ಸಿಜೆಪಿ ಸ್ಥಾಪಕ ಅಭಿಜಿತ್ ದೀಪ್ಕೆ ಮತ್ತು ವಕ್ತಾರ ಅಶುತೋಷ್ ರಾಂಕಾ 
ದೇಶ

ಅಭಿಜಿತ್ ದಿಪ್ಕೆ, ದಾಸ್ ಸೇರಿ ಮೂವರು ಸಿಜೆಪಿ ನಾಯಕರನ್ನು ಬಿಡುಗಡೆಗೊಳಿಸಿದ ನ್ಯಾಯಾಲಯ: ಒಂದು ವರ್ಷ ಶಾಂತಿ ಭಂಗ ತರದಂತೆ ಷರತ್ತು |CJP leaders

ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕರೆದಿದ್ದ ಪ್ರತಿಭಟನೆಯಲ್ಲಿ ಭಾಗವಹಿಸುವ ಮೊದಲೇ ಶನಿವಾರ ವಿಮಾನದೊಳಗೆ ಬಂಧಿಸಲ್ಪಟ್ಟಿದ್ದ ಸಿಜೆಪಿ ನಾಯಕರಾದ ಅಭಿಜಿತ್ ದಿಪ್ಕೆ, ಸೌರವ್ ದಾಸ್ ಹಾಗೂ ಅಶುತೋಷ್ ರಾಂಕಾ ಅವರನ್ನು ಭಾನುವಾರ(ಅ. 11) ನ್ಯಾಯಾಲಯ ಬಿಡುಗಡೆಗೊಳಿಸಿದೆ ಎಂದು ವರದಿಯಾಗಿದೆ.

ನವದೆಹಲಿ: ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕರೆದಿದ್ದ ಪ್ರತಿಭಟನೆಯಲ್ಲಿ ಭಾಗವಹಿಸುವ ಮೊದಲೇ ಶನಿವಾರ ವಿಮಾನದೊಳಗೆ ಬಂಧಿಸಲ್ಪಟ್ಟಿದ್ದ ಸಿಜೆಪಿ ನಾಯಕರಾದ ಅಭಿಜಿತ್ ದಿಪ್ಕೆ, ಸೌರವ್ ದಾಸ್ ಹಾಗೂ ಅಶುತೋಷ್ ರಾಂಕಾ ಅವರನ್ನು ಭಾನುವಾರ(ಅ. 11) ನ್ಯಾಯಾಲಯ ಬಿಡುಗಡೆಗೊಳಿಸಿದೆ ಎಂದು ವರದಿಯಾಗಿದೆ.

ಮೂವರು ಸಿಜೆಪಿ ನಾಯಕರನ್ನು ಇಂದು ಬೆಳಿಗ್ಗೆ ದೆಹಲಿ ಕಂಟೋನ್ಮೆಂಟ್‌ನಲ್ಲಿರುವ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಮ್ಯಾಜಿಸ್ಟ್ರೇಟ್ ಮೂವರಿಗೆ ಒಂದು ವರ್ಷದವರೆಗೆ ಯಾವುದೇ ಶಾಂತಿ ಭಂಗ ತರದಂತ ಷರತ್ತು ವಿಧಿಸಿ, ಬಿಡುಗಡೆಗೆ ಆದೇಶ ನೀಡಿದೆ.

ಮತದಾರರ ಪಟ್ಟಿ ವಿಶೇಷ ಪರಿಷ್ಕರಣಾ ಪ್ರಕ್ರಿಯೆಯಲ್ಲಿ (ಎಸ್ಐಆರ್) ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಒತ್ತಾಯಿಸಿ ಶನಿವಾರ ಸಿಜೆಪಿ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಜಂತರ್ ಮಂತರ್ ಬಳಿ ನಡೆಯಬೇಕಿದ್ದ ಈ ಬೃಹತ್ ಪ್ರತಿಭಟನಾ ಸಭೆಯನ್ನು ತಡೆಯಲು ಪೊಲೀಸರು ಭಾರಿ ಭದ್ರತಾ ವ್ಯವಸ್ಥೆ ಕೈಗೊಂಡಿದ್ದು, ಮುಂಜಾಗೃತಾ ಕ್ರಮವಾಗಿ ನೂರಾರು ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡಿದ್ದರು.

ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ತರಬಹುದು ಎಂಬ ಮುನ್ನೆಚ್ಚರಿಕೆ ಕ್ರಮವಾಗಿ, ರಾಜಕಾರಣಿಗಳು ಸೇರಿದಂತೆ 3,000ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿತ್ತು ಮತ್ತು ನಂತರ ಅವರೆಲ್ಲರನ್ನೂ ರಾತ್ರಿ ವೇಳೆ ಬಿಡುಗಡೆ ಮಾಡಲಾಗಿದೆ. ಎನ್​ಡಿಎ ಸರ್ಕಾರದ ತೀವ್ರ ವಿಮರ್ಶಕರಾದ ಯುಟ್ಯೂಬರ್ ಧ್ರುವ್ ರಾಠೀ ಅವರನ್ನು ತಡರಾತ್ರಿ ಬಿಡುಗಡೆ ಮಾಡಲಾಗಿದೆ.

ಇನ್ನೂ ಇಂದು ಸುಪ್ರೀಂಕೋರ್ಟ್​ನಲ್ಲಿ ಶನಿವಾರ ದೆಹಲಿ ಮೆಟ್ರೋ ನಿಲ್ದಾಣಗಳು ಮತ್ತು ರೈಲು ಸೇವೆಗಳನ್ನು ಸಂಪೂರ್ಣವಾಗಿ ಮುಚ್ಚುವುದರ ವಿರುದ್ಧ ಸಲ್ಲಿಸಲಾದ ನ್ಯಾಯಾಂಗ ನಿಂದನೆ ಅರ್ಜಿಯನ್ನು ವಿಚಾರಣೆ ನಡೆಸುವ ಸಾಧ್ಯತೆಯಿದೆ. ಶನಿವಾರ ನಡೆಯಲಿರುವ ಪ್ರತಿಭಟನೆಗೆ ಮುನ್ನ ಮೆಟ್ರೋ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಬಾರದು ಎಂದು ಆದೇಶ ನೀಡಿತ್ತು (ಏಜೆನ್ಸೀಸ್).