ಲಖನೌ: ಉತ್ತರ ಪ್ರದೇಶದ ಹಾಪುರದಲ್ಲಿ ಭೀಕರ ಅಪಘಾತ(accident) ಸಂಭವಿಸಿದ್ದು, ಬಸ್ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಆರು ಜನ ಸ್ಥಳದಲ್ಲೇ ಮೃತಪಟ್ಟು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಹಾಪುರದ ಧೌಲಾನಾ-ಗುಲಾವತಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಬಸ್ನಲ್ಲಿ ಒಟ್ಟು 12 ಜನರಿದ್ದು, ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬಸ್ ಹಾಪುರದಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಹಾಪುರ ಎಸ್ಪಿ ಜ್ಞಾನಮಜಯ್, ಬಸ್ನಲ್ಲಿದ್ದ 12 ಜನ ಪೈಕಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಸ್ಥಳೀಯರೊಂದಿಗೆ ಸೇರಿಕೊಂಡು ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶವಗಳನ್ನು ಗುರುತಿಸಿದ್ದು, ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ಘಟನೆ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದ್ದಾರೆ (ಏಜೆನ್ಸೀಸ್).