ರಾಹುಲ್ ಗಾಂಧಿ 
ದೇಶ

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ಹೂಡಿದ್ದ ಮಾನಹಾನಿ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್​ | Rahul Gandhi

ಬೆಂಗಳೂರು: 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ(Rahul Gandhi) ವಿರುದ್ಧ ಬಿಜೆಪಿ ನಾಯಕರು ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಇಂದು(ಫೆ. 17) ರದ್ದುಗೊಳಿಸಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಶೇ. 40ರಷ್ಟು ಕಮಿಷನ್ ಹಾಗೂ ಸರಣಿ ಭ್ರಷ್ಟಾಚಾರ ಆರೋಪ ಮಾಡಿ ಪತ್ರಿಕೆಗಳಿಗೆ ಜಾಹೀರಾತು ನೀಡಿದ್ದ ಕಾಂಗ್ರೆಸ್. ಆ ಜಾಹೀರಾತುಗಳನ್ನು ಎಕ್ಸ್ ಪೋಸ್ಟ್ ಮೂಲಕ ರಾಹುಲ್ ಗಾಂಧಿ ಹಂಚಿಕೊಂಡಿದ್ದರು. 
ಆಧಾರಹಿತ ಜಾಹೀರಾತುಗಳನ್ನು ಹಂಚಿಕೊಂಡು ಪ್ರಚಾರ ಮಾಡ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕರು ರಾಹುಲ್ ಗಾಂಧಿ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್​​ನಲ್ಲಿ ಮಾನಹಾನಿ ಪ್ರಕರಣ ಹೂಡಿದ್ದರು. ಅದನ್ನು ರದ್ದು ಪಡಿಸುವಂತೆ ಕೋರಿ ರಾಹುಲ್ ಪರ ವಕೀಲರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.
ರಾಹುಲ್ ಗಾಂಧಿ ಅರ್ಜಿಯನ್ನು ಪುರಸ್ಕರಿಸಿರುವ ಹೈಕೋರ್ಟ್​ನ ನ್ಯಾ.ಸುನೀಲ್ ದತ್ತ ಯಾದವ್ ನೇತೃತ್ವದ ಪೀಠ ಅವರ ವಿರುದ್ಧದ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.