- ಚಿನ್ನದ ಬೆಲೆ ಸ್ಥಿರ
- ಬೆಳ್ಳಿ ಬೆಲೆಯಲ್ಲಿ 5000 ರೂ. ಹೆಚ್ಚಳ
- ಭವಿಷ್ಯದಲ್ಲಿ ಬೆಳ್ಳಿ ಚಿನ್ನಕ್ಕಿಂತ ಹೆಚ್ಚು ಮೌಲ್ಯಯುತವಾಗುವ ಸಾಧ್ಯತೆ
ನವದೆಹಲಿ: ಸಾರ್ವಕಾಲಿಕ ದಾಖಲೆಯ ಗರಿಷ್ಠ ಮಟ್ಟವನ್ನು ಮೀರಿ ಹೋಗಿರುವ ಚಿನ್ನ-ಬೆಳ್ಳಿ ಬೆಲೆಗಳು ಕಳೆದ ಕೆಲವು ದಿನಗಳಿಂದ ಕೊಂಚ ಇಳಿಕೆಯ ಹಾದಿಯನ್ನು ಹಿಡಿದಿವೆ. ಆದರೆ, ಇಂದು ಚಿನ್ನದ ದರ ಸ್ಥಿರತೆ ಕಾಯ್ದುಕೊಂಡರೆ, ಬೆಳ್ಳಿ ದರ ತೀವ್ರವಾಗಿ ಏರಿಕೆ ಕಂಡಿದೆ.
ಶನಿವಾರ (ಡಿ.20) ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಇನ್ನು ಬೆಳ್ಳಿ ಪ್ರತಿ ಕೆಜಿ 5,000 ರೂ. ಜಾಸ್ತಿಯಾಗಿದೆ. ಈ ಮಧ್ಯೆ, ತಜ್ಞರು ಒಂದಷ್ಟು ಸಲಹೆಗಳನ್ನು ನೀಡಿದ್ದಾರೆ. ಇತ್ತೀಚಿನ ಮಾರುಕಟ್ಟೆ ಮುನ್ಸೂಚನೆಗಳ ಪ್ರಕಾರ, ಚಿನ್ನಕ್ಕಿಂತ ಬೆಳ್ಳಿಯನ್ನು ಖರೀದಿಸುವುದು ಉತ್ತಮ ಎಂದು ಸೂಚಿಸಿದ್ದಾರೆ. ಭವಿಷ್ಯದಲ್ಲಿ ಬೆಳ್ಳಿ ಚಿನ್ನಕ್ಕಿಂತ ಹೆಚ್ಚು ಮೌಲ್ಯಯುತವಾಗುವ ಸಾಧ್ಯತೆಯಿದೆ ಎಂದು ಭವಿಷ್ಯ ನುಡಿದಿದ್ದಾರೆ.
ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ
- ಇಂದು ದೆಹಲಿಯಲ್ಲಿ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 1,34,990 ರೂ.ಗೆ ತಲುಪಿದೆ. ಅದೇ ರೀತಿ, 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 1,23,750 ರೂ. ಆಗಿದೆ.
- ಮುಂಬೈ, ಬೆಂಗಳೂರಿನಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 1,34,840 ರೂ.ಗೆ ತಲುಪಿದೆ. ಅದೇ ರೀತಿ, 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 1,23,600 ರೂ.ಗೆ ಬಂದು ನಿಂತಿದೆ.
- ಇನ್ನು ಹೈದರಾಬಾದ್ ಸೇರಿದಂತೆ ತೆಲುಗು ರಾಜ್ಯಗಳಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,34,840 ರೂ.ಗೆ ತಲುಪಿದೆ. ಅದೇ ರೀತಿ, 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,23,600 ರೂ. ಆಗಿದೆ.
ಬೆಳ್ಳಿ 5000 ರೂ. ಹೆಚ್ಚಳ
- ದೆಹಲಿಯಲ್ಲಿ ಒಂದು ಕೆಜಿ ಬೆಳ್ಳಿ ಇಂದು 2,14,000 ರೂ.ಗೆ ತಲುಪಿದೆ.
- ಮುಂಬೈ, ಬೆಂಗಳೂರಿನಲ್ಲಿ ಪ್ರಸ್ತುತ ಒಂದು ಕೆಜಿ ಬೆಳ್ಳಿಯ ಬೆಲೆ 2,14,000 ರೂ. ಇದೆ.
- ಇನ್ನು ಚೆನ್ನೈ, ಹೈದರಾಬಾದ್, ತೆಲಂಗಾಣದಲ್ಲಿ 3000 ರೂ. ಇಳಿಕೆಯಾಗಿದ್ದು, ಪ್ರತಿ ಕೆಜಿ ಬೆಲೆ 2,26,000 ರೂ. ಆಗಿದೆ.
ಗಮನಿಸಿ: ಮೇಲೆ ತಿಳಿಸಲಾದ ಬೆಲೆಗಳು ಬೆಳಗಿನ ಮಾರುಕಟ್ಟೆಯ ಆರಂಭದಲ್ಲಿ ಮಾತ್ರ. ಈ ಚಿನ್ನ ಮತ್ತು ಬೆಳ್ಳಿ ದರಗಳು ಬದಲಾವಣೆಗೆ ಒಳಪಟ್ಟಿರುತ್ತವೆ.