ಬಿಜೆಪಿ ಸಂಸದ ಸಂಬಿತ್ ಪಾತ್ರ 
ದೇಶ

ಸರ್ದಾರ್ ಪಟೇಲ್, ಅಂಬೇಡ್ಕರ್ ಪರಂಪರೆಯನ್ನು ಕಾಂಗ್ರೆಸ್ ಹಾಳು ಮಾಡಿದೆ; ಸೋನಿಯಾ ಗಾಂಧಿ ಆರೋಪಕ್ಕೆ ಬಿಜೆಪಿ ತಿರುಗೇಟು | BJP

ನವದೆಹಲಿ: ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಪರಂಪರೆಯನ್ನು ನಾಶ ಮಾಡಲು ಬಿಜೆಪಿ(BJP) ಪ್ರಯತ್ನಿಸುತ್ತಿದೆ ಎಂಬ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಪಕ್ಕೆ ಭಾನುವಾರ(ಡಿ. 07) ಬಿಜೆಪಿ ತಿರುಗೇಟು ನೀಡಿದ್ದು, ಸರ್ದಾರ್ ಪಟೇಲ್, ಅಂಬೇಡ್ಕರ್ ಅವರ ಪರಂಪರೆ ಹಾಳು ಮಾಡಿದ್ದು ಕಾಂಗ್ರೆಸ್ ಎಂದು ಕಿಡಿಕಾರಿದೆ.
ದೆಹಲಿಯ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸದ ಸಂಬಿತ್ ಪಾತ್ರ, ಸರ್ದಾರ್ ವಲ್ಲಭಭಾಯಿ ಪಟೇಲ್, ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರಂತಹ ನಾಯಕರ ಕೊಡುಗೆಗಳನ್ನು ಕಾಂಗ್ರೆಸ್ ದುರ್ಬಲಗೊಳಿಸಿದೆ. ಇಂದು ನೆಹರು ಅವರ ಪರಂಪರೆಗೆ ಯಾರಾದರೂ ಹೆಚ್ಚು ಹಾನಿ ಮಾಡುತ್ತಿದ್ದರೆ, ಅದು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಗಾಂಧಿ ಕುಟುಂಬದ ಸದಸ್ಯರೇ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಂಸತ್ತಿನಲ್ಲಿ ವಂದೇ ಮಾತರಂ ಕುರಿತು ಚರ್ಚೆ ನಡೆಯುವಾಗ, ನೆಹರೂ ಅವರ ವಾಸ್ತವ ಎಲ್ಲರಿಗೂ ಬಹಿರಂಗವಾಗುತ್ತದೆ ಎಂದು ನಾನು ಭಾವಿಸುತ್ತೇನೆ. ಬಿಜೆಪಿ ಇತಿಹಾಸವನ್ನು ಪುನಃ ಬರೆಯಲು ಪ್ರಯತ್ನಿಸುತ್ತಿಲ್ಲ. ಬಿಜೆಪಿ ಇತಿಹಾಸವನ್ನು ಸರಿಪಡಿಸಲು ಮತ್ತು ಈ ದೇಶದ ಸ್ವಾತಂತ್ರ್ಯಕ್ಕೆ ಮತ್ತು ಈ ದೇಶದ ವಿವಿಧ ಅಂಶಗಳಿಗೆ ನಿಜವಾಗಿಯೂ ಕೊಡುಗೆ ನೀಡಿದ ಜನರಿಗೆ ಸರಿಯಾದ ಮನ್ನಣೆ ನೀಡಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ (ಏಜೆನ್ಸೀಸ್).