ಸಾಂದರ್ಭಿಕ ಚಿತ್ರ 
ದೇಶ

ಹೃದಯ ವಿದ್ರಾವಕ ಘಟನೆ; ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರ ಆತ್ಮಹ* | Suicide

ಅಮರಾವತಿ: ಆಂಧ್ರ ಪ್ರದೇಶದ ವಿಶಾಖಪಟ್ಟಂ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾರೆ ಎಂದು ಶನಿವಾರ(ಆ. 29) ವರದಿಯಾಗಿದೆ.
ಪೆಂಡುರ್ತಿ ಮಂಡಲದ ಚಿಂತಲಗ್ರಹರಂ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಮಲ್ಲ ವಿನೋದ್ ಕುಮಾರ್ ಎಂಬ ವ್ಯಕ್ತಿ ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಕ್ಷಣಕ್ಕೆ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಸ್ಥಳೀಯರು ಮಾಹಿತಿ ನೀಡಿದ ಮೇರೆಗೆ ಪೊಲೀಸರು ಸ್ಥಳಕ್ಕೆ ಪರಿಶೀಲನೆ ನಡೆಸಿದ್ದು, ಶವಗಳನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ವಿನೋದ್ ಕುಮಾರ್ ಮೊದಲು ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳಿಗೆ ವಿಷ ನೀಡಿ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ.
ಈ ಕುರಿತು ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆ ಘಟನೆಯ ಹಿಂದಿನ ಕಾರಣ ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ (ಏಜೆನ್ಸೀಸ್).