- ಚಿನ್ನ-ಬೆಳ್ಳಿ ಬೆಲೆಯಲ್ಲಿ ಇಂದು ಸಹ ಹೆಚ್ಚಳ
- ಬೆಳ್ಳಿ ಬೆಲೆಯಲ್ಲಿ 3000 ರೂ. ಏರಿಕೆ
- 2026ರ ಫೆಬ್ರವರಿ ವೇಳೆಗೆ ಇನ್ನೂ ಹೆಚ್ಚಾಗಲಿದೆ ಬೆಲೆಗಳು
ನವದೆಹಲಿ: ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿರುವ ಚಿನ್ನ-ಬೆಳ್ಳಿ ಬೆಲೆಗಳು ಇದೀಗ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪುತ್ತಿದೆ. ಹೀಗಿರುವಾಗ, ಗೋಲ್ಡ್ ಖರೀದಿಗೆ ಇನ್ಯಾವ ಸಮಯ ಸೂಕ್ತ? ಈಗ ಕೊಳ್ಳುವುದು ಲಾಭದಾಯಕವೇ? ಎಂಬ ಗೊಂದಲದಲ್ಲಿ ಸದ್ಯ ಚಿನ್ನದಂತ ಗ್ರಾಹಕರಿದ್ದಾರೆ. ಅದಾಗ್ಯೂ, ಚಿನ್ನ ಮತ್ತು ಬೆಳ್ಳಿ ಬೆಲೆಗಳು ಹೊಸ ದಾಖಲೆಗಳನ್ನು ನಿರ್ಮಿಸುತ್ತಿವೆ.
ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಗಳು ಹೆಚ್ಚಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತು ದೇಶದಲ್ಲಿಯೂ ಸಹ, ಚಿನ್ನ ಮತ್ತು ಬೆಳ್ಳಿ ಸಾಮಾನ್ಯ ಮತ್ತು ಮಧ್ಯಮ ವರ್ಗದ ಜನರು ಭರಿಸಲಾಗದ ಮಟ್ಟಕ್ಕೆ ಹೋಗಿ ನಿಂತಿದೆ. ಶುಕ್ರವಾರ (ಡಿ.12) ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1910 ರೂ. ಏರಿಕೆಯಾಗಿದ್ದರೆ, 22 ಕ್ಯಾರೆಟ್ ಚಿನ್ನದ ಬೆಲೆ 1,750 ರೂ. ಹೆಚ್ಚಾಗಿದೆ. ಈ ಮಧ್ಯೆ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿದಿದೆ. ಒಂದು ಔನ್ಸ್ ಚಿನ್ನದ ಬೆಲೆ 15 ಡಾಲರ್ ಕಡಿಮೆಯಾಗಿದೆ. ಅಲ್ಲಿಗೆ, ಒಂದು ಔನ್ಸ್ ಚಿನ್ನದ ಬೆಲೆ ಪ್ರಸ್ತುತ 4,267 ಡಾಲರ್ ಆಗಿದೆ.
ಮತ್ತೊಂದೆಡೆ, ಚಿನ್ನದ ಬೆಲೆಗೆ ಪೈಪೋಟಿ ಕೊಡುತ್ತಿರುವ ಬೆಳ್ಳಿ ಬೆಲೆ ಕಳೆದ 5 ದಿನಗಳಿಂದ ತೀವ್ರವಾಗಿ ಏರಿಕೆ ಕಾಣುತ್ತಿದೆ. ಇಂದು ಒಂದೇ ದಿನ ಬೆಳ್ಳಿ ದರದಲ್ಲಿ ಪ್ರತಿ ಕೆಜಿಗೆ 3,000 ರೂ. ಏರಿಕೆಯಾಗಿದೆ. ಕಳೆದ ಐದು ದಿನಗಳಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 20,000 ರೂ. ಹೆಚ್ಚಾಗಿದೆ. ತಜ್ಞರ ಅಂದಾಜಿನ ಪ್ರಕಾರ, ಮುಂದಿನ ವರ್ಷ ಜನವರಿ ಮತ್ತು ಫೆಬ್ರವರಿಯಲ್ಲಿ ಚಿನ್ನ-ಬೆಳ್ಳಿ ಬೆಲೆಗಳು ಗಮನಾರ್ಹವಾಗಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ
- ಇಂದು ದೆಹಲಿಯಲ್ಲಿ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 1,32,810 ರೂ.ಗೆ ತಲುಪಿದೆ. ಅದೇ ರೀತಿ, 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 1,21,750 ರೂ. ಆಗಿದೆ.
- ಮುಂಬೈ, ಬೆಂಗಳೂರಿನಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 1,32,810 ರೂ.ಗೆ ತಲುಪಿದೆ. ಅದೇ ರೀತಿ, 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 1,21,750 ರೂ.ಗೆ ಬಂದು ನಿಂತಿದೆ.
- ಇನ್ನು ಹೈದರಾಬಾದ್ ಸೇರಿದಂತೆ ತೆಲುಗು ರಾಜ್ಯಗಳಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,32,810 ರೂ.ಗೆ ತಲುಪಿದೆ. ಅದೇ ರೀತಿ, 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,21,750 ರೂ. ಆಗಿದೆ.
ಬೆಳ್ಳಿ 3000 ರೂ. ಹೆಚ್ಚಳ
- ದೆಹಲಿಯಲ್ಲಿ ಒಂದು ಕೆಜಿ ಬೆಳ್ಳಿ ಇಂದು 2,07,000 ರೂ.ಗೆ ತಲುಪಿದೆ.
- ಮುಂಬೈ, ಬೆಂಗಳೂರಿನಲ್ಲಿ ಪ್ರಸ್ತುತ ಒಂದು ಕೆಜಿ ಬೆಳ್ಳಿಯ ಬೆಲೆ 2,07,000 ರೂ. ಇದೆ.
- ಇನ್ನು ಚೆನ್ನೈ, ಹೈದರಾಬಾದ್, ತೆಲಂಗಾಣದಲ್ಲಿ ಪ್ರತಿ ಕೆಜಿ ಬೆಲೆ 2,15,000 ರೂ. ಆಗಿದೆ.
ಗಮನಿಸಿ: ಮೇಲೆ ತಿಳಿಸಲಾದ ಬೆಲೆಗಳು ಬೆಳಗಿನ ಮಾರುಕಟ್ಟೆಯ ಆರಂಭದಲ್ಲಿ ಮಾತ್ರ. ಈ ಚಿನ್ನ ಮತ್ತು ಬೆಳ್ಳಿ ದರಗಳು ಬದಲಾವಣೆಗೆ ಒಳಪಟ್ಟಿರುತ್ತವೆ.