ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ಅಭಿಷೇಕ್ ಪೊರೆಲ್ ಬಂಧನ
- ವಿದ್ಯಾರ್ಥಿ ಮೇಲೆ ಅತ್ಯಾಚಾರ ಆರೋಪ
- ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ಅಭಿಷೇಕ್ ಪೊರೆಲ್ ಬಂಧನ
- ವಿದ್ಯಾರ್ಥಿನಿಯ ನತ್ನ ಫೋಟೊಗಳನ್ನು ಬಳಸಿ ಬ್ಲಾಕ್ಮೇಲ್ ಮಾಡಿದ ಆರೋಪ
ಕೊಲ್ಕತ: ಯುವತಿಯೋರ್ವಳ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಹಿನ್ನಲೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಓಪನಿಂಗ್ ಬ್ಯಾಟ್ಸ್ಮನ್ ಹಾಗೂ ವಿಕೇಟ್ ಕೀಪರ್ ಅಭಿಷೇಕ್ ಪೊರೆಲ್ (Abhishek Porel) ನನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆಂದು ವರದಿಯಾಗಿದೆ.
ಈ ಕುರಿತಂತೆ ಮೊಗ್ರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜುಲೈ 20 ರಂದು ಅರ್ಜಿ ವಿಚಾರಣೆ ನಡೆಸಿದ್ದ ಕೊಲ್ಕತ ಹೈ ಕೋರ್ಟ್, ಅಭಿಷೇಕ್ ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಎಂದು ದೃಢಪಟ್ಟರೆ ಬಂಧಿಸುವಂತೆ ನಿರ್ದೇಶನ ನೀಡಿತ್ತು.
ಈಗ ಅಭಿಷೇಕ್ ಈ ಪ್ರಕರಣದಲ್ಲಿ ನೇರ ಸಂಬಂಧ ಹೊಂದಿರುವ ಹಿನ್ನಲೆ ಬಂಧಿಸಲಾಗಿದೆ ಎಂದು ಹೂಗ್ಲಿಯ ಪೊಲೀಸ್ ವರಿಷ್ಟಾಧಿಕಾರಿ ಕುವರ್ ಭೂಷಣ್ ಸಿಂಗ್ ತಿಳಿಸಿದ್ದಾರೆ.
ಪ್ರಕರಣದ ಹಿನ್ನಲೆ!
ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆಡುವ ಅಭಿಷೇಕ್ ಪೊರೆಲ್, ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾಗಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಯೊಬ್ಬಳು ಆರೋಪಿಸಿದ್ದಾಳೆ.
ಅಭಿಷೇಕ್ ನನ್ನನ್ನು ಸೋಷಿಯಲ್ ಮೀಡಿಯಾನಲ್ಲಿ ಪರಿಚಯವಾಗಿದ್ದ. ನನ್ನ ಜೊತೆ ಅವನು ನಿರಂತರವಾಗಿ ಮೆಸೇಜ್ ಮಾಡುತ್ತಿದ್ದ. ನಂತರದ ದಿನಗಳಲ್ಲಿ ಅವನು ನನ್ನ ನಗ್ನ, ಅರೆ-ನಗ್ನ ಚಿತ್ರಗಳನ್ನು ಹಾಗೂ ವಿಡಿಯೋಗಳನ್ನು ನನ್ನ ಅನುಮತಿ ಇಲ್ಲದೇ ಶೇಖರಿಸಿದ್ದಾನೆ. ಅಂತಯೇ ಅದನ್ನು ಬಳಸಿಕೊಂಡು ನನಗೆ ಬ್ಲಾಕ್ಮೇಲ್ ಮಾಡಿದ್ದಾಗಿ ಯುವತಿ ತನ್ನ ದೂರಿನಲ್ಲಿ ತಿಳಿಸಿದ್ದಾಳೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿಷೇಕ್ ಪೊರೆಲ್ಗೆ ಸೇರಿದ್ದ ಹಾರ್ಡ್ಡಿಸ್ಕ್, ಪಡೆಡ್ರೈವ್, ಲ್ಯಾಪ್ಟಾಪ್, ಮೊಬೈಲ್ ಮೊದಲಾದ ಇಲೆಕ್ಟ್ರಾನಿಕ್ ಸಾಧನಗಳನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದೆವೆಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು.
ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊರೆಲ್ನ ಬಂಧನವಾಗಿದ್ದು, ಮುಂದೆ ಏನಾಗಲಿದೆ ಎನ್ನುವುದಕ್ಕೆ ಕಾಲವೇ ಉತ್ತರಿಸಲಿದೆ, (ಏಜನ್ಸೀಸ್).