ನವದೆಹಲಿ: ದೆಹಲಿಯ ಬವಾನಾ ಪ್ರದೇಶದಲ್ಲಿ ಇಂದು(ಮಾ. 19) ಮನೆಯೊಂದಕ್ಕೆ ನುಗ್ಗಿದ ಮೂವರು ದುಷ್ಕರ್ಮಿಗಳು ತಂದೆ-ಮಕ್ಕಳು ಸೇರಿ ನಾಲ್ವರ ಮೇಲೆ ಗುಂಡು ಹಾರಿಸಿದ್ದು(shot), ಘಟನೆಯಲ್ಲಿ ಓರ್ವ ಸಾವನ್ನಪ್ಪಿ, ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಮೂವರು ಅಪರಿಚಿತ ದುಷ್ಕರ್ಮಿಗಳು ಮೋಟಾರ್ ಸೈಕಲ್‌ನಲ್ಲಿ ಬಂದು ಬಲವಂತವಾಗಿ ಮನೆಗೆ ನುಗ್ಗಿ, ಮನಬಂದಂತೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಗುಂಡಿನ ದಾಳಿಯನ್ನು ಪೊಲೀಸರು ಗ್ಯಾಂಗ್ವಾರ್ ಎಂದು ಶಂಕಿಸಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತನನ್ನು ರವಿ(28) ಎಂದು ಗುರುತಿಸಲಾಗಿದೆ. 10 ವರ್ಷದ ಮಗುವಿನ ಕಾಲಿಗೆ ಗುಂಡೇಟಿನಿಂದ ಗಾಯವಾಗಿದ್ದು, ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ತಂದೆ ಸೇರಿ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಈ ದಾಳಿಯಲ್ಲಿ ಟಿಲ್ಲು ಗ್ಯಾಂಗ್‌ನ ಒಳಗೊಳ್ಳುವಿಕೆಯನ್ನು ಸೂಚಿಸುತ್ತವೆ, ಆದರೂ ಅಧಿಕಾರಿಗಳು ಈ ಕೋನವನ್ನು ಇನ್ನೂ ದೃಢಪಡಿಸಿಲ್ಲ. ಈ ಕೋನದಲ್ಲೂ ಈ ಪೊಲೀಸರು ತನಿಖೆ ಆರಂಭಿಸಿದ್ದು, ದಾಳಿಕೋರರನ್ನು ಗುರುತಿಸಲು ಮತ್ತು ಬಂಧಿಸಲು ಬಲೆ ಬೀಸಿದ್ದಾರೆ (ಏಜೆನ್ಸೀಸ್).