ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ 
ದೇಶ

ಜ್ಞಾನೇಶ್ ಹೋಗ್ತಾರೆ, ಮೋದಿ ಸರ್ಕಾರವೂ ಹೋಗಲಿದೆ; ಬಳಿಕ ಪ್ರಜಾಪ್ರಭುತ್ವದ ದುರಸ್ತಿ ಕಾರ್ಯ ಶುರು : ರಾಹುಲ್ ಗಾಂಧಿ | Rahul Gandhi

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೋಗ್ತಾರೆ, ನರೇಂದ್ರ ಮೋದಿ ಸರ್ಕಾರವು ಹೋಗಲಿದೆ. ಬಳಿಕ ದೇಶದಲ್ಲಿ ಪ್ರಜಾಪ್ರಭುತ್ವದ ದುರಸ್ತಿ ಕಾರ್ಯ ಆರಂಭವಾಗಲಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೋಗ್ತಾರೆ, ನರೇಂದ್ರ ಮೋದಿ ಸರ್ಕಾರವು ಹೋಗಲಿದೆ. ಬಳಿಕ ದೇಶದಲ್ಲಿ ಪ್ರಜಾಪ್ರಭುತ್ವದ ದುರಸ್ತಿ ಕಾರ್ಯ ಆರಂಭವಾಗಲಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಶನಿವಾರ(ಅ. 10) ಸಿಜೆಪಿ ಪ್ರತಿಭಟನೆಗೂ ಮುನ್ನವೇ ದೆಹಲಿಯಲ್ಲಿ ರೈಲು, ಮೆಟ್ರೋ ಸ್ಟೇಷನ್ ಬಂದ್ ಹಿನ್ನೆಲೆ ಎಕ್ಸ್​ನಲ್ಲಿ ಪೋಸ್ಟ್ ಹಾಕಿರುವ ಅವರು, ಜ್ಞಾನೇಶ್ ಕುಮಾರ್ ಹೋಗುತ್ತಾರೆ. ಈ ಸರ್ಕಾರ ಹೋಗುತ್ತದೆ. ಆಗ ಪ್ರಜಾಪ್ರಭುತ್ವದ ದುರಸ್ತಿ ಕಾರ್ಯ ಆರಂಭವಾಗುತ್ತದೆ ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್​ನಲ್ಲಿ ಶುಕ್ರವಾರ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ 'ಇಂಡಿಯಾ' ಮೈತ್ರಿಕೂಟದ ಸಂಸದರನ್ನು ಉದ್ದೇಶಿಸಿ ಅವರು ಮಾಡಿದ ಭಾಷಣದ ವಿಡಿಯೋವನ್ನೂ ಹಂಚಿಕೊಂಡಿದ್ದಾರೆ. ಅದರಲ್ಲಿ ಸಿಇಸಿ ಜ್ಞಾನೇಶ್​ ಕುಮಾರ್​ಗಿಂತಲೂ ಹೆಚ್ಚು ಆಳವಾದ ಸಮಸ್ಯೆಯೊಂದು ಇದೆ. ಅದಕ್ಕೆ ಪ್ರಸ್ತುತ ಸರ್ಕಾರವನ್ನು ಕಿತ್ತೊಗೆಯುವ ಅಗತ್ಯವಿದೆ ಎಂದು ಹೇಳಿದ್ದಾರೆ.

ವಿರೋಧ ಪಕ್ಷಗಳ ಪ್ರತಿಭಟನೆಗಳು ಈ ಸರ್ಕಾರದ ಅಡಿಪಾಯವನ್ನೇ ಅಲ್ಲಾಡಿಸಿವೆ. ಮತ್ತು ಸರ್ಕಾರ ಈಗ ಭಯಭೀತಗೊಂಡಿದೆ. ಕಳೆದ ಕೆಲವು ದಿನಗಳಿಂದ ವಿರೋಧ ಪಕ್ಷಗಳು ನಡೆಸುತ್ತಿರುವ ರೀತಿಯಲ್ಲೇ ಹೋರಾಟವನ್ನು ಮುಂದುವರಿಸಿದರೆ ಈ ಸರ್ಕಾರ ಪತನಗೊಳ್ಳಲಿದೆ ಎಂದು ಪ್ರತಿಪಾದಿಸಿದ್ದಾರೆ.

ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಕಳೆದ 10 ತಿಂಗಳುಗಳಲ್ಲಿ ಕನಿಷ್ಠ 14 ಬಾರಿ ಅಧಿಕೃತವಾಗಿ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದ್ದರು. ಮುಖ್ಯವಾಗಿ ಮತದಾರರ ಪಟ್ಟಿಯ ಎಸ್​ಐಆರ್​ಗೆ ಸಂಬಂಧಿಸಿದ ನಿರ್ಧಾರಗಳು ಮತ್ತು ಆದೇಶಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದ ಬಳಿಕ ವಿಪಕ್ಷಗಳು ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿವೆ (ಏಜೆನ್ಸೀಸ್).