ್ಕಾರ ನಮ್ಮನ್ನು ಸಂಪರ್ಕಿಸಿದೆ ಹೀಗಾಗಿ ಆಶುತೋಷ್ ರಾಂಕಾ ನೇತೃತ್ವದಲ್ಲಿ ನಾವು ನಮ್ಮ ಬೇಡಿಕೆಯನ್ನು ಸಚಿವರಿಗೆ ಮನವರಿಕೆ ಮಾಡಿಕೊಡಲಿದ್ದು, ನಮಗೆ ಈ ಬಾರಿ ಜಯ ಸಿಗಲಿದೆ ಎಂದು ಬರೆದುಕೊಂಡಿದ್ದಾರೆ, (ಏಜನ್ಸೀಸ್).