Smriti Mandhana 
ದೇಶ

ಸ್ಮೃತಿ ಮಂಧಾನ ಮದುವೆ ರದ್ದು! ಪಲಾಶ್ ಮುಚ್ಚಲ್​​ನನ್ನು ಅನ್‌ಫಾಲೋ ಮಾಡಿದ 10 ಮಂದಿ ಮಹಿಳಾ ಕ್ರಿಕೆಟಿಗರು ..Smriti Mandhana

ನವದೆಹಲಿ: ಟೀಮ್​ ಇಂಡಿಯಾದ ಆಟಗಾರ್ತಿ ಸ್ಮೃತಿ ಮಂಧಾನ ( Smriti Mandhana ) ಮತ್ತು ಸಂಗೀತ ನಿರ್ದೇಶಕ ಪಲಾಶ್​ ಮುಚ್ಚಲ್ ಜೋಡಿಯ ಮದುವೆ ನ.23ರಂದು ನಡೆಯಬೇಕಿತ್ತು. ಆದರೆ ಕಾರಣಾಂತರಗಳಿಂದ ಈ ಮದುವೆಯನ್ನು ಮುಂದೂಡಲಾಯಿತ್ತು. ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದತಿಯನ್ನು ಸ್ಮೃತಿ ಮಂಧಾನ ( Smriti Mandhana ) ದೃಢಪಡಿಸಿದ್ದಂತೆ 10 ಜನ ಮಹಿಳಾ ಕ್ರಿಕೆಟಿಗರು ಪಲಾಶ್ ಅವರನ್ನು ಅನ್‌ಫಾಲೋ ಮಾಡಿದ್ದಾರೆ.
ತಮ್ಮ ಇನ್​ಸ್ಟಾಗ್ರಾಂನಲ್ಲಿ ಸ್ಟೋರಿ ಹಂಚಿಕೊಂಡಿರುವ ಪಲಾಶ್​, ಸ್ಮೃತಿ ಮಂಧಾನ ಜತೆಗಿನ ಪ್ರೇಮ ಸಂಬಂಧವನ್ನು ಬ್ರೇಕಪ್​ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ, ತಮ್ಮ ವಿರುದ್ಧ ಇಲ್ಲಸಲ್ಲದ್ದನ್ನು ಹರಡುತ್ತಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆಯನ್ನು ಸಹ ನೀಡಿದ್ದಾರೆ.
ಕಳೆದ ಕೆಲ ವಾರಗಳಿಂದ ನನ್ನ ಹಾಗೂ ನನ್ನ ಜೀವನದ ಬಗ್ಗೆ ಸಾಕಷ್ಟು ಊಹಾಪೋಹಗಳು ಹರಡುತ್ತಿವೆ. ಈ ಸಮಯದಲ್ಲಿ ಇದರ ಬಗ್ಗೆ ಮಾತನಾಡುವುದು ನನಗೆ ಸೂಕ್ತ ಅನಿಸಿತು. ನಾನು ಜೀವನದಲ್ಲಿ ತುಂಬಾ ಖಾಸಗಿ ವ್ಯಕ್ತಿ ಮತ್ತು ನಾನು ಅದೇ ರೀತಿ ಎಂದಿಗೂ ಇರಲು ಬಯಸುತ್ತೇನೆ. ಆದರೆ, ಈ ಸಂದರ್ಭದಲ್ಲಿ ಮದುವೆ ರದ್ದಾಗಿದೆ ಅನ್ನೋದನ್ನು ಸ್ಪಷ್ಟಪಡಿಸಬೇಕಿದೆ ಎಂದು ಸ್ಮೃತಿ ಬರೆದುಕೊಂಡಿದ್ದಾರೆ.
ಸ್ಮೃತಿ ಮತ್ತು ಪಲಾಶ್ ಇನ್‌ಸ್ಟಾಗ್ರಾಮ್‌ನಲ್ಲಿ ಪರಸ್ಪರ ಅನ್‌ಫಾಲೋ ಮಾಡಿದ್ದಾರೆ. ಇಬ್ಬರು ಅಧಿಕೃತವಾಗಿ ದೂರವಾಗುತ್ತಿರುವುದನ್ನು ಹೇಳುತ್ತಿದ್ದಂತೆ ಮಾಧ್ಯಮ ವರದಿಗಳ ಪ್ರಕಾರ, ಸ್ಮೃತಿ ಮಂಧಾನ ಜೊತೆಗೆ, ಜೆಮಿಮಾ ರೊಡ್ರಿಗಸ್, ರಾಧಾ ಯಾದವ್, ಶ್ರೇಯಾಂಕ ಪಾಟೀಲ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ಶಿವಾಲಿ ಶಿಂಧೆ, ಯಸ್ತಿಕಾ ಭಾಟಿಯಾ, ರಿಚಾ ಘೋಷ್ ಮತ್ತು ದೀಪ್ತಿ ಶರ್ಮಾ ಸೇರಿದಂತೆ ಇತರ 10 ಭಾರತೀಯ ಮಹಿಳಾ ಕ್ರಿಕೆಟಿಗರು ಪಲಾಶ್ ಮುಚ್ಚಲ್ ಅವರನ್ನು ಅನ್‌ಫಾಲೋ ಮಾಡಿದ್ದಾರೆ. ಇದು ಸ್ಮೃತಿಗೆ ಕ್ರಿಕೆಟ್ ಸಮುದಾಯದಿಂದ ಸಿಕ್ಕಿರುವ ಬೆಂಬಲವನ್ನು ಸೂಚಿಸುತ್ತದೆ.
ನಡೆದಿದ್ದೇನು?:
ನವೆಂಬರ್ 23 ರಂದು ಸ್ಮೃತಿ ಮತ್ತು ಪಲಾಶ್ ಮದುವೆ ನಿಗದಿಯಾಗಿತ್ತು. ಆದಾಗ್ಯೂ, ವಿವಾಹ ಸಮಾರಂಭಕ್ಕೆ ಸ್ವಲ್ಪ ಮೊದಲು, ಸ್ಮೃತಿಯ ತಂದೆ ಅನಾರೋಗ್ಯಕ್ಕೆ ಒಳಗಾದರು ಮತ್ತು ಆಸ್ಪತ್ರೆಗೆ ದಾಖಲಾಗಿದ್ದರು. ಇದರಿಂದಾಗಿ, ಮದುವೆಯನ್ನು ಮುಂದೂಡಲಾಯಿತು. ಸ್ವಲ್ಪ ಸಮಯದ ನಂತರ, ಪಲಾಶ್ ಕೂಡ ಅನಾರೋಗ್ಯಕ್ಕೆ ಒಳಗಾದರು ಮತ್ತು ಆಸ್ಪತ್ರೆಗೆ ದಾಖಲಾಗಿದ್ದರು. ಆದಾಗ್ಯೂ, ಕೆಲವು ವರದಿಗಳು ಮದುವೆಯನ್ನು ಮುಂದೂಡಲು ಕಾರಣ ಸ್ಮೃತಿಯ ತಂದೆಯ ಅನಾರೋಗ್ಯವಲ್ಲ ಎಂದು ಹೇಳಿವೆ. ನಿಜವಾದ ಕಾರಣವೆಂದರೆ ಪಲಾಶ್ ಸ್ಮೃತಿಗೆ ಮೋಸ ಮಾಡಿದ ಆರೋಪ ಹೊರಿಸಲಾಗಿತ್ತು ಎಂದು ವರದಿಗಳು ತಿಳಿಸಿವೆ.
ತಂದೆ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾದ ನಂತರ, ಸ್ಮೃತಿ ಅವರು ತನ್ನ ಮದುವೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲು ಕೇಳಿಕೊಂಡಿದ್ದಾರೆ. ಹೀಗಾಗಿ ಮದುವೆಯನ್ನು ಮುಂದೂಡಲಾಗಿದೆ ಎಂದು ಅವರ ಮ್ಯಾನೇಜರ್ ಬಹಿರಂಗಪಡಿಸಿದ್ದಾರೆ. ಅದಾದ ನಂತರ, ಪಲಾಶ್ ಕೂಡ ಅನಿರೀಕ್ಷಿತವಾಗಿ ಆಸ್ಪತ್ರೆಗೆ ದಾಖಲಾಗಿದರು. ಈ ನಡೆ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಪಲಾಶ್ ಅವರು ಮೇರಿ ಡಿ'ಕೋಸ್ಟಾ ಎಂಬ ನೃತ್ಯ ನಿರ್ದೇಶಕಿಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಹರಿಬಿಡಲಾಯಿತು. ಅಲ್ಲದೆ, ಪಲಾಶ್​ ಮತ್ತು ಮುಚ್ಚಲ್​ ಚಾಟ್​ ಮಾಡಿದ್ದಾರೆ ಎನ್ನಲಾದ ಸ್ಕ್ರೀನ್‌ಶಾಟ್‌ಗಳನ್ನು ಸಹ ಹರಿಬಿಡಲಾಯಿತು. ಇದರಲ್ಲಿ ಪಲಾಶ್ ಅವರು ಸ್ಮೃತಿಯ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಮಾಡಿದ್ದಾರೆ. ಆಕೆ ತನಗೆ ಸರಿಯಾಗಿ ಟೈಂ ಕೊಡುತ್ತಿಲ್ಲ ಎಂದು ಪಲಾಶ್​ ಹೇಳಿಕೊಂಡಿದ್ದಾರೆ. ಅಲ್ಲದೆ, ತನ್ನೊಂದಿಗೆ ಡೇಟ್​ ಮಾಡುವಂತೆ ಪಲಾಶ್​ ಕೇಳಿಕೊಂಡಿದ್ದಾರೆ. ಆದರೆ, ವೈರಲ್​ ಆಗಿರುವ ಸ್ಕ್ರೀನ್​ಶಾಟ್​ಗಳ ಬಗ್ಗೆ ಯಾವುದೇ ದೃಢೀಕರಣವಿಲ್ಲ. ಅದೊಂದು ವದಂತಿಯಾಗಿದೆ.
ಪಲಾಶ್​ ಬಗ್ಗೆ ತಿಳಿದ ಸ್ಮೃತಿಯ ತಂದೆ ಶ್ರೀನಿವಾಸ್​ ನವೆಂಬರ್​ 22ರ ರಾತ್ರಿಯೇ ಪಲಾಶ್ ಅವರನ್ನು ಎದುರಿಸಿ, ಪ್ರಶ್ನಿಸಿದ್ದಾರೆ ಎನ್ನಲಾಗುತ್ತಿದೆ. ಈ ವೇಳೆ ದೊಡ್ಡದಾಗಿ ಜಗಳ ಜಡೆದಿದೆ. ಎರಡೂ ಕುಟುಂಬಸ್ಥರ ನಡುವೆ ವಾಗ್ವಾದ ನಡೆದಿದ್ದು, ಈ ವೇಳೆ ಶ್ರೀನಿವಾಸ್​ ಅವರಿಗೆ ಹೃದಯಾಘಾತವಾಗಿದೆ ಎಂದು ಗಾಸಿಪ್ ಹರಡುತ್ತಿದ್ದಾರೆ.
ಮದುವೆ ಮುಂದೂಡಿಕೆಯ ಸ್ವಲ್ಪ ಸಮಯದ ನಂತರ, ಸ್ಮೃತಿ ತನ್ನ ಇನ್‌ಸ್ಟಾಗ್ರಾಮ್ ಖಾತೆಯಿಂದ ಮದುವೆಗೆ ಸಂಬಂಧಿಸಿದ ಎಲ್ಲಾ ಪೋಸ್ಟ್‌ಗಳನ್ನು ಅಳಿಸಿಹಾಕಿರುವುದನ್ನು ಅಭಿಮಾನಿಗಳು ಗಮನಿಸಿದರು, ಅದರಲ್ಲಿ ಅವರ ನಿಶ್ಚಿತಾರ್ಥ ಮತ್ತು ಪ್ರಪೋಸಲ್ ಫೋಟೋಗಳು ಸೇರಿವೆ. ಆದರೆ ಈ ಎಲ್ಲ ಸುದ್ದಿಗಳ ನಡಿವೆ ಮತ್ತೆ ಇಬ್ಬರು ಮದುವೆ ಆಗುತ್ತಾರೆ ಎನ್ನಲಾಗುತ್ತಿದೆ. ಆದರೆ ಈ ಕುರಿತಾಗಿ ಯಾವುದೇ ಖಚಿತ ಮಾಹಿತಿ ಇಲ್ಲ.