ಬಸ್ ಅಪಘಾತ ಸ್ಥಳದ ಫೋಟೋ 
ದೇಶ

ಭೀಕರ ರಸ್ತೆ ಅಪಘಾತ; ಎರಡು ಬಸ್​​​ಗಳ ಮುಖಾಮುಖಿ ಡಿಕ್ಕಿ; ಆರು ಸಾವು, 28 ಮಂದಿಗೆ ಗಾಯ | Bus Accident

ಚೆನ್ನೈ : ತಮಿಳುನಾಡಿನ ತೆಂಕಾಶಿಯಲ್ಲಿ ಎರಡು ಖಾಸಗಿ ಬಸ್​ಗಳು ಮುಖಾಮುಖಿ ಡಿಕ್ಕಿ ಹೊಡೆದು ಭೀಕರ ಅಪಘಾತ(Bus Accident) ಸಂಭವಿಸಿದ್ದು, ಪರಿಣಾಮ ಬಸ್​ನಲ್ಲಿ ಆರು ಜನ ಮೃತಪಟ್ಟು, 28 ಮಂದಿ ಗಾಯಗೊಂಡಿದ್ದಾರೆ ಎಂದು ಸೋಮವಾರ(ನ. 24) ವರದಿಯಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಪೊಲೀಸರು, ಮಧುರೈನಿಂದ ಸೆಂಕೊಟ್ಟೈಗೆ ಹೋಗುತ್ತಿದ್ದ ಖಾಸಗಿ ಬಸ್ ಮತ್ತು ತೆಂಕಸಿಯಿಂದ ಕೋವಿಲ್ಪಟ್ಟಿ ಕಡೆಗೆ ಹೋಗುತ್ತಿದ್ದ ಇನ್ನೊಂದು ಬಸ್​ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಪರಿಣಾಮ ಎರಡೂ ಬಸ್​ಗಳು ಜಖಂಗೊಂಡಿವೆ. ಸ್ಥಳೀಯ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಬೃಹತ್ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಹೇಳಿದ್ದಾರೆ.
ಮಧುರೈನಿಂದ ಸೆಂಕೊಟ್ಟೈಗೆ ಹೋಗುತ್ತಿದ್ದ ಕೀಸರ್ ಬಸ್ ಅಜಾಗರೂಕತೆಯಿಂದ ಚಾಲನೆ ಮಾಡುತ್ತಿತ್ತು. ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತದೆ. ಕೆಲವರಿಗೆ ಗಂಭೀರ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಇನ್ನೂ ಘಟನೆ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ (ಏಜೆನ್ಸೀಸ್).