ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ 
ದೇಶ

ಎಐಎಡಿಎಂಕೆ ದುರ್ಬಲವಾಗಿದ್ದರೂ, ಅದೇ ನಮ್ಮ ಎದುರಾಳಿ; ಮತ್ತೆ ಯಾವುದೇ ಪಕ್ಷ ಅಲ್ಲ: ಡಿಸಿಎಂ ಉದಯನಿಧಿ ಸ್ಟಾಲಿನ್ | Udhayanidhi Stalin

ಚೆನ್ನೈ: ತಮಿಳುನಾಡಿನಲ್ಲಿ ಎಐಎಡಿಎಂಕೆ ಪ್ರಸ್ತುತವಾಗಿ ದುರ್ಬಲ ಪಕ್ಷವಾಗಿ ಕಂಡು ಬಂದರೂ, ಅದೇ ನಮಗೆ ಪ್ರಬಲ ಪ್ರತಿಸ್ಪರ್ಧಿ, ಬೇರೆ ಯಾವುದೇ ಪಕ್ಷವಲ್ಲ ಎಂದು ಡಿಎಂಕೆ ನಾಯಕ ಮತ್ತು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್(Udhayanidhi Stalin) ಹೇಳಿದ್ದಾರೆ.
ಇಂಗ್ಲೀಷ್ ದಿನಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿರುವ ಅವರು, ಎಐಎಡಿಎಂಕೆ ದೀರ್ಘಕಾಲದವರೆಗೆ ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿದೆ. ಪ್ರಸ್ತುತ ಸಂದರ್ಭದಲ್ಲಿ ಅದು ದುರ್ಬಲವಾಗಿದ್ದರೂ, ನಾವು ಅವರನ್ನು ಗಂಭೀರವಾಗಿ ಪರಿಗಣಿಸಿದ್ದು, ಅದೇ ನಮ್ಮ ಎದುರಾಳಿ ಎಂದು ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳನ್ನು ಎದುರಿಸಲು ನಾವು ಸಿದ್ದರಿದ್ದೇವೆ. ಬಿಜೆಪಿ ರಾಜ್ಯದಲ್ಲಿ ಜಾತ್ಯತೀತ ಶಕ್ತಿಗಳನ್ನು ದುರ್ಬಲಗೊಳಿಸಲು ಎಲ್ಲಾ ರೀತಿಯಲ್ಲೂ ಪ್ರಯತ್ನಿಸುತ್ತಿದೆ. ರಾಜ್ಯದ ಜನ ಅವರ ಪಿತೂರಿಗಳನ್ನು ಅರ್ಥ ಮಾಡಿಕೊಂಡಿದ್ದಾರೆ. ನಮ್ಮ ಮೈತ್ರಿಕೂಟದ ಪಕ್ಷಗಳ ಬಗ್ಗೆ ಗೌರವ ಇದೆ. ಅವರ ಅಭಿಪ್ರಾಯಗಳನ್ನು ಸ್ವೀಕರಿಸುತ್ತೇವೆ ಎಂದು ಹೇಳಿದ್ದಾರೆ (ಏಜೆನ್ಸೀಸ್).