ಸಿಜೆಪಿ ಸ್ಥಾಪಕ ಅಭಿಜಿತ್ ದೀಪ್ಕೆ ಮತ್ತು ವಕ್ತಾರ ಅಶುತೋಷ್ ರಾಂಕಾ 
ದೇಶ

ಕೇಂದ್ರ ಸರ್ಕಾರ ಮಾತು ತಪ್ಪಿದೆ; ಸೆ. 05ರಂದು ದೆಹಲಿಯಲ್ಲಿ ಪ್ರತಿಭಟನಾ ರ್ಯಾಲಿ ನಡೆಸುವುದಾಗಿ ಘೋಷಿಸಿದ ಸಿಜೆಪಿ | CJP announces protest

ನವದೆಹಲಿ: ಜುಲೈ 25ರಂದು ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲು ಕಾರಣವಾದ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಸಿಜೆಪಿ, ಶಿಕ್ಷಕರ ದಿನಾಚರಣೆಯಾದ ಸೆ. 05ರಂದು ದೆಹಲಿಯಲ್ಲಿ ಪ್ರತಿಭಟನಾ ರ್ಯಾಲಿ ನಡೆಸುವುದಾಗಿ(CJP announces protest) ಘೋಷಿಸಿದೆ.
ಸೋಮವಾರ(ಆ. 24) ಸಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ ನಡೆದಿದ್ದು, ಸಭೆಯಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ನಡೆದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳು ಮತ್ತು ಪ್ರತಿಭಟನಾಕಾರರ ವಿರುದ್ಧ ದಾಖಲಾದ ಎಫ್‌ಐಆರ್‌ಗಳನ್ನು ಹಿಂಪಡೆಯುವುದು. ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ಸೇರಿದಂತೆ ಇತ್ಯಾದಿ ದೇಶದ ಯುವಕರಿಗೆ ನೀಡಿದ ಭರವಸೆಗಳನ್ನು ಕೇಂದ್ರ ಸರ್ಕಾರ ಈಡೇರಿಸಿಲ್ಲ, ದ್ರೋಹ ಬಗೆದಿದೆ ಎಂದು ಹೇಳಿದೆ. 
ಈ ಹಿನ್ನೆಲೆ ಮತ್ತೊಂದು ಪ್ರತಿಭಟನೆ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಸೆಪ್ಟೆಂಬರ್ 5 ರಂದು ಇಂಡಿಯಾ ಗೇಟ್‌ನಿಂದ ದೆಹಲಿ ಪೊಲೀಸ್ ಪ್ರಧಾನ ಕಚೇರಿಗೆ ಶಾಂತಿಯುತ ಜನರಲ್ ಝಡ್ ಪ್ರತಿಭಟನಾ ರ್ಯಾಲಿಯನ್ನು ನಡೆಸುವುದಾಗಿ ಘೋಷಿಸಿದೆ. 
ಈ ಕುರಿತು ಮಾತನಾಡಿದ ಸಿಜೆಪಿ ವಕ್ತಾರ ಸೌರವ್ ದಾಸ್, ಜೆನ್​ ಜಿ, ಯುವ ಪ್ರತಿಭಟನಾಕಾರರು ಮತ್ತು ಮೃತರ ಕುಟುಂಬಗಳಿಗೆ ಕೇಂದ್ರವು ದ್ರೋಗ ಬಗೆದಿದೆ. ಜುಲೈ 25 ರಂದು ಪ್ರತಿಭಟನಾಕಾರರಿಗೆ ನೀಡಿದ ಭರವಸೆಗಳನ್ನು ಮೋದಿ ಸರ್ಕಾರ ಉಳಿಸಿಕೊಳ್ಳುತ್ತದೆ ಎಂದು ನಾವು ನಂಬುವುದಿಲ್ಲ. ಆದ್ದರಿಂದ, ಸೆ. 5ರಂದು ಇಂಡಿಯಾ ಗೇಟ್‌ನಿಂದ ದೆಹಲಿ ಪೊಲೀಸ್ ಪ್ರಧಾನ ಕಚೇರಿಯವರೆಗೆ ಶಾಂತಿಯುತ ಪ್ರತಿಭಟನೆಗೆ ಕರೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆ ಘಟನೆಯಿಂದ ಆತ್ಮಹತ್ಯೆ ಮಾಡಿಕೊಂಡ ನೀಟ್ ವಿದ್ಯಾರ್ಥಿಗಳ ಕುಟುಂಬಸ್ಥರು ಮತ್ತು ಜುಲೈ 20ರ ಪೊಲೀಸ್ ದೌರ್ಜನ್ಯಕ್ಕೆ ಬಲಿಯಾದವರು ಈ ಪ್ರತಿಭಟನೆಯ ನೇತೃತ್ವ ವಹಿಸುತ್ತಾರೆ ಎಂದು ಹೇಳಿದ್ದಾರೆ (ಏಜೆನ್ಸೀಸ್).