Himant Biswa Sharma | ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ 
ದೇಶ

ಕಾಂಗ್ರೆಸ್ ನಾಯಕರಿಗೆ ಶಾಕ್..ಅಸ್ಸಾಂ ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಕೋರ್ಟ್ ಸೂಚನೆ! | Himant Biswa Sharma

ಪ್ರಮುಖ ಮುಖ್ಯಾಂಶಗಳು

  • ಸಿಎಂ ಹಿಮಂತ ಬಿಸ್ವಾ ಶರ್ಮಾ ವಿರುದ್ಧ ಮಾನನಷ್ಟ ಹೇಳಿಕೆಗಳನ್ನು ನೀಡದಂತೆ ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸೂಚನೆ
  • ಕಾಂಗ್ರೆಸ್ ನಾಯಕರು ಮತ್ತು ಪ್ರಮುಖ ಅಸ್ಸಾಮಿ ದಿನಪತ್ರಿಕೆಯು ನ್ಯಾಯಾಲಯಕ್ಕೆ ಹಾಜರಾಗುವವರೆಗೆ ಯಾವುದೇ ಮಾನಹಾನಿಕರ ಹೇಳಿಕೆಗಳನ್ನು ನೀಡಬಾರದು, ಪ್ರಕಟಿಸಬಾರದು
  • ಕಾಂಗ್ರೆಸ್​​ ನಾಯಕರ ವಿರುದ್ಧ 500 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ಹೂಡಿದ್ದ ಸಿಎಂ ಹಿಮಂತ ಬಿಸ್ವಾ ಶರ್ಮಾ
ದಿಸ್ಪೂರ್​​: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himant Biswa Sharma) ವಿರುದ್ಧ ಮಾನನಷ್ಟ ಹೇಳಿಕೆಗಳನ್ನು ನೀಡದಂತೆ ಕಾಂಗ್ರೆಸ್​ ಸಂಸದ ಗೌರವ್ ಗೊಗೊಯ್, ಭೂಪೇಶ್ ಬಾಘೇಲ್ ಮತ್ತು ಜಿತೇಂದ್ರ ಸಿಂಗ್ ಸೇರಿದಂತೆ ಇತರ ಕೆಲ ನಾಯಕರಿಗೆ ಗುವಾಹಟಿಯ ನ್ಯಾಯಾಲಯವು ಸೂಚನೆ ನೀಡಿದೆ ಎಂದು ವರದಿಯಾಗಿದೆ.
ಸಿಎಂ ಶರ್ಮಾ ಕಾಂಗ್ರೆಸ್​​ ನಾಯಕರ ವಿರುದ್ಧ 500 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ಹೂಡಿದ ಬಳಿಕ ಈ ಸೂಚನೆ ಹೊರ ಬಿದ್ದಿದೆ.
ಸಿವಿಲ್ ನ್ಯಾಯಾಧೀಶರಾದ ನಯಂಜ್ಯೋತಿ ಶರ್ಮಾ, ಈ ಮೇಲೆ ತಿಳಿಸಲಾದ ಕಾಂಗ್ರೆಸ್ ನಾಯಕರು ಮತ್ತು ಪ್ರಮುಖ ಅಸ್ಸಾಮಿ ದಿನಪತ್ರಿಕೆಯು ನ್ಯಾಯಾಲಯಕ್ಕೆ ಹಾಜರಾಗುವವರೆಗೆ ಯಾವುದೇ ಮಾನಹಾನಿಕರ ಹೇಳಿಕೆಗಳನ್ನು ನೀಡಬಾರದು, ಪ್ರಕಟಿಸಬಾರದು ಮತ್ತು ಪ್ರಸಾರ ಮಾಡಬಾರದು ಎಂದು ಆದೇಶಿಸಿದ್ದಾರೆ. ಮಾರ್ಚ್ 9 ರಂದು ನಡೆಯುವ ಮುಂದಿನ ವಿಚಾರಣೆಗೆ ಕಾಂಗ್ರೆಸ್ ನಾಯಕರು ಹಾಜರಾಗುವಂತೆ ತಿಳಿಸಲಾಗಿದೆ.

ಸಿಎಂ ಕುಟುಂಬದಿಂದ ಭೂಕಬಳಿಕೆ: ಕಾಂಗ್ರೆಸ್ ಆರೋಪ

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಕುಟುಂಬವು ರಾಜ್ಯಾದ್ಯಂತ ಅಕ್ರಮವಾಗಿ ದೊಡ್ಡ ಪ್ರಮಾಣದ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ಆರೋಪಿಸಿದ ಬಳಿಕ ಅಸ್ಸಾಂನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಗೊಗೊಯ್, ಅಸ್ಸಾಂನ ವಿವಿಧ ಪ್ರದೇಶಗಳಲ್ಲಿ ಹರಡಿರುವ ಸುಮಾರು 12,000 ಬಿಘಾ ಭೂಮಿಯನ್ನು ಮುಖ್ಯಮಂತ್ರಿಯ ಕುಟುಂಬವು ಕಬಳಿಸಿದೆ ಎಂದು ಹೇಳಿದ್ದಾರೆ.

ಆರೋಪಗಳಿಗೆ ಸಿಎಂ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದೇನು..?

ಈ ಆರೋಪಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಶರ್ಮಾ, ಯಾವುದೇ ತಪ್ಪು ಮಾಡಿಲ್ಲ ಎಂದು ಕಾಂಗ್ರೆಸ್​ ನಾಯಕರ ಆರೋಪಗಳನ್ನು ಸ್ಪಷ್ಟವಾಗಿ ನಿರಾಕರಿಸಿದರು ಮತ್ತು ಗೊಗೊಯ್ ಮತ್ತು ಇತರ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದರು.

ಸಿಎಂ ಕುಟುಂಬದಿಂದ ಭೂಕಬಳಿಕೆ: ಕಾಂಗ್ರೆಸ್ ಆರೋಪ

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಕುಟುಂಬವು ರಾಜ್ಯಾದ್ಯಂತ ಅಕ್ರಮವಾಗಿ ದೊಡ್ಡ ಪ್ರಮಾಣದ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ಆರೋಪಿಸಿದ ಬಳಿಕ ಅಸ್ಸಾಂನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಸಂಸದ ಗೊಗೊಯ್, ಅಸ್ಸಾಂನ ವಿವಿಧ ಪ್ರದೇಶಗಳಲ್ಲಿ ಹರಡಿರುವ ಸುಮಾರು 12,000 ಬಿಘಾ ಭೂಮಿಯನ್ನು ಮುಖ್ಯಮಂತ್ರಿಯ ಕುಟುಂಬವು ಕಬಳಿಸಿದೆ ಎಂದು ಹೇಳಿದ್ದಾರೆ.

ಸಂಸದ ಗೊಗೊಯ್​ಗೆ ಪಾಕ್​ ನಂಟು..?

ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮತ್ತು ಅವರ​ ಪತ್ನಿಯ ಪಾಕಿಸ್ತಾನದೊಂದಿಗೆ ಸಂಪರ್ಕದ ಪ್ರಕರಣವನ್ನು ಗೃಹ ಸಚಿವಾಲಯಕ್ಕೆ ಕಳುಹಿಸಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಈ ಹಿಂದೆ ತಿಳಿಸಿದ್ದರು.
ಈ ಗಂಭೀರ ಪ್ರಕರಣ ಮೂರು ವ್ಯಕ್ತಿಗಳ ಸುತ್ತ ಸುತ್ತುತ್ತದೆ ಎಂದಿರುವ ಶರ್ಮಾ, ಹಾಲಿ ಸಂಸತ್ ಸದಸ್ಯರು, ಬ್ರಿಟಿಷ್ ಪ್ರಜೆಯಾಗಿರುವ ಅವರ ಪತ್ನಿ ಮತ್ತು ಅಲಿ ತೌಕೀರ್ ಶೇಖ್ ಎಂದು ಗುರುತಿಸಲಾದ ಪಾಕಿಸ್ತಾನಿ ಪ್ರಜೆ ಸೇರಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಬ್ರಿಟಿಷ್ ಪ್ರಜೆ ಮತ್ತು ಸಂಸದರ ಜೊತೆಗೂಡಿ ಶೇಖ್ ನಡೆಸಿದ ರಾಷ್ಟ್ರ ವಿರೋಧಿ ಪಿತೂರಿಯ ತನಿಖೆಗಾಗಿ ಅಸ್ಸಾಂ ಸರ್ಕಾರವು ಎಸ್‌ಐಟಿಯನ್ನು ರಚಿಸಿತ್ತು. ವಿಷಯದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಅದನ್ನು ಗೃಹ ಸಚಿವಾಲಯಕ್ಕೆ ಹಸ್ತಾಂತರಿಸುವ ನಿರ್ಧರಕ್ಕೆ ಬರಲಾಗಿದೆ ಎಂದು ಅಸ್ಸಾಂ ಸಿಎಂ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಪಾಕಿಸ್ತಾನದ ಗೂಢಚಾರ ಸಂಸ್ಥೆಯಾದ ಐಎಸ್‌ಐ ಜೊತೆ ಗೊಗೊಯ್ ಪತ್ನಿಯ ಸಂಪರ್ಕದ ಆರೋಪದ ಮೇಲೆ ಸಂಸದ ಗೊಗೊಯ್ ವಿರುದ್ಧ ತನಿಖೆ ನಡೆಯುತ್ತಿದೆ. ಭಾರತದ ಆಂತರಿಕ ವ್ಯವಹಾರಗಳಲ್ಲಿ ಕಾಂಗ್ರೆಸ್​​ ಸಂಸದರ ಬ್ರಿಟಿಷ್ ಪತ್ನಿ ಎಲಿಜಬೆತ್ ಕೋಲ್ಬರ್ನ್ ಜೊತೆ ಸಂಪರ್ಕ ಹೊಂದಿದ್ದಾರೆಂದು ಹೇಳಲಾದ ಪಾಕಿಸ್ತಾನಿ ಪ್ರಜೆ ಅಲಿ ತೌಕೀರ್ ಶೇಖ್ ಹಸ್ತಕ್ಷೇಪದ ಪ್ರಕರಣವನ್ನು ತನಿಖೆ ಮಾಡಲು ರಾಜ್ಯ ಸರ್ಕಾರ ಎಸ್‌ಐಟಿಯನ್ನು ರಚಿಸಿತ್ತು(ಏಜೆನ್ಸೀಸ್​).