ಸಚಿವ ಕಿರಣ್ ರಿಜಿಜು, ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಮಲ್ಲಿಕಾರ್ಜುನ ಖರ್ಗೆ
ನವದೆಹಲಿ: ದೆಹಲಿಯಲ್ಲಿ ಭಾನುವಾರ ನಡೆದ ಪಕ್ಷದ ಬೃಹತ್ ಮತ ಕಳ್ಳತನ ಱಲಿಯಲ್ಲಿ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ ಎಂಬ ಆರೋಪದ ಮೇಲೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು(Kiren Rijiju) ಸೋಮವಾರ (ಡಿ.15) ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಬಗ್ಗೆ ಲೋಕಸಭೆಯಲ್ಲಿ ಮಾತನಾಡಿದ ರಿಜಿಜು, ರಾಹುಲ್ ಗಾಂಧಿ, ಖರ್ಗೆ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಕಾಂಗ್ರೆಸ್‌ನ ಎಲ್ಲಾ ಹಿರಿಯ ನಾಯಕರು ಅಲ್ಲಿದ್ದಾಗ ಘೋಷಣೆಗಳನ್ನು ಕೂಗಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.
ಮುಂದುವರದು ಮಾತನಾಡಿದ ರಿಜಿಜು, 2014ರಲ್ಲಿ ಬಿಜೆಪಿ ಸಂಸದರೊಬ್ಬರು ಪ್ರತಿಪಕ್ಷಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದರು. ಅಲ್ಲದೆ, ನಾವು ಶತ್ರುಗಳಲ್ಲ, ನಾವು ಕೇವಲ ಪ್ರತಿಸ್ಪರ್ಧಿಗಳು ಎಂದು ಹೇಳಿವ ಮೂಲಕ ನಾವು ಚುನಾಯಿತ ಪ್ರತಿನಿಧಿಗಳು ಮತ್ತು ನಾವು ಅದಕ್ಕೆ ತಕ್ಕಂತೆ ಕೆಲಸ ಮಾಡುತ್ತೇವೆ ಎಂದು ಪ್ರಧಾನಿ ತಕ್ಷಣವೇ ಅವರನ್ನು ಕ್ಷಮೆಯಾಚಿಸಲು ಕೇಳಿಕೊಂಡಿದ್ದರು. ಅದರೆ ನಿನ್ನೆ, ಪ್ರಧಾನಿ ಮೋದಿ ವಿರುದ್ಧ ಘೋಷಣೆಗಳನ್ನು ಎತ್ತಲಾಗಿದೆ ಮತ್ತು ಜನರು ಅವರ ಸಮಾಧಿಯನ್ನು ಅಗೆಯುತ್ತೇವೆ ಎಂದು ಘೋಷಣೆ ಕೂಗಿದ್ದಾರೆ. ಇದು ಅತ್ಯಂತ ನಿರಾಶಾದಾಯಕವಾಗಿದೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದ್ದು, ಪ್ರಧಾನಿ ಮೋದಿ ವಿಶ್ವದ 140 ಕೋಟಿ ಭಾರತೀಯರನ್ನು ಪ್ರತಿನಿಧಿಸುತ್ತಾರೆ.ಅಲ್ಲದೆ, ಮೋದಿಯು ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿದ್ದಾರೆ. ಕಾಂಗ್ರೆಸ್ ನಾಯಕತ್ವ ಇದಕ್ಕೆ ತಕ್ಷಣ ಕ್ಷಮೆಯಾಚಿಸಬೇಕು ಎಂದು ರಿಜಿಜು ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ಗದ್ದಲ
ರಾಜ್ಯಸಭೆಯಲ್ಲೂ ಇದೇ ರೀತಿಯ ಗೊಂದಲ ಸೃಷ್ಟಿಯಾಗಿದ್ದು, ಕೇಂದ್ರ ಸಚಿವ ಜೆ.ಪಿ. ನಡ್ಡಾ ಸರ್ಕಾರದ ಆರೋಪದ ನೇತೃತ್ವ ವಹಿಸಿ, ಕಾಂಗ್ರೆಸ್ ಪಕ್ಷ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ಉನ್ನತ ನಾಯಕರು ಈ ಘಟನೆಗೆ ತಕ್ಷಣ ಕ್ಷಮೆಯಾಚಿಸಬೇಕು ಎಂದು ತಿಳಿಸಿದ್ದಾರೆ.
ನಿನ್ನೆ ನಡೆದ ಕಾಂಗ್ರೆಸ್ ಱಲಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ಇದು ಕಾಂಗ್ರೆಸ್ ಪಕ್ಷದ ಚಿಂತನೆ ಮತ್ತು ಮನಸ್ಥಿತಿಯನ್ನು ತೋರಿಸುತ್ತದೆ. ಪ್ರಧಾನಿಯ ವಿರುದ್ಧ ಇಂತಹ ಮಾತುಗಳನ್ನು ಹೇಳುವುದು ಖಂಡನೀಯವಾಗಿದೆ. ಇದಕ್ಕಾಗಿ ಸೋನಿಯಾ ಗಾಂಧಿಯು ರಾಷ್ಟ್ರದ ಕ್ಷಮೆಯಾಚಿಸಬೇಕು ಎಂದು ನಡ್ಡಾ ಹೇಳಿದ್ದಾರೆ.
ಪ್ರಧಾನಿ ಮೋದಿ ವಿರುದ್ಧ ಘೋಷಣೆಗಳು
ರಾಷ್ಟ್ರ ರಾಜಧಾನಿಯಲ್ಲಿ ನಡೆದ ಪಕ್ಷದ ವೋಟ್ ಚೋರಿ ಱಲಿಯಲ್ಲಿ ಕೆಲವು ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಪ್ರಧಾನಿ ಮೋದಿ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ಮೋದಿ, ನಾವು ನಿಮ್ಮ ಸಮಾಧಿಯನ್ನು ಅಗೆಯುತ್ತೇವೆ ಎಂದು ಕಾರ್ಯಕರ್ತರು ಹೇಳುತ್ತಿರುವುದು ವಿಡಿಯೋದಲ್ಲಿ ವೈರಲ್ ಆಗಿದೆ,(ಏಜೆನ್ಸೀಸ್).