ಘಟನೆಯ ಸ್ಥಳ 
ದೇಶ

ದಟ್ಟ ಮಂಜು: ದೆಹಲಿ-ಲಖನೌ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: 12ಕ್ಕೂ ಹೆಚ್ಚು ಮಂದಿಗೆ ಗಾಯ | Accidents

ಲಖನೌ: ಭಾನುವಾರ(ಜ. 18) ಮುಂಜಾನೆಯ ದಟ್ಟ ಮಂಜುವಿನಿಂದ ಉತ್ತರ ಪ್ರದೇಶದ ಅಮ್ರೋಹಾ ಬಳಿಯ ದೆಹಲಿ-ಲಖನೌ ಹೆದ್ದಾರಿಯಲ್ಲಿ(NH-9) ಭೀಕರ ಸರಣಿ ಅಪಘಾತ ಸಂಭವಿಸಿದ್ದು, 12ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಗಜ್ರೌಲಾ ಕೊಟ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಶಹವಾಜ್‌ಪುರ್ ಡೋರ್ ಗ್ರಾಮದ ಬಳಿ ಈ ಸರಣಿ ಅಪಘಾತ ಸಂಭವಿಸಿದೆ. ದಟ್ಟವಾಗಿ ಮಂಜು ಆವರಿಸಿದ್ದರಿಂದ ರಸ್ತೆಯಲ್ಲಿ ಚಲಿಸುತ್ತಿದ್ದ ವಾಹನ ಚಾಲಕರಿಗೆ ಮುಂದಿನ ವಾಹನಗಳು ಕಾಣದೆ ಸುಮಾರು 10 ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದಿವೆ.
ಘಟನೆಯ ಪರಿಣಾಮ ಹೆದ್ದಾರಿಯಲ್ಲಿ ಅಸ್ತವ್ಯಸ್ಥ ಉಂಟಾಗಿ ಸಂಚಾರಕ್ಕೆ ತೊಂದರೆಯಾಗಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಆ್ಯಂಬುಲೆನ್ಸ್​ಗಳ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಕ್ರೇನ್ ಬಳಿಸಿ ಹಾನಿಗೊಳಗಾದ ವಾಹನಗಳು ರಸ್ತೆಯಿಂದ ತೆಗೆದು ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ (ಏಜೆನ್ಸೀಸ್).