ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್ಚುಕ್
- ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್ಚುಕ್
- ನೀಟ್ ಪೇಪರ್ ಲೀಕ್ ಸೇರಿದಂತೆ ಇತರ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ಸತ್ಯಾಗ್ರಹ
- ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ
- ಈ ಪ್ರತಿಭಟನೆಗೆ ಕಾಕ್ರೋಚ್ ಪಾರ್ಟಿ ಅಭಿಜಿತ್ ದೀಪ್ಕೆ ಬೆಂಬಲ
ನವದೆಹಲಿ: ನೀಟ್ ಯುಜಿ ಪರೀಕ್ಷೆ ಸೇರಿದಂತೆ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಭಾನುವಾರ (ಜೂ. 28) ದೆಹಲಿಯ ಜಂತರ್ ಮಂತರ್ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ (Sonam Wangchuk Starts Hunger Strike) ವನ್ನು ಆರಂಭಿಸಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆಯ ಜವಾಬ್ದಾರಿ ಸ್ವೀಕರಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆನ್ನುವುದು ವಾಂಗ್ಚುಕ್ ಅವರ ಆಗ್ರಹವಾಗಿದೆ.
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ!
ದೇಶದಲ್ಲಿ ನಿರಂತರವಾಗಿ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುತ್ತಿರುವ ಕಾರಣ, ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆ ಉಂಟಾಗುತ್ತಿದೆ. ಇದಕ್ಕೆ ಶಾಶ್ವತ ಪರಿಹಾರವನ್ನು ಸರ್ಕಾರ ನೀಡಬೇಕು.
ನೀಟ್ ಸೇರಿದಂತೆ ಇತರೆ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯ ಜವಾಬ್ದಾರಿ ಹೊತ್ತಿಕೊಂಡು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು. ಅಲ್ಲಿವರೆಗೆ ನಾನು ಉಪವಾಸ ಕೈಗೊಳ್ಳುತ್ತೆನೆಂದು ಸೋನಮ್ ವಾಂಗ್ಚುಕ್ ತಿಳಿಸಿದ್ದಾರೆ
ವಾಂಗ್ಚುಕ್ಗೆ ಸಿಜೆಪಿ ಬೆಂಬಲ!
ಜಂತರ್ ಮಂತರ್ನಲ್ಲಿ ಸೋನಮ್ ವಾಂಗ್ಚುಕ್ ಪ್ರಾರಂಭಿಸಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಕಾಕ್ರೋಚ್ ಜನತಾ ಪಾರ್ಟಿ ಸ್ಥಾಪಕ, ಅಭಿಜಿತ್ ದೀಪ್ಕೆ ಬೆಂಬಲವನ್ನು ಸೂಚಿಸಿದ್ದಾರೆ.
ದೇಶದ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಹಾಗೂ ಸರ್ಕಾರದ ವೈಫಲ್ಯತೆಯನ್ನು ಜನರಿಗೆ ತೋರಿಸುವುದಕ್ಕಾಗಿ ಇಂದು ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗೃಹವನ್ನು ಆರಂಭಿಸಿದ್ದಾರೆ. ಇದಕ್ಕೆ ನನ್ನ ಮತ್ತು ನನ್ನ ಪಾರ್ಟಿಯ ಎಲ್ಲಾ ಯುವ ಸಮುದಾಯದ ಬೆಂಬಲವಿದೆ ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ, (ಏಜನ್ಸೀಸ್).