ಸಾಂದರ್ಭಿಕ ಚಿತ್ರ 
ದೇಶ

ಸಿಲಿಂಡರ್ ಸ್ಫೋಟ; ಎರಡು ಅಂತಸ್ತಿನ ಮನೆ ಕುಸಿದು ನಾಲ್ವರು ಸಾವು, ಮೂವರಿಗೆ ಗಂಭೀರ ಗಾಯ | Cylinder explosion

ಉತ್ತರ ಪ್ರದೇಶದ ಫತೇಪುರ ಜಿಲ್ಲೆಯ ಮಾಲ್ವಾನ್ ಪಟ್ಟಣದಲ್ಲಿ ಸೋಮವಾರ(ಸೆ. 28) ಸಂಜೆ ಮನೆಯಲ್ಲಿದ್ದ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಎರಡು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ, ಮೂರು ವರ್ಷದ ಬಾಲಕ ಸೇರಿ ನಾಲ್ವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಲಖನೌ: ಉತ್ತರ ಪ್ರದೇಶದ ಫತೇಪುರ ಜಿಲ್ಲೆಯ ಮಾಲ್ವಾನ್ ಪಟ್ಟಣದಲ್ಲಿ ಸೋಮವಾರ(ಸೆ. 28) ಸಂಜೆ ಮನೆಯಲ್ಲಿದ್ದ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಎರಡು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ, ಮೂರು ವರ್ಷದ ಬಾಲಕ ಸೇರಿ ನಾಲ್ವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಗಾಯಗೊಂಡವರಲ್ಲಿ ಇಬ್ಬರು ಅಪಾಯದಿಂದ ಪಾರಾಗಿದ್ದು, ಮತ್ತೊಬ್ಬರು ಶೇಕಡಾ 90ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಸಂಜೆ ಅಡುಗೆ ಮಾಡುವ ಸಮಯದಲ್ಲಿ ಸಿಲಿಂಡರ್ ಸ್ಪೋಟವಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕದಳ ಮತ್ತು ಪೊಲೀಸರು ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ಅಭಿಮನ್ಯು ಮಾಂಗ್ಲಿಕ್, ಹಣ್ಣು ಮತ್ತು ತರಕಾರಿ ಮಾರಾಟಗಾರ ಸುರೇಶ್ ಗುಪ್ತಾ ಅಲಿಯಾಸ್ ಚುನ್ನಾರ್ ಅವರ ಮನೆಯಲ್ಲಿ ಅಡುಗೆ ಮಾಡುವಾಗ ಸಂಜೆ 5 ಗಂಟೆಗೆ ಸಿಲಿಂಡರ್ ಸ್ಫೋಟಗೊಂಡಿದೆ. ಪರಿಣಾಮ ಎರಡು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಕುಟುಂಬದ ಸದಸ್ಯರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು ಎಂದು ತಿಳಿಸಿದ್ದಾರೆ.

ಏಳು ಜನರನ್ನು ಅವಶೇಷಗಳಿಂದ ಹೊರತೆಗೆದು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಳಿಕ ಚಿಕಿತ್ಸೆಯ ಸಮಯದಲ್ಲಿ ಮೂರು ವರ್ಷದ ಬಾಲಕ, 18 ವರ್ಷದ ಯುವಕ ಹಾಗೂ ಇಬ್ಬರು ಹದಿಹರೆಯದವರು ಸೇರಿದಂತೆ ನಾಲ್ವರು ಅಸುನೀಗಿದ್ದಾರೆ. ಅವರ ಸಂಪೂರ್ಣ ಗುರುತು ಪತ್ತೆಯಾಗಿಲ್ಲ. ಸ್ಫೋಟದ ಕಾರಣವನ್ನು ತನಿಖೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ (ಏಜೆನ್ಸೀಸ್).