ಕೇಂದ್ರ ಗೃಹ ಸಚಿವ ಅಮಿತ್ ಶಾ  
ದೇಶ

ಬಿಜೆಪಿ ಅಧಿಕಾರಕ್ಕೆ ಬಂದ್ರೆ 2 ವರ್ಷಗಳಲ್ಲಿ ಡ್ರಗ್ಸ್ ಮುಕ್ತ ಪಂಜಾಬ್: ಸ್ವತಃ ಕುಡಿಯುವ ವ್ಯಕ್ತಿಯಿಂದ ಸಾಧ್ಯವಿಲ್ಲ: ಸಿಎಂ ಮಾನ್ ವಿರುದ್ಧ ಅಮಿತ್ ಶಾ ಕಿಡಿ | Amit Shah

ಪಂಜಾಬ್​ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ, ಬಿಜೆಪಿ ಅಧಿಕಾರಕ್ಕೆ ಬಂದ್ರೆ ಎರಡು ವರ್ಷಗಳಲ್ಲಿ ಡ್ರಗ್ಸ್ ಮುಕ್ತ ಪಂಜಾಬ್ ಮಾಡುವುದಾಗಿ ಘೋಷಿಸಿದ್ದಾರೆ. ಮತ್ತು ಸ್ವತಃ ಕುಡಿಯುವ ವ್ಯಕ್ತಿಯಿಂದ ಇದನ್ನು ಮಾಡಲು ಸಾಧ್ಯವಿಲಲ್ಲ ಎಂದು ಪರೋಕ್ಷವಾಗಿ ಸಿಎಂ ಭಗವಂತ್ ಮಾನ್ ವಿರುದ್ಧ ಕಿಡಿಕಾರಿದ್ದಾರೆ.

ಚಂಡೀಗಢ: ಮುಂದಿನ ವರ್ಷ ನಡೆಯಲಿರುವ ಪಂಜಾಬ್​ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ, ಬಿಜೆಪಿ ಅಧಿಕಾರಕ್ಕೆ ಬಂದ್ರೆ ಎರಡು ವರ್ಷಗಳಲ್ಲಿ ಡ್ರಗ್ಸ್ ಮುಕ್ತ ಪಂಜಾಬ್ ಮಾಡುವುದಾಗಿ ಘೋಷಿಸಿದ್ದಾರೆ. ಮತ್ತು ಸ್ವತಃ ಕುಡಿಯುವ ವ್ಯಕ್ತಿಯಿಂದ ಇದನ್ನು ಮಾಡಲು ಸಾಧ್ಯವಿಲಲ್ಲ ಎಂದು ಪರೋಕ್ಷವಾಗಿ ಸಿಎಂ ಭಗವಂತ್ ಮಾನ್ ವಿರುದ್ಧ ಕಿಡಿಕಾರಿದ್ದಾರೆ.

ಪಂಜಾಬ್​ನ ಜಲಂಧರ್​ನಲ್ಲಿ ಬುಧವಾರ(ಸೆ. 30) ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಆಡಳಿತಾರೂಢ ಆಮ್ ಆದ್ಮಿ ಪಕ್ಷವು ಪಂಜಾಬ್‌ನಲ್ಲಿ ಮಾದಕ ವಸ್ತುಗಳ ಮುಕ್ತ ವ್ಯಾಪಾರಕ್ಕೆ ಅವಕಾಶ ನೀಡಿದೆ ಎಂದು ಆರೋಪಿಸಿದ್ದಾರೆ. ಮತ್ತು ಬಿಜೆಪಿ ಅಧಿಕಾರಕ್ಕೇರಿದರೇ ಡಿಸೆಂಬರ್ 2029ರ ವೇಳೆಗೆ ಮಾದಕವಸ್ತು ಮುಕ್ತ ಪಂಜಾಬ್ ಅನ್ನು ನಿರ್ಮಿಸುವ ಭರವಸೆ ನೀಡಿದ್ದಾರೆ.

ಮದ್ಯಪಾನದ ಅಮಲಿನಲ್ಲಿ ತೇಲುತ್ತಾ ಗುರುಗಳನ್ನು ಅವಮಾನಿಸುವ ವ್ಯಕ್ತಿಯೊಬ್ಬರು ಪಂಜಾಬ್ ಅನ್ನು ಮಾದಕವಸ್ತುಗಳ ಪಿಡುಗಿನಿಂದ ಮುಕ್ತಗೊಳಿಸಲು ಸಾಧ್ಯವಿಲ್ಲ. ಅವರು ಪಂಜಾಬ್‌ಗೆ ವಿಮೋಚನೆ ನೀಡಲಾರರು. ಕೇವಲ ಬಿಜೆಪಿಗೆ ಮಾತ್ರ ಪಂಜಾಬ್ ಅನ್ನು ಮಾದಕವಸ್ತು ಮುಕ್ತವನ್ನಾಗಿಸುವ ಸಾಮರ್ಥ್ಯವಿದೆ. ಬಿಜೆಪಿ ಇದನ್ನು ಈಗಾಗಲೇ ಸಾಬೀತುಪಡಿಸಿದೆ ಎಂದಿದ್ದಾರೆ.

ನಾವು ಮಾದಕವಸ್ತು ಮುಕ್ತ ಭಾರತಕ್ಕಾಗಿ ರಾಷ್ಟ್ರವ್ಯಾಪಿ ಅಭಿಯಾನವನ್ನು ಪ್ರಾರಂಭಿಸಿದ್ದೇವೆ. 2004 ರಿಂದ 2014 ರವರೆಗೆ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಆ 10 ವರ್ಷಗಳಲ್ಲಿ ದೇಶಾದ್ಯಂತ 26 ಲಕ್ಷ ಕೆಜಿ ಮಾದಕವಸ್ತು ವಶಪಡಿಸಿಕೊಳ್ಳಲಾಗಿತ್ತು. ಬಳಿಕ ಮೋದಿ ಅವರ ಸರ್ಕಾರ ಬಂದಿತು. 2014 ಮತ್ತು 2024ರ ನಡುವೆ, ಮೋದಿ ಅವರ ಸರ್ಕಾರ 1.2 ಕೋಟಿ ಕೆಜಿ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷವು 40,000 ಕೋಟಿ ರೂ. ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದ್ದರೆ, ಇದಕ್ಕೆ ವ್ಯತಿರಿಕ್ತವಾಗಿ ಬಿಜೆಪಿ 1,90,000 ಕೋಟಿ ರೂ. ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದೆ ಎಂದು ಹೇಳಿದ್ದಾರೆ (ಏಜೆನ್ಸೀಸ್).