ಎನ್​ಸಿಪಿ(ಎಸ್​ಪಿ) ಮುಖ್ಯಸ್ಥ ಶರದ್ ಪವಾರ್ 
ದೇಶ

ಎದೆ ನೋವು: ಪುಣೆಯಲ್ಲಿ ಆಸ್ಪತ್ರೆಗೆ ದಾಖಲಾದ ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್: ಆರೋಗ್ಯ ಸ್ಥಿರ | Sharad Pawar

ಎನ್‌ಸಿಪಿ(ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರಿಗೆ ಎದೆಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಸೋಮವಾರ(ನ. 02) ಪುಣೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

ಮುಂಬೈ: ಎನ್‌ಸಿಪಿ(ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರಿಗೆ ಎದೆಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಸೋಮವಾರ(ನ. 02) ಪುಣೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಪುತ್ರಿ ಮತ್ತು ಸಂಸದೆ ಸುಪ್ರಿಯಾ ಸುಳೆ, ಕೆಮ್ಮಿನ ಸಮಸ್ಯೆಯ ಕಾರಣದಿಂದಾಗಿ ಬಾಬಾ ಅವರನ್ನು ಪುಣೆಯ ರೂಬಿ ಹಾಲ್ ಕ್ಲಿನಿಕ್‌ನಲ್ಲಿ ದಾಖಲಿಸಲಾಗಿದೆ. ಅವರಿಗೆ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ನಿಮ್ಮ ಕಾಳಜಿ ಮತ್ತು ಶುಭ ಹಾರೈಕೆಗಳಿಗೆ ಎಲ್ಲರಿಗೂ ಧನ್ಯವಾದಗಳು ಎಂದು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನೂ ಪವಾರ್ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ರೂಬಿ ಹಾಲ್ ಕ್ಲಿನಿಕ್‌ನ ಮುಖ್ಯ ಹೃದ್ರೋಗ ತಜ್ಞರು ಹಾಗೂ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ಟ್ರಸ್ಟೀ ಆಗಿರುವ ಡಾ. ಪರ್ವೆಜ್ ಕೆ. ಗ್ರಾಂಟ್, ಅವರ ಆರೋಗ್ಯ ಸ್ಥಿತಿಯು ಸುಧಾರಿಸುವ ನಿರೀಕ್ಷೆಯಿದೆ. ಮತ್ತು ಮುನ್ನೆಚ್ಚರಿಕಾ ಕ್ರಮವಾಗಿ ಅವರು ವೈದ್ಯರ ನಿಗಣನೆಯಲ್ಲಿಯೇ ಇರಲಿದ್ದಾರೆ ಎಂದು ತಿಳಿಸಿದ್ದಾರೆ.

'ಪ್ಲ್ಯೂರಿಟಿಕ್ ನೋವು'ಎಂದರೆ ಎದೆಯ ನೋವು; ಇದು ಸಾಮಾನ್ಯವಾಗಿ ಉಸಿರಾಡುವಾಗ, ಕೆಮ್ಮುವಾಗ ಅಥವಾ ಸೀನುವಾಗ ಇನ್ನಷ್ಟು ಹೆಚ್ಚಾಗುತ್ತದೆ ಎನ್ನಲಾಗಿದೆ (ಏಜೆನ್ಸೀಸ್).