ಮಹಾರಾಷ್ಟ್ರದ ಯುವ ಉದ್ಯಮಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
- ಮಹಾರಾಷ್ಟ್ರದ ಯುವ ಉದ್ಯಮಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
- ಮಗ ವಿಗ್ ಧರಿಸುತ್ತಿದ್ದದ್ದೇ ಕೊಲೆಗೆ ಕಾರಣನಾ? ತಂದೆ ವಿಶಾಲ್ ಅಗರ್ವಾಲ್ ಸಿಡಿಸಿದ ಹೊಸ ಬಾಂಬ್
- ಮೃತನ ತಂದೆಗೆ ಸಿಎಂ ಫಡ್ನವೀಸ್ ನೀಡಿದ ಭರವಸೆ ಏನು?
ಪುಣೆ: ಮಹಾರಾಷ್ಟ್ರದ ಯುವ ಉದ್ಯಮಿ ಕೇತನ್ ಅಗರ್ವಾಲ್ ಸಾವಿನ ಪ್ರಕರಣ (Ketan Agarwal Murder Case) ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ತನ್ನ ಭಾವಿ ಪತ್ನಿ ನಿಯಾ ಗೋಯಲ್ ಹಾಗೂ ಆಕೆಯ ಪ್ರಿಯಕರ ಚೇತನ್ ಚೌಧರಿ ಸೇರಿಕೊಂಡು ಕೇತನ್ನನ್ನು ಕೊಂದಿದ್ದಾರೆಂದು ಪ್ರಾಥಮಿಕ ವರದಿಗಳು ಹೇಳುತ್ತಿವೆ.
ಇದೇ ಸಂದರ್ಭದಲ್ಲಿ ಕೇತನ್ ತಂದೆ ವಿಶಾಲ್ ಅಗರ್ವಾಲ್, ನನ್ನ ಮಗ ತಲೆಗೆ ವಿಗ್ ಧರಿಸುತ್ತಿದ್ದ, ಬಹುಷಃ ಇದು ಸಿಯಾಳಿಗೆ ಇಷ್ಟವಿರಲಿಲ್ಲ. ಹೀಗಾಗಿ ನನ್ನ ಮಗನನ್ನು ಕೊಂದಿರಬಹುದೆಂದು ಹೊಸಾ ಬಾಂಬ್ವೊಂದನ್ನು ಸಿಡಿಸಿದ್ದಾರೆ.
ಸಿಎಂ ಫಡ್ನವೀಸ್ ಭರವಸೆ ನೀಡಿದ್ದಾರೆ!
ಮಹಾರಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ರನ್ನು ಬೇಟಿ ಮಾಡಿ ಬಂದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ವಿಶಾಲ್ ಅಗರ್ವಾಲ್, ನನ್ನ ಮಗಳ ಕೇತನ್ ಸಾವಿಗೆ ನ್ಯಾಯ ದೊರಕಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಅಷ್ಟೇ ಅಲ್ಲದೇ ತನಿಖೆ ವೇಗವಾಗಿ ನಡೆದು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯನ್ನು ಕೊಡಿಸುವುದಾಗಿ ಆಶ್ವಾಸನೆ ನೀಡಿದ್ದಾರೆಂದು ಹೇಳಿದರು.
ನನ್ನ ಮಗ ಕೇತನ್ ತಲೆ ಮೇಲೆ ಚಿಕ್ಕ ಹೇರ್ ಪ್ಯಾಚ್ ಹಾಕಿಕೊಳ್ಳುತ್ತಿದ್ದ, ಇದರ ಬಗ್ಗೆ ಹೆಣ್ಣಿನ ಮನೆಯವರಿಗೆ ಮೊದಲೇ ತಿಳಿಸಿದ್ದೆವೆ. ಆದರೆ ಈ ಕಾರಣಕ್ಕೆ ನನ್ನ ಮಗಳನ್ನು ಆಕೆ ಕೊಂದಳೇ? ಏನು ತಿಳಿಯದಾಗಿದೆ ಎಂದು ವಿಶಾಲ್ ಬೇಸರ ವ್ಯಕ್ತ ಪಡಿಸಿದ್ದಾರೆ.
ನನ್ನ ಮಗಳು ತಪ್ಪು ಮಾಡಿದ್ದರೆ ನೇಣು ಶಿಕ್ಷೆ ನೀಡಿ!
ಈ ಪ್ರಕರಣದ ಆರೋಪಿ ಸಿಯಾ ಗೋಯಲ್ ತಾಯಿ ಪೂಜಾ ಗೋಯಲ್ ಮೊದಲ ಪ್ರತಿಕ್ರಿಯೆ ನೀಡಿದ್ದು, ನನ್ನ ಮಗಳ ಮೇಲೆ ಸದ್ಯ ಆರೋಪವಿದೆ, ಇನ್ನೂ ಏನು ಸಾಭಿತಾಗಿಲ್ಲ. ಒಂದು ವೇಳೆ ಆಕೆಯೇ ಈ ಕೊಲೆ ಮಾಡಿದ್ದರೆ ಅವಳಿಗೆ ಗಲ್ಲು ಶಿಕ್ಷೆಯನ್ನು ವಿಧಿಸಿ ಎಂದು ಆಕ್ರೋಶ ಹೊರಹಾಕಿದ್ದಾಳೆ.
ಅವಳು ಮದುವೆಗೆ ಒಪ್ಪಿಕೊಂಡಿದ್ದಳು, ಆದರೆ ಟ್ರೇಕ್ಕಿಂಗ್ಗೆ ಕೇತನ್ನೇ ಅವಳನ್ನು ಕರೆದುಕೊಂಡು ಹೋಗಿದ್ದ. ಅವಳು ಚೇತನ್ ಚೌಧರಿಯನ್ನು ಪ್ರೀತಿಸುತ್ತಿದ್ದ ಬಗ್ಗೆ ನಮಗೇನು ಮಾಹಿತಿಯಿಲ್ಲ ಎಂದು ಪೂಜಾ ಗೋಯಲ್ ಹೇಳಿದ್ದಾರೆ.
ಏನಿದು ಕೇತನ್ ಅಗರ್ವಾಲ್ ಪ್ರಕರಣ?
ಮಹಾರಾಷ್ಟ್ರದ ಖ್ಯಾತ ಉದ್ಯಮಿಯ ಪುತ್ರನಾದ ಕೇತನ್ ಅಗರವಾಲ್ ಮತ್ತು ಸಿಯಾ ಗೋಯಲ್ ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅರಮನೆಯೊಂದರಲ್ಲಿ ನವೆಂಬರ್‌ನಲ್ಲಿ ಅದ್ದೂರಿ ವಿವಾಹವನ್ನು ಯೋಜಿಸಲಾಗಿತ್ತು. ಆದರೆ ಜೂನ್ 18ರಂದು ಪುಣೆ ಸಮೀಪದ ಲೋಹಗಢ ಕೋಟೆಯಲ್ಲಿ ಸಿಯಾ ಹಾಗೂ ಆಕೆಯ ಪ್ರಿಯಕರ ಚೇತನ್ ಸೇರಿ ಕೇತನ್ನನ್ನು ಕಣಿವೆಗೆ ತಳ್ಳಿದ ಪರಿಣಾಮ ಮೃತಪಟ್ಟಿದ್ದಾರೆ ಎಂದು ತನಿಖೆ ಬಹಿರಂಗಪಡಿಸಿದೆ.
22 ವರ್ಷದ ಚೇತನ್ ಬಬುಲಾಲ್ ಚೌಧರಿ ಎಂಬಾತನೊಂದಿಗೆ ಸಿಯಾ ಕಳೆದ ವರ್ಷ ಸಭೆಯೊಂದರಲ್ಲಿ ಪರಿಚಯವಾಗಿದ್ದಳು. ಸಿಯಾ ಬೇಕರಿ ವ್ಯವಹಾರ ನಡೆಸುತ್ತಿದ್ದರೆ, ಚೇತನ್ ಡ್ರೈ ಫ್ರೂಟ್ಸ್ ವ್ಯಾಪಾರ ಮಾಡುತ್ತಿದ್ದನು. ಇವರಿಬ್ಬರ ಸಂಬಂಧ 2025ರ ನವೆಂಬರ್‌ನಲ್ಲಿ ಆರಂಭವಾಗಿತ್ತು. ಅದೇ ವೇಳೆಗೆ ಸಿಯಾ ಮತ್ತು ಕೇತನ್ ಅವರ ಕುಟುಂಬಗಳು ಮದುವೆ ಸಿದ್ಧತೆಯಲ್ಲಿ ತೊಡಗಿದ್ದವು.
ಪೊಲೀಸರ ಪ್ರಕಾರ, ಸಿಯಾ ಮತ್ತು ಕೇತನ ನಡುವಿನ ಸಂಬಂಧದಿಂದ ಚೇತನ್ ಅಸಮಾಧಾನಗೊಂಡಿದ್ದನು. ಕೇತನ ತಮ್ಮ ಸಂಬಂಧಕ್ಕೆ ಅಡ್ಡಿಯಾಗಿದ್ದಾರೆ ಎಂದು ಭಾವಿಸಿ ಇಬ್ಬರೂ ಸೇರಿ ಕೊಲೆ ಸಂಚು ರೂಪಿಸಿದ್ದರು. ಸಿಯಾ, ಪ್ರವಾಸದ ನೆಪದಲ್ಲಿ ಕೇತನನನ್ನು ಲೋಹಗಢ ಕೋಟೆಗೆ ಕರೆದುಕೊಂಡು ಹೋಗಿದ್ದಳು. ಬಳಿಕ ಚೇತನ್ ಸ್ಥಳಕ್ಕೆ ಆಗಮಿಸಿದ್ದಾನೆ. ಇಬ್ಬರೂ ಸೇರಿ ಕೇತನ್ನನ್ನು ಹಿಂಬದಿಯಿಂದ ತಳ್ಳಿದ ಪರಿಣಾಮ ಆಳವಾದ ಕಂದಕಕ್ಕೆ ಬಿದ್ದು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ, (ಏಜನ್ಸೀಸ್).