ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿ ಸೋಮವಾರ(ಡಿ. 29) ರಾತ್ರಿ 10 ಗಂಟೆ ಸುಮಾರಿಗೆ ಭೀಕರ ಅಪಘಾತ(Accident) ಸಂಭವಿಸಿದ್ದು, ಬೆಸ್ಟ್ ಬಸ್ ಹಿಮ್ಮುಖವಾಗಿ ಚಲಿಸುತ್ತಿದ್ದಾಗ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, 9 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಮುಂಬೈನ ಭಾಂಡಪ್‌ನಲ್ಲಿ ಈ ಘಟನೆ ನಡೆದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೃಹನ್ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆಯ ಸಂಕ್ಷಿಪ್ತ ರೂಪವಾದ ಬೆಸ್ಟ್, ದೇಶದ ಅತಿದೊಡ್ಡ ಸಾರ್ವಜನಿಕ ಬಸ್ ಫ್ಲೀಟ್ ಅನ್ನು ನಡೆಸುತ್ತದೆ.
ಈ ಕುರಿತು ಮಾಹಿತಿ ನೀಡಿರುವ ಮುಂಬೈ ಪೊಲೀಸರು, ಚಾಲಕ ಬಸ್ ಅನ್ನು ಅದರ ಮಾರ್ಗದ ಕೊನೆಯಲ್ಲಿ ಹಿಮ್ಮುಖವಾಗಿ ಚಲಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಬಸ್ ಚಾಲಕನಿಂದ ನಿಯಂತ್ರಣ ಕಳೆದುಕೊಂಡಿದೆ. ತಕ್ಷಣ ಪೊಲೀಸ್ ಸಿಬ್ಬಂದಿ ಸ್ಥಳಕ್ಕಾಗಮಿಸಿ ಗಾಯಗೊಂಡವರನ್ನು ರಕ್ಷಿಸಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲಾಗದೆ ಎಂದು ಹೇಳಿದ್ದಾರೆ.
ಅಪಘಾತದ ಸಮಯದಲ್ಲಿ ಬೆಸ್ಟ್ ಸಿಬ್ಬಂದಿ ಚಾಲಕ ಸಂತೋಷ್ ರಮೇಶ್ ಸಾವಂತ್ ಬಸ್ ಚಲಾಯಿಸುತ್ತಿದ್ದರು, ಭಗವಾನ್ ಭಾವು ಘರೆ ಕಂಡಕ್ಟರ್ ಆಗಿದ್ದರು. ಅಪಘಾತಕ್ಕೆ ಕಾರಣವಾದ ಬಗ್ಗೆ ತನಿಖೆ ನಡೆಸುತ್ತಿದೆ. ಇದರಲ್ಲಿ ಯಾಂತ್ರಿಕ ವೈಫಲ್ಯ ಅಥವಾ ಇತರ ಅಂಶಗಳು ಸೇರಿವೆ ಎಂದು ತಿಳಿಸಿದ್ದಾರೆ.
ಇನ್ನೂ ಘಟನೆ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್, ಈ ಘಟನೆ ಅತ್ಯಂತ ದುರದೃಷ್ಟಕರ, ಮೃತರ ಆತ್ಮಕ್ಕೆ ಶಾಂತಿ ಕೋರಿ, ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ (ಏಜೆನ್ಸೀಸ್).