ಹೈದರಾಬಾದ್: ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯಲ್ಲಿ 30 ವರ್ಷದ ವ್ಯಕ್ತಿಯೊಬ್ವ, ಕೌಟುಂಬಿಕ ಸಮಸ್ಯೆಗಳಿಂದಾಗಿ ಪತ್ನಿ ಮನೆ ಬಿಟ್ಟು ಹೋದ ಹಿನ್ನೆಲೆ ತನ್ನ ಮೂರು ಮತ್ತು ಐದು ವರ್ಷದ ಇಬ್ಬರು ಗಂಡು ಮಕ್ಕಳನ್ನು ಕೊಂದು, ತಾನು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.
ಸೋಮವಾರ(ಏ. 27) ರಾತ್ರಿ ತೋರೂರು ಹೊರವಲಯದಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿ ಅಮ್ಮಾಪುರಂ ನಿವಾಸಿಯಾಗಿದ್ದು, ಕಳೆದ 10 ದಿನಗಳ ಹಿಂದೆ ಪತ್ನಿ ಮನೆ ಬಿಟ್ಟು ಹೋಗಿದ್ದಳು ಎನ್ನಲಾಗಿದೆ. ಇದರಿಂದ ಮನನೊಂದಿದ್ದ ಆತ ತನ್ನ ಇಬ್ಬರು ಮಕ್ಕಳನ್ನು ನೇಣು ಹಾಕಿ ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಕುರಿತು ಮಾತನಾಡಿರುವ ರಿಯ ಪೊಲೀಸ್ ಅಧಿಕಾರಿಯೊಬ್ಬರು, ಮಂಗಳವಾರ ಬೆಳಗ್ಗೆ ತೋರೂರು ಬಳಿ ಮೂವರ ನೇಣು ಬಿಗಿದ ಸ್ಥಿತಿಯಲ್ಲಿ ಮೂವರ ಶವ ಪತ್ತೆಯಾಗಿವೆ. ಮೃತ ವ್ಯಕ್ತಿ ಮದ್ಯದ ಚಟಕ್ಕೆ ಒಳಗಾಗಿದ್ದನು. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ತನ್ನ ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾನೂ ನೇಣು ಹಾಕಿಕೊಂಡಿದ್ದಾನೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ (ಏಜೆನ್ಸೀಸ್).