Noida worker protest 
ದೇಶ

ನೊಯ್ಡಾದಲ್ಲಿ ಮುಂದುವರೆದ ಕಾರ್ಮಿಕರ ಪ್ರತಿಭಟನೆ; ಪೊಲೀಸರ ಮೇಲೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ ನಿರ್ಮಾಣ..Noida worker protest

ಪ್ರಮುಖ ಮುಖ್ಯಾಂಶಗಳು

  • ವೇತನ ಹೆಚ್ಚಳಕ್ಕೆ ಆಗ್ರಹಿಸಿ ನೊಯ್ಡಾದಲ್ಲಿ ಮುಂದುವರೆದ ಪ್ರತಿಭಟನೆ
  • ಪೊಲೀಸರು, ಪ್ರತಿಭಟನಾಕಾರರ ಮಧ್ಯೆ ಘರ್ಷಣೆ ಕಲ್ಲು ತೂರಾಟ
  • ಐಟಿ ಸಂಸ್ಥೆಯ ಗೇಟ್​ ಮುರಿದು ಆಕ್ರೋಶ ವ್ಯಕ್ತಪಡಿಸಿದ ಹೋರಾಟಗಾರರು
ನೊಯ್ಡಾ (ಉತ್ತರ ಪ್ರದೇಶ): ನೊಯ್ಡಾದಲ್ಲಿ ಕಾರ್ಖಾನೆ  ಕಾರ್ಮಿಕರ ಪ್ರತಿಭಟನೆ ವಿಕೋಪಕ್ಕೆ ತಿರುಗಿದೆ. ಕಡಿಮೆ ವೇತನ ಪಾವತಿಯನ್ನು ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಉದ್ರಿಕ್ತ ಗುಂಪು ಪೊಲೀಸರೊಂದಿಗೆ ಘರ್ಷಣೆ ನಡೆಸಿ, ಕಲ್ಲು ತೂರಾಟ ನಡೆಸಿದರು. 
ನೊಯ್ಡಾದಲ್ಲಿ 2 ನೇ ಹಂತದಲ್ಲಿ ಕಾರ್ಖಾನೆಗಳು ಹೆಚ್ಚಿವೆ. ಇಲ್ಲಿ ಪ್ರತಿಭಟನಾಕಾರರು  ಸೋಮವಾರ ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ ಪೊಲೀಸರು ತುಕಡಿ ಬಳಕೆ ಮಾಡಿರುವ ದೃಶ್ಯಗಳು ಸೋಶಿಯಲ್​ ಮೀಡಿಯಾದಲ್ಲಿ ವರದಿಯಾಗಿದೆ. ಈ ಘಟನೆಯಿಂದಾಗಿ ನೋಯ್ಡಾ ಪ್ರಮುಖ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿತ್ತು. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುತ್ತಲೇ ಎಚ್ಚೆತ್ತ ಉತ್ತರ ಪ್ರದೇಶ ಸರ್ಕಾರ ಏಪ್ರಿಲ್​1ರಿಂದಲೇ ಜಾರಿಗೆ ಬರುವಂತೆ ಎಲ್ಲ ವರ್ಗದ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದೆ.

ಪೊಲೀಸರ ಮೇಲೂ ಕಲ್ಲು ತೂರಾಟ

ಮಂಗಳವಾರ ಪೊಲೀಸರು, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಹೋರಾಟಗಾರರಿಗೆ ವೇತನ ಹೆಚ್ಚಳದ ಬಗ್ಗೆ ಮಾಹಿತಿ ನೀಡುತ್ತಿದ್ದರು. ದುಷ್ಕರ್ಮಿಗಳು ಈ ಘಟನೆಯನ್ನು ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಎಚ್ಚರಿಕೆ ನೀಡುತ್ತಿದ್ದರು. ಆ ಬೆನ್ನಲ್ಲೇ, ಗರ್ಹಿ ಚೌಖಂಡಿ ಗ್ರಾಮದಲ್ಲಿ ಮತ್ತೊಂದು ಗದ್ದಲ ಭುಗಿಲೆದ್ದಿತು. ಪ್ರತಿಭಟನಾಕಾರರು ಪೊಲೀಸ್​ ವಾಹನದ ಮೇಲೆ ಕಲ್ಲು ತೂರಾಟ ನಡೆಸಿ, ಗುಂಪನ್ನು ಚದುರಿಸುವಲ್ಲಿ ಯಶಸ್ವಿಯಾಗಿದ್ದಾರೆ.  

ಪೊಲೀಸ್​ ಕಣ್ಗಾವಲು

ನೋಯ್ಡಾದಲ್ಲಿನ ಉದ್ವಿಗ್ನ ಪರಿಸ್ಥಿತಿಯನ್ನು  ತಹಬದಿಗೆ ತರಲು  ಸಾರ್ವಜನಿಕ ವಿಶ್ವಾಸವನ್ನು ಹೆಚ್ಚಿಸಲು  ಇಲ್ಲಿನ ಪೊಲೀಸ್​ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ. ಪ್ರತಿಭಟನಾ ಪೀಡಿತ ಪ್ರದೇಶದಲ್ಲಿ ಡಿಜಿಪಿ, ಎಡಿಜಿ ಮತ್ತು ಐಜಿ ಸೇರಿದಂತೆ ಹಿರಿಯ ಅಧಿಕಾರಿಗಳು ಬೆಳಿಗ್ಗೆ 7 ಗಂಟೆಯಿಂದ ಪೊಲೀಸ್ ಪ್ರಧಾನ ಕಚೇರಿಯ ನಿಯಂತ್ರಣ ಕೊಠಡಿಯಿಂದ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ.
 ಸೂಕ್ಷ್ಮ ಪ್ರದೇಶದಲ್ಲಿ ಮತ್ತು ರಾಷ್ಟ್ರೀಯ ಹೆದ್ದಾರಿ-9 ಆರ್​​ ಆರ್​ಎಫ್​,  RAF ಮತ್ತು PACಯ 15 ಪೊಲೀಸ್​ ತಂಡಗಳನ್ನು ನಿಯೋಜಿಸಲಾಗಿದೆ.  ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕಾಪಾಡಿಗಕೊಳ್ಳಲು ಪೊಲೀಸರು ಮೊಕ್ಕಾಂ ಹೂಡಿದ್ದಾರೆ. ಹಿಂಸಾಚಾರದಲ್ಲಿ ಭಾಗಿಯಾದ 25 ಜನರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಸೋಮವಾರ 50 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ಹಂಚಿಕೊಂಡರು.

ಏನಿದು ಘಟನೆ?

ಕನಿಷ್ಠ ವೇತನ 26 ಸಾವಿರಕ್ಕೆ ಹೆಚ್ಚಿಸಬೇಕು. ದೀಪಾವಳಿ ಬೋನಸ್, ಕಾರ್ಮಿಕ ನೀತಿ, ವಾರದ ರಜೆ, ಹೆಚ್ಚುವರಿ ಕೆಲಸಕ್ಕೆ ದುಪ್ಪಟ್ಟು ವೇತನ ನೀಡಬೇಕು ಎಂದು ಇತ್ತಾಯಿಸಿ ಕಾರ್ಮಿಕರು ಕಳೆದ ಕೆಲ ದಿನದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.  ಕಾರ್ಮಿರಕ ಬೇಡಿಕೆಗೆ ಸರ್ಕಾರದ ಪ್ರತಿನಿಧಿಗಳು ಭಾನುವಾರ ಒಪ್ಪಿಕೊಂಡಿವೆ. ಆದರೆ, ಪ್ರಮುಖ ಬೇಡಿಕೆ ಈಡೇರಿಸಿಲ್ಲ ಎಂದು ಅವರು ಪ್ರತಿಭಟನೆ ಮುಂದುವರೆಸಿದ್ದಾರೆ, (ಏಜೆನ್ಸೀಸ್​)