ಪ್ರಧಾನಿ ನರೇಂದ್ರ ಮೋದಿ 
ದೇಶ

ಮಧ್ಯಪ್ರಾಚ್ಯದಲ್ಲಿ ಸಂಘರ್ಷ: ಇಂದು ಮಧ್ಯಾಹ್ನ 2 ಗಂಟೆಗೆ ಲೋಕಸಭೆಯಲ್ಲಿ ಪ್ರಧಾನಿ ಮಾತು: ಭಾರತದ ನಿಲುವಿನ ಬಗ್ಗೆ ಸ್ಪಷ್ಟನೆ | PM Modi

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು(ಮಾ. 23) ಮಧ್ಯಾಹ್ನ 2 ಗಂಟೆಗೆ ಲೋಕಸಭೆಯಲ್ಲಿ ಮಾತನಾಡಲಿದ್ದು, ಮಧ್ಯಪ್ರಾಚ್ಯದಲ್ಲಿನ ಪ್ರಸ್ತುತ ಸಂಘರ್ಷದ ಕುರಿತ ಮಾತನಾಡಲಿದ್ದು, ಭಾರತದ ನಿಲುವಿನ ಬಗ್ಗೆ ಸ್ಪಷ್ಟಪಡಿಸುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.
ಲೋಕಸಭೆ ಸಚಿವಾಲಯದ ಪ್ರಕಾರ ಮಧ್ಯಾಹ್ನ 2 ಗಂಟೆಗೆ ಪ್ರಧಾನಿ ಮೋದಿ ಭಾಷಣವನ್ನು ಪಟ್ಟಿ ಮಾಡಲಾಗಿದೆ. ಭಾಷಣದಲ್ಲಿ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಸಂಘರ್ಷದ ಪ್ರಮುಖ ಅಂಶಗಳು ಮತ್ತು ಈ ಬಗ್ಗೆ ಭಾರತದ ನಿಲುವಿನ ಸುದೀರ್ಘವಾಗಿ ಮಾತನಾಡಲಿದ್ದಾರೆ ಎನ್ನಲಾಗಿದೆ.
ಅಮೆರಿಕ-ಇಸ್ರೇಲ್-ಇರಾನ್ ಯುದ್ಧದ ನಡುವೆ ಅಗತ್ಯ ವಸ್ತುಗಳ ಪೂರೈಕೆ ಮತ್ತು ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ದೀರ್ಘ ಮತ್ತು ಅಲ್ಪಾವಧಿಯ ಕ್ರಮಗಳ ಕುರಿತು ಚರ್ಚಿಸಲು ನಿನ್ನೆ ಪ್ರಧಾನಿ ಮೋದಿ ಸಂಪುಟ ಭದ್ರತಾ ಸಮಿತಿಯ ಸಭೆ ನಡೆಸಿದ್ದರು. ಇಂದು ಈ ಕುರಿತು ಸಂಸತ್​​ನಲ್ಲಿ ಮಾಹಿತಿ ನೀಡುವ ಸಾಧ್ಯತೆ. 
ಫೆ. 28ರಂದು ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ವಿರುದ್ಧ ಮಿಲಿಟರಿ ಕಾರ್ಯಾಚರಣೆ ಆರಂಭಿಸಿವು. ಯುದ್ಧದ ಮೊದಲ ದಿನವೇ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರು ಕ್ಷಿಪಣಿ ದಾಳಿಯಲ್ಲಿ ಕೊಲ್ಲಲ್ಪಟ್ಟರು. ಇದಕ್ಕೆ ಪ್ರತಿಯಾಗಿ ಇರಾನ್ ಇಸ್ರೇಲ್ ಮತ್ತು ತನ್ನ ಸುತ್ತಮುತ್ತಲಿನ ಗಲ್ಫ್ ದೇಶಗಳ ಅಮೆರಿಕಾ ಸೇನಾ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿತ್ತು.
ಮುಂದುವರೆದು ವಿಶ್ವದ ತೈಲ ಪೂರೈಕೆಯ ಐದನೇ ಒಂದು ಭಾಗವನ್ನು ಸಾಗಿಸುವ ಪ್ರಮುಖ ಮಾರ್ಗವಾಗಿರು ಹಾರ್ಮುಜ್ ಜಲಸಂಧಿಯನ್ನು ಮುಚ್ಚಿತ್ತು. ಇದರಿಂದ ಪ್ರಪಂಚದಾದ್ಯಂತ ತೈಲ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಹಲವು ದೇಶಗಳಲ್ಲಿ ತೈಲ ಬೆಲೆ ಹೆಚ್ಚಳವಾಗಿದೆ (ಏಜೆನ್ಸೀಸ್)