ಚಿನ್ನ-ಬೆಳ್ಳಿ ಬೆಲೆ 
ದೇಶ

ಚಿನ್ನ ಖರೀದಿಸಲು ಇದು ಸೂಕ್ತ ಸಮಯವೇ? ಈ ಬಗ್ಗೆ ತಜ್ಞರು ಹೇಳೋದೇನು? ಹೀಗಿದೆ ಇಂದಿನ ದರ ಪಟ್ಟಿ

ಪ್ರಮುಖ ಮುಖ್ಯಾಂಶಗಳು

  • ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ
  • ಚಿನ್ನದ ಬೆಲೆ ಇಳಿಕೆ ಕಂಡರೆ, ಬೆಳ್ಳಿ ದರ ಹೆಚ್ಚಳ
  • ಗೋಲ್ಡ್ ಖರೀದಿಗೆ ಇದು ಸೂಕ್ತ ಸಮಯವೇ? ಇಲ್ಲಿದೆ ಮಾಹಿತಿ
ಬೆಂಗಳೂರು: ಮದುವೆ ಸೀಸನ್​ ಸದ್ಯಕ್ಕಿಲ್ಲ ನಿಜ. ಹಾಗಂತ, ಶುಭಕಾರ್ಯಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗ ಖರೀದಿಸುವ ಪ್ಲ್ಯಾನ್​ ನಿಜಕ್ಕೂ ಕಷ್ಟಸಾಧ್ಯ. ಕಾರಣ, ಆ ಸಮಯಕ್ಕೆ ಮತ್ತೆ ಚಿನ್ನ-ಬೆಳ್ಳಿ ಬೆಲೆಗಳು ದಿಢೀರ್ ಏರಿಕೆಯಾಗಿರುತ್ತದೆ. ಹೀಗಾಗಿ, ಮುಂಚಿತವಾಗಿಯೇ ಕೊಳ್ಳುವುದು ಉತ್ತಮ. ಇಂದು ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಬೆಳ್ಳಿ ಹೆಚ್ಚಳ ಕಂಡಿದೆ. ಸಿಲ್ವರ್ ರೇಟ್​ ಸತತ ಎರಡನೇ ದಿನವೂ ಏರಿಕೆಯಾಗಿದ್ದು, ಹೊಸ ದಾಖಲೆಯತ್ತ ಮುಖಮಾಡಿದೆ.
ಮಂಗಳವಾರ (ಡಿ.09) ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 24 ಕ್ಯಾರೆಟ್ ಚಿನ್ನದ 10 ಗ್ರಾಂ 330 ರೂ. ಇಳಿದಿದೆ. 22 ಕ್ಯಾರೆಟ್ ಚಿನ್ನದ ಬೆಲೆ 300 ರೂ. ಕಡಿಮೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಕುಸಿದಿದೆ. ಒಂದು ಔನ್ಸ್ ಚಿನ್ನದ ಬೆಲೆ ನಾಲ್ಕು ಡಾಲರ್ ಇಳಿಕೆ ಆಗಿದೆ. ಪ್ರಸ್ತುತ, ಒಂದು ಔನ್ಸ್ ಚಿನ್ನ 4,194 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಮತ್ತೊಂದೆಡೆ, ಬೆಳ್ಳಿ ದರ ಪ್ರತಿ ಕೆಜಿಗೆ 1,000 ರೂ. ಹೆಚ್ಚಾಗಿದೆ.
ಕಳೆದ ಕೆಲವು ತಿಂಗಳುಗಳಿಂದ ಚಿನ್ನ ಪ್ರಿಯರಿಗೆ ಶಾಕ್​ ಮೇಲೆ ಶಾಕ್​ ಎದುರಾಗುತ್ತಿದೆ. ಅದಕ್ಕೆ ಕಾರಣ, ಗೋಲ್ಡ್ ಬೆಲೆಗಳ ದುಪ್ಪಟ್ಟು ಏರಿಕೆ. ಒಂದು ಹಂತಕ್ಕೆ ಕಡಿಮೆಯಾಗಿದ್ದೇ ಆದರೂ ಏರಿಕೆ ಪ್ರಮಾಣ ಎಂದಿನಂತೆ ಹೆಚ್ಚಿದೆ. ಕ್ರಿಸ್‌ಮಸ್ ಮತ್ತು ಹೊಸ ವರ್ಷ ಹತ್ತಿರವಾಗುತ್ತಿರುವ ಸಮಯದಲ್ಲಿ ಖರೀದಿದಾರರು ತೀವ್ರ ನಿರಾಶೆಯನ್ನು ಎದುರಿಸುತ್ತಿದ್ದಾರೆ. ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಂದು ಕಡಿಮೆಯಾಗಿದ್ದರೂ, ಈ ಸಮಯದಲ್ಲಿ ಖರೀದಿ ಬಗ್ಗೆ ಎಚ್ಚರಿಕೆಯ ನಿರ್ಧಾರ ತೆಗೆದುಕೊಳ್ಳುವುದು ಸೂಕ್ತ ಎಂದು ತಜ್ಞರು ಅಭಿಪ್ರಾಯಿಸುತ್ತಾರೆ.

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ

  • ಇಂದು ದೆಹಲಿಯಲ್ಲಿ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 1,30,240 ರೂ.ಗೆ ತಲುಪಿದೆ. ಅದೇ ರೀತಿ, 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 1,19,400 ರೂ. ಆಗಿದೆ.
  • ಮುಂಬೈ, ಬೆಂಗಳೂರಿನಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 1,30,910 ರೂ.ಗೆ ತಲುಪಿದೆ. ಅದೇ ರೀತಿ, 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 1,20,000 ರೂ.ಗೆ ಬಂದು ನಿಂತಿದೆ.
  • ಇನ್ನು ಹೈದರಾಬಾದ್​ ಸೇರಿದಂತೆ ತೆಲುಗು ರಾಜ್ಯಗಳಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,30,090 ರೂ.ಗೆ ತಲುಪಿದೆ. ಅದೇ ರೀತಿ, 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,19,250 ರೂ. ಆಗಿದೆ.

ಬೆಳ್ಳಿ 9,000 ರೂ. ಕುಸಿತ

  • ದೆಹಲಿಯಲ್ಲಿ ಒಂದು ಕೆಜಿ ಬೆಳ್ಳಿ ಇಂದು 1,90,000 ರೂ.ಗೆ ತಲುಪಿದೆ.
  • ಮುಂಬೈ, ಬೆಂಗಳೂರಿನಲ್ಲಿ ಪ್ರಸ್ತುತ ಒಂದು ಕೆಜಿ ಬೆಳ್ಳಿಯ ಬೆಲೆ 1,90,000 ರೂ. ಇದೆ.
  • ಇನ್ನು ಚೆನ್ನೈ, ಹೈದರಾಬಾದ್‌, ತೆಲಂಗಾಣದಲ್ಲಿ 3000 ರೂ. ಇಳಿಕೆಯಾಗಿದ್ದು, ಪ್ರತಿ ಕೆಜಿ ಬೆಲೆ 1,99,000 ರೂ. ಆಗಿದೆ.
ಗಮನಿಸಿ: ಮೇಲೆ ತಿಳಿಸಲಾದ ಬೆಲೆಗಳು ಬೆಳಗಿನ ಮಾರುಕಟ್ಟೆಯ ಆರಂಭದಲ್ಲಿ ಮಾತ್ರ. ಈ ಚಿನ್ನ ಮತ್ತು ಬೆಳ್ಳಿ ದರಗಳು ಬದಲಾವಣೆಗೆ ಒಳಪಟ್ಟಿರುತ್ತವೆ.